Author: kannadanewslive

ಕೊಚ್ಚಿ: ಇಲ್ಲಿನ ನೆಡುಂಬಾಶ್ಶೇರಿ ವಿಮಾನ ನಿಲ್ದಾಣದಲ್ಲಿ ( Nedumbassery airport ) ಭಾನುವಾರ ಭಾರತೀಯ ಕೋಸ್ಟ್ ಗಾರ್ಡ್ (Indian Coast Guard – ICG) ಹೆಲಿಕಾಪ್ಟರ್ ಟೇಕ್ ಆಫ್ ಆಗುವ ವೇಳೆ ಅಪಘಾತಕ್ಕೀಡಾಗಿದೆ. ಮೂಲಗಳ ಪ್ರಕಾರ, ಹೆಲಿಕಾಪ್ಟರ್ನಲ್ಲಿ ಮೂವರು ಕೋಸ್ಟ್ ಗಾರ್ಡ್ ಸಿಬ್ಬಂದಿ ಇದ್ದರು. ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆಯ ನಂತರ ವಿಮಾನ ನಿಲ್ದಾಣವನ್ನು ಮುಚ್ಚಲಾಯಿತು.  ವಿಮಾನಗಳನ್ನು ಹತ್ತಿರದ ಇತರ ವಿಮಾನ ನಿಲ್ದಾಣಗಳಿಗೆ ತಿರುಗಿಸಲಾಯಿತು. ಮಧ್ಯಾಹ್ನ 12.30ರ ಸುಮಾರಿಗೆ ತರಬೇತಿ ಹಾರಾಟದ ಸಮಯದಲ್ಲಿ ಹೆಲಿಕಾಪ್ಟರ್ ಟೇಕ್ ಆಫ್ ಆದ ಕೂಡಲೇ ಅಪಘಾತಕ್ಕೀಡಾದ ನಂತರ ಈ ಘಟನೆ ನಡೆದಿದೆ. ಆದ್ದರಿಂದ ಅಪಘಾತದ ಪರಿಣಾಮವು ಸಾಧ್ಯವಾದಷ್ಟು ವಿನಾಶಕಾರಿಯಾಗಿಲ್ಲ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ರನ್ ವೇ ಬಳಿ ನಡೆದ ಘಟನೆಯ ನಂತರ, ವಿಮಾನ ನಿಲ್ದಾಣವನ್ನು ಮುಚ್ಚಲಾಯಿತು ಮತ್ತು ಅಪಘಾತಕ್ಕೀಡಾದ ಹೆಲಿಕಾಪ್ಟರ್ ಅನ್ನು ತೆಗೆದುಹಾಕುವ ಪ್ರಯತ್ನಗಳು ಈಗಾಗಲೇ ನಡೆಯುತ್ತಿವೆ. ಮಧ್ಯಾಹ್ನ 3 ಗಂಟೆ ವೇಳೆಗೆ ವಿಮಾನ ನಿಲ್ದಾಣ ತೆರೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

Read More

ಶಿವಮೊಗ್ಗ: ಮಹಿಳೆಯರ ಆರೋಗ್ಯ ತಪಾಸಣೆಗಾಗಿ ( Women’s health check-up ) ನಾಳೆ ಬೆಳಿಗ್ಗೆ ನಗರದ ನಾಲ್ಕು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಯುಷ್ಮಾನ್ ಕ್ಲಿನಿಕ್ ( Ayushman Clinic ) ಪ್ರಾರಂಭಿಸಲಾಗುತ್ತಿದೆ. ಈ ಬಗ್ಗೆ ಮಾಹಿತಿ ನೀಡಿರುವಂತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ ( DHO Dr Rajesh Suragihalli ) ಅವರು, ದಿನಾಂಕ 27.03.23 ರ ಸೋಮವಾರ ಬೆಳಿಗ್ಗೆ 11.30 ಗಂಟೆಗೆ ಶಿವಮೊಗ್ಗ ಜಿಲ್ಲೆಯ ನಾಲ್ಕು ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶಿವಮೊಗ್ಗದಲ್ಲಿ ತುಂಗಾನಗರ, ಸೀಗೆಹಟ್ಟಿ, ಬೊಮ್ಮನಕಟ್ಟೆ ಹಾಗೂ ಭದ್ರಾವತಿ ತಾಲ್ಲೂಕಿನ ಅಶ್ವಥನಗರ ಗಳಲ್ಲಿ ಮಹಿಳೆಯರ ವಿಶೇಷ ಆರೋಗ್ಯ ತಪಾಷಣೆಗಾಗಿ ಆಯುಷ್ಮತಿ ಕ್ಲಿನಿಕ್ ಪ್ರಾರಂಭಿಸಲಾಗುತ್ತಿದೆ ಎಂದಿದ್ದಾರೆ. ಸ್ವಸ್ಥ ಮಹಿಳೆಯರು, ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ ಎಲ್ಲಾ ತಜ್ಞ ವೈದ್ಯರಿಂದ ಪ್ರತಿ ದಿನಾ ಮಹಿಳೆಯರ ಆರೋಗ್ಯ ತಪಾಷಣೆ ಮಾಡಲಾಗುತ್ತದೆ ರಾಜ್ಯದಲ್ಲಿ ಒಟ್ಟು 95 ಆಯುಷ್ಮತಿ ಕ್ಲಿನಿಕ್ ಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾಗೂ ಆರೋಗ್ಯ ಸಚಿವರಾದ…

Read More

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಅವರು ನಾಳೆ ನಟ, ಮಾಜಿ ಸಚಿವ ಅಂಬರೀಶ್ ಅವರ ಸ್ಮಾರಕವನ್ನು ( Actor Ambareesh ) ಲೋಕಾರ್ಪಣೆಗೊಳಿಸಲಿದ್ದಾರೆ. ಈ ಮೂಲಕ ಅಂಬರೀಶ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ನಾಳೆ ಸಂಜೆ 6 ಗಂಟೆಗೆ ನಟ ಅಂಬರೀಶ್ ಸ್ಮಾರಕವನ್ನು ಬೆಂಗಳೂರಿನ ಕಂಠೀರವ ಸ್ಟೂಡಿಯೋದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಲೋಕಾರ್ಪಣೆಗೊಳಿಸಲಿದ್ದಾರೆ. ಈ ಮೂಲಕ ನಟ ಅಂಬರೀಶ್ ಸ್ಮಾರಕ ಸಾರ್ವಜನಿಕರ ವೀಕ್ಷಣೆಗೂ ಲಭ್ಯವಾಗಲಿದೆ. ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ಹೇಳಿದ್ದರು. ಅದರಂತೆ ನಾಳೆ ನಟ ಅಂಬರೀಶ್ ಅವರ ಸ್ಮಾರಕವನ್ನು ಬಸವರಾಜ ಬೊಮ್ಮಾಯಿ ಅವರು ಲೋಕಾರ್ಪಣೆ ಮಾಡಲಿದ್ದಾರೆ. ನಟ ಅಂಬರೀಶ್ ಸ್ಮಾರಕ ನಿರ್ಮಾಣ ಅವರ ಅಭಿಮಾನಿಗಳ ಬಹುದಿನದ ಬೇಡಿಕೆಯಾಗಿತ್ತು. ಈ ಬೇಡಿಕೆ ನಾಳೆ ಅಧಿಕೃತವಾಗಿ ನಟ ಅಂಬರೀಶ್ ಸ್ಮಾರಕ ಲೋಕಾರ್ಪಣೆಯಾಗಲಿದೆ. ಚುನಾವಣೆ ಘೋಷಣೆಯಾದ ನಂತ್ರ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ – ಸಿಎಂ ಬೊಮ್ಮಾಯಿ ಘೋಷಣೆ ಹುಬ್ಬಳ್ಳಿ :…

Read More

ಹಾವೇರಿ : ಕಳೆದ ನಾಲ್ಕು ವರ್ಷಗಳಲ್ಲಿ ಪ್ರತಿ ವರ್ಷ ಖಾಸಗಿ ವಲಯದಲ್ಲಿ 13 ಲಕ್ಷ ಉದ್ಯೋಗ ( Jobs ) ಸೃಷ್ಟಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ಅವರು ಇಂದು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಕಲ್ಯಾಣ ಗ್ರಾಮದ ಜಿಟಿಟಿಸಿ ನಿವೇಶನದ ಬಳಿ ಆಯೋಜಿಸಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಹಾಗೂ ಕಲ್ಯಾಣ ಗ್ರಾಮದಲ್ಲಿ ನೂತನ ತರಬೇತಿ ಸಂಕೀರ್ಣ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಈ ಮಾಹಿತಿ ಪ್ರಾವಿಡೆಂಟ್ ಫಂಡ್ ಮತ್ತು ಇ. ಎಸ್.ಐ ನಲ್ಲಿ ದಾಖಲಾಗಿರುವ 18 ರಿಂದ 25 ವರ್ಷಗಳೊಳಗಿನವರು ದಾಖಲಿಸಿಕೊಂಡಿರುವುದನ್ನು ಆಧರಿಸಿ, ಅಧ್ಯಯನ ಮಾಡಿ ಮಾಹಿತಿ ನೀಡಲಾಗಿದೆ ಎಂದರು. ಅನುತ್ತೀರ್ಣರಾದವರಿಗೂ ಅವಕಾಶ ಕೇವಲ ಇಂಜಿನಿಯರಿಂಗ್, ಐ.ಟಿ ಬಿಟಿ ಕಲಿತವರಿಗಷ್ಟೇ ಅಲ್ಲ, ಪಿಯುಸಿ ಅನುತ್ತೀರ್ಣರಾದವರಿಗೆ ( PUC Pass ) ಕೆಲಸ ದೊರೆಯಬೇಕು, ಆಗ ಮಾತ್ರ ಗ್ರಾಮೀಣ ಪ್ರದೇಶಗಳಲ್ಲಿ ಅಭಿವೃದ್ಧಿ ಸಾಧ್ಯ ಎಂದು ಹಲವು ಯೋಜನೆ ರೂಪಿಸಲಾಗಿದೆ…

Read More

ಹುಬ್ಬಳ್ಳಿ : ತುಳಿತಕ್ಕೊಳಗಾದ ಜನಾಂಗಗಳಿಗೆ ನ್ಯಾಯ ದೊರಕಿಸುವವರೆಗೂ ವಿಶ್ರಮಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಜೇನುಗೂಡಿಗೆ ಕೈಹಾಕಬೇಡಿ ಎಂದು ಬಹಳಷ್ಟು ಜನ ಹೇಳಿದ್ದರೂ ನಾವು ತುಳಿತಕ್ಕೆ ಒಳಗಾಗಿರುವ ಜನರಿಗೆ ಜೇನುತುಪ್ಪ ದೊರೆಯಲಿ ಎಂದು ಒಳಮೀಸಲಾತಿಯ ನಿರ್ಧಾರ ಮಾಡಲಾಗಿದೆ ಎಂದರು. ಬದ್ಧತೆಯಿದೆ ಮೀಸಲಾತಿ ವಿಚಾರದಲ್ಲಿ ಬೇಡಿಕೆ ಸುಮಾರು 30 ವರ್ಷಗಳಿಂದ ಇದೆ. ಕಾಂಗ್ರೆಸ್ ಅವರಿಗೆ ಆಶ್ವಾಸನೆಗಳನ್ನು ನೀಡಿ ಮೂಗಿಗೆ ತುಪ್ಪ ಹಚ್ಚಿ ಕೊನೆಗೆ ಗಳಿಗೆಯಲ್ಲಿ ಕೈಕೊಟ್ಟಿತು. ಬಿಜೆಪಿಗೆ ಮಾಡಲು ಸಾಧ್ಯವಿಲ್ಲ ಎಂದು ತಿಳಿದಿದ್ದರು. ಆದರೆ ನಮಗೆ ಬದ್ಧತೆಯಿದೆ. ವರದಿ ತರಿಸಿ, ಅಧ್ಯಯನ ಮಾಡಿ, ಸಂಪುಟ ಉಪ ಸಮಿತಿ ರಚಿಸಿ, ಕಾನೂನಿನ ಪ್ರಕಾರ ವ್ಯವಸ್ಥಿತವಾಗಿ ತೀರ್ಮಾನ ಮಾಡಲಾಗಿದೆ ಎಂದರು. ಕಾಂಗ್ರೆಸ್ ನವರು ಹತಾಶರಾಗಿದ್ದಾರೆ ಕಾಂಗ್ರೆಸ್ ನವರಿಗೆ ( Congress ) ನಾವು ಮಾಡದಿದ್ದುದ್ದನ್ನು ಬಿಜೆಪಿ ಮಾಡಿದೆ ಎಂಬ ಹತಾಶ ಮನೋಭಾವ ದಿಂದ ಮಾತನಾಡುತ್ತಿದ್ದಾರೆ. ಅದಕ್ಕೆ ಕಿಮ್ಮತ್ತಿಲ್ಲ. ಅವರು…

Read More

ಚಿತ್ರದುರ್ಗ: ಜಿಲ್ಲೆಯ ವಿಧಾನ ಸಭಾ ಕ್ಷೇತ್ರಕ್ಕೆ ( Karnataka Assembly Election 2023 ) ಕರ್ನಾಟಕ ರಾಜ್ಯ ಕಾಡುಗೊಲ್ಲರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾದ್ಯಕ್ಷರು ಚಿತ್ರದುರ್ಗ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು ಹಾಗೂ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ (Congress Party ) ಮಾಜಿ ಕಾರ್ಯಾದ್ಯಕ್ಷರಾದ ಕಾಂಗ್ರೆಸ್ ಪಕ್ಷದ ಕೆಚ್ಚೆದೆಯ ನಿಷ್ಠಾವಂತ ಕಾರ್ಯಕರ್ತರಾದ ಸಿ ಶಿವು ಯಾದವ್ ( C Shivu Yadav ) ಅವರಿಗೆ ಈ ಬಾರಿ ಟಿಕೇಟ್ ನೀಡಬೇಕೆಂದು ಚಳ್ಳಕೆರೆ ತಾಲ್ಲೂಕು ಕಾಡುಗೊಲ್ಲರ ಕ್ಷೇಮಾಭಿವೃದ್ಧಿ ಸಂಘದ ಮುಖಂಡರು ಮಾಜಿ ಸಿಎಂ ಸಿದ್ಧರಾಮಯ್ಯ ( Siddaramaiah ), ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ( DK Shivakumar ) ಅವರನ್ನು ಒತ್ತಾಯಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಚಳ್ಳಕೆರೆ ತಾಲೂಕು ಕಾಡುಗೊಳ್ಳ ಕ್ಷೇಮಾಭಿವೃದ್ಧಿ ಸಂಘದ ಮುಖಂಡರು, ಕಳೆದ 2013 ಮತ್ತು 2018 ಕಾಂಗ್ರೆಸ್ ಪಕ್ಷವು ಟಿಕೆಟ್ ನೀಡುವ ಭರವಸೆಯನ್ನು ನೀಡಿ ಕೊನೆಯಲ್ಲಿ ಬೇರೆಯರಿಗೆ ಬಿ ಪಾರಂ ನೀಡಲಾಗಿತ್ತು. 2023 ಕ್ಕೆ…

Read More

ಮಂಡ್ಯ: ‘ಜೆಡಿಎಸ್ ( JDS ) ಭದ್ರಕೋಟೆ ಗೋಡೆ ಹೊಡೆದಿದೆ ಛಿದ್ರ ಮಾಡದೋಂದೆ ಭಾಕಿ ಎಂಬುದಾಗಿ ಹೇಳುವ ಮೂಲಕ ದಳಪತಿಗಳಿಗೆ ಸಂಸದೆ ಸುಮಲತಾ ( MP Sumalatha ) ಟಕ್ಕರ್ ಕೊಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದಂತ ಅವರು, ನನ್ನ ಚುನಾವಣೆಯಲ್ಲೆ ಜೆಡಿಎಸ್ ಭದ್ರಕೋಟೆಯ ಗೋಡೆ ಹೊಡೆದೊಗಿದೆ. ಕೆ.ಆರ್.ಪೇಟೆ ಬೈ ಎಲೆಕ್ಸನ್ ನಲ್ಲೂ ಜೆಡಿಎಸ್ ಸೋತಿದ್ದಾರೆ. ಈಗ ಮತ್ತೆ ಈ ಚುನಾವಣೆಯಲ್ಲಿ ಜೆಡಿಎಸ್ ಭದ್ರಕೋಟೆಯನ್ನ ಛೀದ್ರ ಮಾಡುವ ಟೈಮ್ ಬಂದಿದೆ. ಆದ್ರೆ ನಾವೇಲ್ಲರು ಮನಸ್ಸು ಮಾಡಬೇಕು ಅಷ್ಟೆ. ಸದುದ್ದೇಶ ಇಟ್ಟಿಕೊಂಡು ಕೆಲಸ ಮಾಡುದ್ರೆ ಖಂಡಿತ ಜಯ ಸಿಗುತ್ತದೆ. ಇದನ್ನ ನಾನು ನನ್ನ ಚುನಾವಣೆಯಲ್ಲಿ ಕಲ್ತಿದ್ದೇನೆ ಎಂದರು. ನನ್ನ ಆಸೆ ಏನು ಅಂದ್ರೆ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಏನು ಅಂತ ತೋರಿಸಬೇಕು. ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಬಾವುಟ ಹಾರಿಸಬೇಕು. ಮುಖ್ಯವಾಗಿ ನಮ್ಮ ಸ್ವಂತ ಊರು ಮದ್ದೂರು ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಿಸಬೇಕು. ಆ ಶಕ್ತಿ ನಮ್ಮಲ್ಲಿದೆ,…

Read More

ಬೆಂಗಳೂರು: ದಾವಣಗೆರೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ವೇಳೆಯಲ್ಲಿ ಭದ್ರತಾ ಲೋಪ ಉಂಟಾಗಿದೆ ಎನ್ನಲಾಗುತ್ತಿತ್ತು. ಆದ್ರೇ ಆ ರೀತಿಯ ಭದ್ರತಾ ಲೋಪ ಉಂಟಾಗಿಲ್ಲ. ಖುದ್ದು ಮೋದಿ ರೋಡ್ ಶೋ ಬಳಿಕ ಬರಲು ಯತ್ನಿಸಿದಂತ ಯುವನನ್ನು ಹಿಡಿದು, ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂಬುದಾಗಿ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಅಲೋಕ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು, ಇಂದು ದಾವಣಗೆರೆಯಲ್ಲಿ ಗೌರವಾನ್ವಿತ ಪ್ರಧಾನಿಯವರ ಭದ್ರತೆಯಲ್ಲಿ ಉಲ್ಲಂಘನೆಯಾಗಿದೆ ಎಂಬುದಾಗಿ ಹೇಳಲಾಗುತ್ತಿದೆ. ಆದ್ರೇ ಆ ರೀತಿಯ ಯಾವುದೇ ಭದ್ರತಾ ಉಲ್ಲಂಘನೆಯಾಗಿಲ್ಲ ಎಂದಿದ್ದಾರೆ. ಯುವಕನೋರ್ವ ಬ್ಯಾರಿಕೇಡ್ ಜಿಗಿದು ರೋಡ್ ಶೋ ದೂರವಿದ್ದಾಗಲೇ ಬರಲು ಯತ್ನಿಸಿದನು. ಅದೊಂದು ವಿಫಲ ಪ್ರಯತ್ನವಾಗಿತ್ತು. ಆತನನ್ನು ನಾನು ಹಾಗೂ ಎಸ್ ಪಿ ಜಿ ಹಿಡಿದು ದೂರ ಕಳುಹಿಸಿ, ಕಾನೂನು ಕ್ರಮ ಕೈಗೊಳ್ಳಲಾಗಿದೆ. ಇದರ ಹೊರತಾಗಿ ಯಾವುದೇ ಭದ್ರತಾ ಲೋಪ ಆಗಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. https://twitter.com/alokkumar6994/status/1639640502462214147

Read More

ಬೆಂಗಳೂರು: ದೇಶಾದ್ಯಂತ ಕೊರೋನಾ ಪ್ರಕರಣಗಳ ( Corona Case ) ಸಂಖ್ಯೆ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ, ಕರ್ನಾಟಕದಲ್ಲೂ ಕೋವಿಡ್ ಕೇಸ್ ದರ ಹೆಚ್ಚಳವಾಗುತ್ತಿವೆ. ಇಂದು ಹೊಸದಾಗಿ 155 ಮಂದಿಗೆ ಕೋವಿಡ್ ಪಾಸಿಟಿವ್ ( Covid19 Positive ) ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕೊರೋನಾ ಹೆಲ್ತ್ ಬುಲೆಟಿನ್ ಪ್ರಕಟಿಸಿದ್ದು, ಕಳೆದ 24 ಗಂಟೆಯಲ್ಲಿ ರಾಜ್ಯಾಧ್ಯಂತ 8,494 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಯಿತು. ಇವರಲ್ಲಿ 155 ಮಂದಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಲ್ಲಿ ದೃಢಪಟ್ಟಿದೆ ಎಂದು ತಿಳಿಸಿದೆ. ಕಳೆದ 24 ಗಂಟೆಯಲ್ಲಿ ಬಳ್ಳಾರಿಯಲ್ಲಿ 09, ಬೆಂಗಳೂರು ಗ್ರಾಮಾಂತರ 05, ಬೆಂಗಳೂರು ನಗರ 58, ಬೀದರ್ 01, ಚಿಕ್ಕಬಳ್ಳಾಪುರ 02, ಚಿಕ್ಕಮಗಳೂರು 01, ದಕ್ಷಿಣ ಕನ್ನಡ 02, ಧಾರವಾಡ 03, ಹಾಸನ 07, ಹಾವೇರಿ 02, ಕಲಬುರ್ಗಿ 07, ಕೊಡಗು 01 ಜನರಿಗೆ ಕೋವಿಡ್ ದೃಢಪಟ್ಟಿದೆ. ರಾಯಚೂರು 01, ಶಿವಮೊಗ್ಗ 41, ಉಡುಪಿ, ಉತ್ತರ ಕನ್ನಡ ಹಾಗೂ…

Read More

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ( Karnataka Police Department ) ಖಾಲಿ ಇದ್ದಂತ ಸ್ಪೆಷಲ್ ರಿಸರ್ವ್ ಸಬ್ ಇನ್ಸ್ ಪೆಕ್ಟ್, ಆರ್ ಎಸ್ ಐ ಹಾಗೂ ಕೆಎಸ್ಐಎಸ್ಎಫ್ ನ ಪಿಎಸ್ಐ ಹುದ್ದೆಗಳ ನೇಮಕಾತಿಗೆ ( PSI Recruitment ) ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಸಂಬಂಧ ಮಾಹಿತಿ ನೀಡಿರುವಂತ ಡಿಐಜಿ ಕಮಲ್ ಪಂತ್ ಅವರು, ಕೆ ಎಸ್ಐಎಸ್ಎಫ್ ನಲ್ಲಿ ಖಾಲಿ ಇದ್ದಂತ ಪೊಲೀಸ್ ಸಬ್ ಇನ್ಸ್ ಪೆಕ್ಟರ್ 63 ಹುದ್ದೆಗಳು, ಆರ್ಮಡ್ ರಿಸರ್ವ್ ಸಬ್ ಇನ್ಸ್ ಪೆಕ್ಟರ್ 71 ಹುದ್ದೆಗಳು ಹಾಗೂ ಸ್ಪೆಷಲ್ ರಿಸರ್ವ್ ಸಬ್ ಇನ್ಸ್ ಪೆಕ್ಟರ್ 70 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿರುವುದಾಗಿ ತಿಳಿಸಿದ್ದಾರೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ, ವಿವಿಧ ಪರೀಕ್ಷೆಯನ್ನು ತೇರ್ಗಡೆಯಾಗಿ, ಆಯ್ಕೆಗಾಗಿ ಕಾಯುತ್ತಿದ್ದಂತ ಅಭ್ಯರ್ಥಿಗಳು https://ksp.karnataka.gov.in/english ಈ ಲಿಂಕ್ ಕ್ಲಿಕ್ ಮಾಡುವ ಮೂಲಕ ತಮ್ಮ ಆಯ್ಕೆಯನ್ನು ಪರಿಶೀಲಿಸಬಹುದಾಗಿದೆ. ಇಲ್ಲವೇ ಹೆಚ್ಚಿನ ಮಾಹಿತಿಗಾಗಿ ಬೆಳಿಗ್ಗೆ 10.30ರಿಂದ ಸಂಜೆ 5.30ರ ಒಳಗೆ 080-22943346/3039…

Read More


best web service company