Author: Kannada News

ಬೆಂಗಳೂರು: ಸರ್ಕಾರ ಹೊಸ ಯುವ ನೀತಿಯನ್ನು ತರಲು ಉದ್ದೇಶಿಸಿದ್ದು, ಮುಂಬರುವ ವರ್ಷಗಳಲ್ಲಿ ಈ ನೀತಿ ಯುವಕರಿಗೆ ಮಾದರಿ ರೀತಿಯಲ್ಲಿ ಮಾರ್ಗದರ್ಶನ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಸ್ವಾಮಿ ವಿವೇಕಾನಂದರ 159 ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ವರ್ಚುಯಲ್ ಆಗಿ ಭಾಗವಹಿಸಿ ಮಾತನಾಡಿದ ಅವರು, ಯುವಕರಿಗಾಗಿ ತತ್ವಾಧಾರಿತವಾದಂತಹ ವೈಚಾರಿಕೆ ನೆಲೆಯಲ್ಲಿ ಹೆಚ್ಚಿನ ಬೆಂಬಲ, ಪ್ರೋತ್ಸಾಹ ನೀಡಲು ಸರ್ಕಾರ ಸಿದ್ಧವಿದೆ. ಈ ದಿಸೆಯಲ್ಲಿ ವಿಶೇಷ ಯೋಜನೆಯೊಂದನ್ನು ಮುಂದಿನ ಆಯವ್ಯಯದಲ್ಲಿ ತರಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ನಮ್ಮ ಜೀವನದಲ್ಲಿ ಸ್ವಾಮಿ ವಿವೇಕಾನಂದರು ಸದಾ ಪ್ರಸ್ತುತವಾಗಿರುತ್ತಾರೆ. ಸಾರ್ಥಕತೆಯ ಹಾಗೂ ಸಾಧನೆಯ ಬದುಕನ್ನು ನಡೆಸಿ ಹಾಗೂ ಸಾವಿನ ನಂತರವೂ ಬದುಕುವ ರೀತಿಯನ್ನು ತಿಳಿಸಿದ್ದಾರೆ ಎಂದರು. https://kannadanewsnow.com/kannada/karnataka-government-release-fund-on-gov-school/ ಸಾಧಕನಿಗೆ ಸಾವು ಅಂತ್ಯವಲ್ಲ ಸ್ವಾಮಿ ವಿವೇಕಾನಂದರ ಲೈಫ್ ಆಫ್ಟರ್ ಡೆತ್ ಎಂಬ ಪುಸ್ತಕವನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳು, ವಿವೇಕಾನಂದರ ಸಾವಿನ ನಂತರದ ಬದುಕು ಎನ್ನುವ ಕಲ್ಪನೆ ಅದ್ಬುತವಾದದ್ದು. ಸಾಧಕನಿಗೆ ಸಾವು ಅಂತ್ಯವಲ್ಲ. ಸಾವಿನ ನಂತರವೂ ಬದುಕುವುದು ಸಾಧನೆ ಎಂಬುದನ್ನು ಪ್ರತಿಪಾದಿಸಿದ್ದರು. ಚೈತನ್ಯಮಯ ಬದುಕಿನ…

Read More

ಬೆಂಗಳೂರು: 2021-22ನೇ ಸಾಲಿನಲ್ಲಿ ಶತಮಾನ ಪೂರೈಸಿದಂತ ಶಾಲೆಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಳ್ಳೋದಕ್ಕಾಗಿ, ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಿ ಆದೇಶಿಸಿದೆ. https://kannadanewsnow.com/kannada/s-somanath-appointed-as-the-new-secretary-department-of-space-and-chairman-space-commission/ ಈ ಬಗ್ಗೆ ರಾಜ್ಯ ಸರ್ಕಾರ ನಡವಳಿಗಳನ್ನು ಹೊರಡಿಸಿದ್ದು, 2021-22ನೇ ಸಾಲಿನಲ್ಲಿ ಶತಮಾನ ಪೂರೈಸಿರುವ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ರೂ.2000 ಲಕ್ಷಗಳ ಅನುದಾನವನ್ನು ಬಿಡುಗಡೆ ಮಾಡಿ ಆದೇಶಿಸಿದೆ. https://kannadanewsnow.com/kannada/shocking-news-of-karnataka-corona-case-today/ ಪ್ರಾಥಮಿಕ ಶಾಲೆಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸೋದಕ್ಕಾಗಿ ರೂ.1,273 ಲಕ್ಷಗಳನ್ನು ಬಿಡುಗಡೆ ಮಾಡಲಾಗಿದೆ. ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಶಾಲೆಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಿಕೊಳ್ಳೋದಕ್ಕಾಗಿ 727 ಲಕ್ಷ ಸೇರಿದಂತೆ ಒಟ್ಟು 2 ಸಾವಿರ ಲಕ್ಷ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. https://kannadanewsnow.com/kannada/bbmp-covid-help-line-number/ ಈ ಅನುದಾನವನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಬಿಡುಗಡೆ ಮಾಡಿದ್ದು, ಕ್ರಿಯಾ ಯೋಜನೆಯ ಅನುಸಾರ, ಅನುಮೋದಿತ ಕಾಮಗಾರಿಗಳಿಗೆ ಮರು ಬಿಡುಗಡೆ ಮಾಡುವುದು. ಈ ಅನುದಾನವನ್ನು ಶಾಲೆಗಳಿಗೆ ಅವಶ್ಯಕವಿರುವ ಕಟ್ಟಡ ನಿರ್ಮಾಣ, ದುರಸ್ಥಿ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿ ಪಡಿಸಲು ಬಳಸಿಕೊಳ್ಳುವಂತೆ ಸೂಚಿಸಲಾಗಿದೆ.

Read More

ನವದೆಹಲಿ: ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆಯ (Indian Space & Research Organisation – ISRO) ಮುಂದಿನ ಮುಖ್ಯಸ್ಥರಾಗಿ ಹಿರಿಯ ರಾಕೆಟ್ ವಿಜ್ಞಾನಿ ಎಸ್.ಸೋಮನಾಥ್ ( senior rocket scientist S Somnath ) ಅವರನ್ನು ಕೇಂದ್ರ ಬುಧವಾರ ನೇಮಿಸಿದೆ. ಅವರು ಜಿಎಸ್ ಎಲ್ ವಿ ಎಂಕೆ-3 ಲಾಂಚರ್ ನ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ತಮ್ಮ ವೃತ್ತಿಜೀವನದ ಆರಂಭಿಕ ಹಂತಗಳಲ್ಲಿ ಪೋಲಾರ್ ಉಪಗ್ರಹ ಉಡಾವಣಾ ವಾಹನದ ಏಕೀಕರಣಕ್ಕೆ (Polar Satellite Launch Vehicle – PSLV) ತಂಡದ ನಾಯಕರಾಗಿದ್ದರು. ಅವರನ್ನು ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ಮತ್ತು ಬಾಹ್ಯಾಕಾಶ ಆಯೋಗದ ಅಧ್ಯಕ್ಷರಾಗಿ ಮೂರು ವರ್ಷಗಳ ಅವಧಿಗೆ ನೇಮಿಸಲಾಗಿದೆ. https://twitter.com/airnewsalerts/status/1481243793672523777 ಜನವರಿ 22, 2018ರಿಂದ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದ (ವಿಎಸ್ ಎಸ್ ಸಿ) ನಿರ್ದೇಶಕರ ಮುಖ್ಯಸ್ಥರಾಗಿದ್ದಾರೆ. ಅವರು ಕೆ ಶಿವನ್ ಅವರ ನಂತರ ವಿಶ್ವದ ಪ್ರಮುಖ ಬಾಹ್ಯಾಕಾಶ ಏಜೆನ್ಸಿಗಳಲ್ಲಿ ಒಂದರ ಮುಂದಿನ ಮುಖ್ಯಸ್ಥರಾಗಲಿದ್ದಾರೆ. https://kannadanewsnow.com/kannada/namma-metro-train-new-rules-of-covid/ ಸೋಮನಾಥ್ ಹೈ ಥ್ರಸ್ಟ್ ಸೆಮಿ-ಕ್ರಯೋಜೆನಿಕ್…

Read More

ನವದೆಹಲಿ: ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆಯ (Indian Space & Research Organisation – ISRO) ಮುಂದಿನ ಮುಖ್ಯಸ್ಥರಾಗಿ ಹಿರಿಯ ರಾಕೆಟ್ ವಿಜ್ಞಾನಿ ಎಸ್.ಸೋಮನಾಥ್ ( senior rocket scientist S Somnath ) ಅವರನ್ನು ಕೇಂದ್ರ ಬುಧವಾರ ನೇಮಿಸಿದೆ. ಅವರು ಜಿಎಸ್ ಎಲ್ ವಿ ಎಂಕೆ-3 ಲಾಂಚರ್ ನ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ತಮ್ಮ ವೃತ್ತಿಜೀವನದ ಆರಂಭಿಕ ಹಂತಗಳಲ್ಲಿ ಪೋಲಾರ್ ಉಪಗ್ರಹ ಉಡಾವಣಾ ವಾಹನದ ಏಕೀಕರಣಕ್ಕೆ (Polar Satellite Launch Vehicle – PSLV) ತಂಡದ ನಾಯಕರಾಗಿದ್ದರು. ಅವರನ್ನು ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ಮತ್ತು ಬಾಹ್ಯಾಕಾಶ ಆಯೋಗದ ಅಧ್ಯಕ್ಷರಾಗಿ ಮೂರು ವರ್ಷಗಳ ಅವಧಿಗೆ ನೇಮಿಸಲಾಗಿದೆ. ಜನವರಿ 22, 2018ರಿಂದ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದ (ವಿಎಸ್ ಎಸ್ ಸಿ) ನಿರ್ದೇಶಕರ ಮುಖ್ಯಸ್ಥರಾಗಿದ್ದಾರೆ. ಅವರು ಕೆ ಶಿವನ್ ಅವರ ನಂತರ ವಿಶ್ವದ ಪ್ರಮುಖ ಬಾಹ್ಯಾಕಾಶ ಏಜೆನ್ಸಿಗಳಲ್ಲಿ ಒಂದರ ಮುಂದಿನ ಮುಖ್ಯಸ್ಥರಾಗಲಿದ್ದಾರೆ. https://kannadanewsnow.com/kannada/namma-metro-train-new-rules-of-covid/ ಸೋಮನಾಥ್ ಹೈ ಥ್ರಸ್ಟ್ ಸೆಮಿ-ಕ್ರಯೋಜೆನಿಕ್ ಎಂಜಿನ್…

Read More

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಇಂದು ಕೊರೋನಾ (Coronavirus ) ಮಹಾಸ್ಪೋಟವೇ ಉಂಟಾಗಿದೆ. ಬೆಂಗಳೂರಿನಲ್ಲಿ 15,617 ಸೇರಿದಂತೆ ರಾಜ್ಯಾಧ್ಯಂತ 21,390 ಜನರಿಗೆ ಕೋವಿಡ್ ಪಾಸಿಟಿವ್ ( Corona Positive ) ಎಂಬುದಾಗಿ ದೃಢಪಟ್ಟಿದೆ. https://kannadanewsnow.com/kannada/arrest-warrant-issued-against-ex-up-minister-swami-prasad-maurya/ ಈ ಕುರಿತಂತೆ ಟ್ವಿಟ್ಟರ್ ನಲ್ಲಿ ( Twitter ) ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ( Minister Dr K Sudhakar ) ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 1,95,047 ಜನರನ್ನು ಕೋವಿಡ್ ಪರೀಕ್ಷೆಗೆ ( Covid-19 Test ) ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರಿನಲ್ಲಿ 15,617 ಸೇರಿದಂತೆ ರಾಜ್ಯದಲ್ಲಿ 21,390 ಜನರಿಗೆ ಕೋವಿಡ್ ದೃಢಪಟ್ಟಿರೋದಾಗಿ ತಿಳಿಸಿದೆ. https://kannadanewsnow.com/kannada/black-mail-case-rahul-bhat-test-corona-positive/ ಇಂದು ರಾಜ್ಯದಲ್ಲಿ 21,390 ಜನರಿಗೆ ಕೊರೋನಾ ದೃಢಪಟ್ಟ ಕಾರಣ ಪಾಸಿಟಿವಿಟಿ ದರ ಶೇ.10.96ಕ್ಕೆ ಏರಿಕೆಯಾಗಿದೆ. ಸಕ್ರೀಯ ಪ್ರಕರಣಗಳ ಸಂಖ್ಯೆ ಬೆಂಗಳೂರಿನಲ್ಲಿ 73 ಸಾವಿರ ಸೇರಿದಂತೆ 93,009ಕ್ಕೆ ಏರಿಕೆಯಾಗಿವೆ ಎಂದು ತಿಳಿಸಿದ್ದಾರೆ. https://kannadanewsnow.com/kannada/namma-metro-train-new-rules-of-covid/ ಕಳೆದ 24 ಗಂಟೆಯಲ್ಲಿ ಸೋಂಕಿತರಾದಂತ 1,541 ಜನರು ಗುಣಮುಖರಾಗಿದ್ದಾರೆ. ಸೋಂಕಿನಿಂದಾಗಿ ಬೆಂಗಳೂರಿನಲ್ಲಿ…

Read More

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಇಂದು ಕೊರೋನಾ (Coronavirus ) ಮಹಾಸ್ಪೋಟವೇ ಉಂಟಾಗಿದೆ. ಬೆಂಗಳೂರಿನಲ್ಲಿ 15,617 ಸೇರಿದಂತೆ ರಾಜ್ಯಾಧ್ಯಂತ 21,390 ಜನರಿಗೆ ಕೋವಿಡ್ ಪಾಸಿಟಿವ್ ( Corona Positive ) ಎಂಬುದಾಗಿ ದೃಢಪಟ್ಟಿದೆ. https://kannadanewsnow.com/kannada/arrest-warrant-issued-against-ex-up-minister-swami-prasad-maurya/ ಈ ಕುರಿತಂತೆ ಟ್ವಿಟ್ಟರ್ ನಲ್ಲಿ ( Twitter ) ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ( Minister Dr K Sudhakar ) ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 1,95,047 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರಿನಲ್ಲಿ 15,617 ಸೇರಿದಂತೆ ರಾಜ್ಯದಲ್ಲಿ 21,390 ಜನರಿಗೆ ಕೋವಿಡ್ ದೃಢಪಟ್ಟಿರೋದಾಗಿ ತಿಳಿಸಿದೆ. https://kannadanewsnow.com/kannada/black-mail-case-rahul-bhat-test-corona-positive/ ಇಂದು ರಾಜ್ಯದಲ್ಲಿ 21,390 ಜನರಿಗೆ ಕೊರೋನಾ ದೃಢಪಟ್ಟ ಕಾರಣ ಪಾಸಿಟಿವಿಟಿ ದರ ಶೇ.10.96ಕ್ಕೆ ಏರಿಕೆಯಾಗಿದೆ. ಸಕ್ರೀಯ ಪ್ರಕರಣಗಳ ಸಂಖ್ಯೆ ಬೆಂಗಳೂರಿನಲ್ಲಿ 73 ಸಾವಿರ ಸೇರಿದಂತೆ 93,009ಕ್ಕೆ ಏರಿಕೆಯಾಗಿವೆ ಎಂದು ತಿಳಿಸಿದ್ದಾರೆ. https://kannadanewsnow.com/kannada/namma-metro-train-new-rules-of-covid/ ಕಳೆದ 24 ಗಂಟೆಯಲ್ಲಿ ಸೋಂಕಿತರಾದಂತ 1,541 ಜನರು ಗುಣಮುಖರಾಗಿದ್ದಾರೆ. ಸೋಂಕಿನಿಂದಾಗಿ ಬೆಂಗಳೂರಿನಲ್ಲಿ 6 ಜನರು ಸೇರಿದಂತೆ 10…

Read More

ಉತ್ತರ ಪ್ರದೇಶ: ನಿನ್ನೆಯಷ್ಟೇ ಯುಪಿ ಯೋಗಿ ಆದಿತ್ಯ ನಾಥ್ ಸರ್ಕಾರ ಮೊದಲ ವಿಕೆಟ್ ಪತನವಾಗಿತ್ತು. ಸಚಿವರಾಗಿದ್ದಂತ ಸ್ವಾಮಿ ಪ್ರಸಾದ್ ಮೌರ್ಯ ( Uttar Pradesh minister Swami Prasad Maury ) ಅವರು ಬಿಜೆಪಿಗೆ ರಾಜೀನಾಮೆ ನೀಡಿ, ಪಕ್ಷದಿಂದ ಹೊರ ಬಂದು ಸಮಾಜವಾದಿ ಪಕ್ಷವನ್ನು ಸೇರಿದ್ದರು. ಈಗ ಪಕ್ಷ ತೊರೆದ ಬೆನ್ನಲ್ಲೇ 7 ವರ್ಷದ ಹಿಂದಿನ ಪ್ರಕರಣದಲ್ಲಿ ಬಂಧನದ ವಾರೆಂಟ್ ಜಾರಿಗೊಳಿಸಲಾಗಿದೆ. https://kannadanewsnow.com/kannada/namma-metro-train-new-rules-of-covid/ ಉತ್ತರ ಪ್ರದೇಶ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರು ಬಿಜೆಪಿ ತೊರೆದ ಒಂದು ದಿನದ ನಂತರ, ಏಳು ವರ್ಷಗಳ ಹಿಂದಿನ ಪ್ರಕರಣದಲ್ಲಿ ಅವರ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿದೆ. ಬಂಧನ ವಾರಂಟ್ 2014ರ ಪ್ರಕರಣಕ್ಕೆ ಸಂಬಂಧಿಸಿದೆ. https://kannadanewsnow.com/kannada/black-mail-case-rahul-bhat-test-corona-positive/ ಇದರಲ್ಲಿ ಸ್ವಾಮಿ ಪ್ರಸಾದ್ ಮೌರ್ಯ ದೇವತೆಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ವಿಷಯವನ್ನು ಜನವರಿ 24 ರಂದು ವಿಶೇಷ ಸಂಸದ-ಶಾಸಕ ನ್ಯಾಯಾಲಯವು ವಿಚಾರಣೆ ನಡೆಸಲಿದೆ. https://kannadanewsnow.com/kannada/bbmp-covid-help-line-number/

Read More

ಬೆಂಗಳೂರು: ನಗರದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಈಗಾಗಲೇ ಮಾಸ್ಟರ್ ಪ್ಲಾನ್ ನಡೆಸಿರುವಂತ ಬಿಬಿಎಂಪಿ, ಈಗ ಜನರಿಗೆ ಸುಲಭವಾಗಿ ಆರೋಗ್ಯ ಸೇವೆ, ಕೊರೋನಾ ಬಗ್ಗೆ ಮಾಹಿತಿ, ಬೆಡ್ ವ್ಯವಸ್ಥೆ ಬಗ್ಗೆ ಮಾಹಿತಿಗಾಗಿ ವಲಯವಾರು, ವಾರ್ಡ್ ಮಟ್ಟದಲ್ಲಿ ಸಹಾಯವಾಣಿ ಸಂಖ್ಯೆಗಳನ್ನು ಪ್ರಾರಂಭಿಸಿದೆ. https://kannadanewsnow.com/kannada/namma-metro-train-new-rules-of-covid/ ಈ ಬಗ್ಗೆ ಮಾಹಿತಿ ನೀಡಿರುವಂತ ಬಿಬಿಎಂಪಿಯೂ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಸಂಬಂಧಿಸಿದ ಮಾಹಿತಿಗಾಗಿ ಟೋಲ್ ಫ್ರೀ ಸಂಖ್ಯೆ 1533, ಎಲ್ಲಾ 8 ವಲಯಗಳಲ್ಲಿನ ನಿಯಂತ್ರಣಾ ಕೊಠಡಿಗಳು ಹಾಗೂ ಎಲ್ಲಾ 27 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸ್ಥಾಪಿಸಿರುವ ಸಹಾಯವಾಣಿ ಸಂಖ್ಯೆಗಳು 24×7 ಕಾರ್ಯನಿರ್ವಹಿಸಲಿದೆ. ನಾಗರೀಕರು ಕೋವಿಡ್ ಸಂಬಂಧಿಸಿದಂತೆ ಟ್ರಯಾಜಿಂಗ್, ಕೋವಿಡ್ ಪರೀಕ್ಷೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಾಹಿತಿ, ಆಸ್ಪತ್ರೆಗೆ ದಾಖಲಾಗುವ, ಲಸಿಕೆ ಪಡೆಯುವುದು ಸೇರಿದಂತೆ ಇನ್ನಿತರೆ ವಿಷಯಗಳ ಬಗ್ಗೆ ಅಗತ್ಯ ಮಾಹಿತಿ ನೀಡಲಿದ್ದಾರೆ. https://kannadanewsnow.com/kannada/black-mail-case-rahul-bhat-test-corona-positive/ ಬಿಬಿಎಂಪಿ ಟೊಲ್‌ ಫ್ರೀ ಸಂಖ್ಯೆ 1533 ಬಿಬಿಎಂಪಿ ವಲಯ ಕೋವಿಡ್-19 ಸಹಾಯವಾಣಿ ಸಂಖ್ಯೆಗಳು 1. ಬೊಮ್ಮನಹಳ್ಳಿ 8884666670 2. ದಾಸರಹಳ್ಳಿ‌ 94806 83133…

Read More

ಬೆಂಗಳೂರು: ರಾಜಧಾನಿಯಲ್ಲಿ ಕೊರೋನಾ ಸೋಂಕಿನ ( Coronavirus ) ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದೇ ಕಾರಣದಿಂದಾಗಿ ಸರ್ಕಾರ ನಗರದಲ್ಲಿ ಶಾಲೆಗಳಿಗೆ ರಜೆಯನ್ನು, ವೀಕೆಂಡ್ ಕರ್ಪ್ಯೂ ( Weekend Curfew ), ನೈಟ್ ಕರ್ಪ್ಯೂ ಜಾರಿಗೊಳಿಸಿದೆ. ಇದರ ನಡುವೆ ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ನಮ್ಮ ಮೆಟ್ರೋ ( Namma Metro ) ರೈಲುಗಳಲ್ಲಿ ನಿಂತು ಪ್ರಯಾಣಿಸೋದಕ್ಕೆ ಬ್ರೇಕ್ ಹಾಕಲಾಗಿದೆ. ಅಲ್ಲದೇ ಸೀಟು ಭರ್ತಿಯಾದ್ರೆ ನಿಲ್ದಾಣದ ಒಳಗೂ ಪ್ರವೇಶವನ್ನು ನಿಷೇಧಿಸಲಾಗಿದೆ. https://kannadanewsnow.com/kannada/bjp-president-nalin-kumar-kateel-speech-on-mekedatu-padayatra-of-congress/ ಈ ಕುರಿತಂತೆ ಬಿ ಎಂ ಆರ್ ಸಿ ಎಲ್ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದು, ಕೊರೋನಾ ನಿಯಂತ್ರಣ ಕ್ರಮವಾಗಿ ರಾಜ್ಯ ಸರ್ಕಾರ ನೂತನ ಮಾರ್ಗಸೂಚಿಯನ್ನು ಹೊರಡಿಸಿದೆ. ಈ ಮಾರ್ಗಸೂಚಿಯಂತೆ ಕೋವಿಡ್ ನಿಯಂತ್ರಣ ಕಾರ್ಯ ಮಾಡೋದು ನಮ್ಮ ನಿಮ್ಮೆಲ್ಲರ ಕೆಲಸವಾಗಿದೆ. ಕೋವಿಡ್ ನಿಯಂತ್ರಣ ಕ್ರಮವಾಗಿ ಇನ್ಮುಂದೆ ಸೀಟುಗಳ ಭರ್ತಿಗೆ ಮಾತ್ರವೇ ನಮ್ಮ ಮೆಟ್ರೋ ರೈಲಿನಲ್ಲಿ ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದೆ. https://kannadanewsnow.com/kannada/black-mail-case-rahul-bhat-test-corona-positive/ ಕೇವಲ ಮೆಟ್ರೋ ರೈಲಿನಲ್ಲಿ ಸೀಟುಗಳಿರುವಷ್ಟು ಪ್ರಯಾಣಿಕರು ಪ್ರಯಾಣಿಸಲು ಅವಕಾಶ ನೀಡಲಾಗಿದೆ.…

Read More

ಬೆಂಗಳೂರು: ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಮೇಕೆದಾಟು ಪಾದಯಾತ್ರೆಯು ಕೋವಿಡ್ ಹರಡುವ ಮೂಲಕ ಜನರ ಪ್ರಾಣಬಲಿ ಪಡೆಯುವ ದುರುದ್ದೇಶದಿಂದ ಕೂಡಿದಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್ ಟೀಕಿಸಿದ್ದಾರೆ. https://kannadanewsnow.com/kannada/black-mail-case-rahul-bhat-test-corona-positive/ ಪಾದಯಾತ್ರೆ ಬಗ್ಗೆ ರಾಜ್ಯ ಹೈಕೋರ್ಟ್ ಈಗಾಗಲೇ ಅಸಮಾಧಾನ ವ್ಯಕ್ತಪಡಿಸಿದೆ. ಕಾಂಗ್ರೆಸ್ ಪಕ್ಷದವರಿಗೆ ನ್ಯಾಯಾಂಗದ ಕುರಿತು ವಿಶ್ವಾಸ ಇದ್ದರೆ ಮತ್ತು ಜನರ ಜೀವದ ಬಗ್ಗೆ ಕಳಕಳಿ ಇದ್ದರೆ ತಕ್ಷಣ ತಮ್ಮ ಪಾದಯಾತ್ರೆಯನ್ನು ರದ್ದುಪಡಿಸಬೇಕು ಮತ್ತು ಕೋವಿಡ್ ಹೆಚ್ಚಿಸಲು ಕಾರಣವಾಗಿದ್ದಕ್ಕೆ ಜನರ ಕ್ಷಮೆ ಕೇಳಬೇಕು ಎಂದು ಅವರು ಆಗ್ರಹಿಸಿದ್ದಾರೆ. https://kannadanewsnow.com/kannada/minister-dr-cn-ashwath-narayana-reaction-on-guest-lecturer/ ಈ ಪಾದಯಾತ್ರೆಯು ಡಿ.ಕೆ.ಶಿವಕುಮಾರ್ ಅವರ ಪ್ರತಿಷ್ಠೆಯ ಪಾದಯಾತ್ರೆಯಂತಿದೆ. ಮೇಕೆದಾಟು ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ಸರಕಾರದ ಅನಪೇಕ್ಷಿತ ವಿಳಂಬ ಮತ್ತು ಬಿಜೆಪಿ ಸರಕಾರದ ಬದ್ಧತೆಯ ಅರಿವಿದ್ದರೂ ಪಾದಯಾತ್ರೆ ಮುಂದುವರಿಸಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಸರಕಾರವು ನೆಲ, ಜಲ, ಭಾಷೆಯ ವಿಚಾರದಲ್ಲಿ ಯಾವತ್ತೂ ರಾಜಿ ಮಾಡಿಕೊಳ್ಳುವುದಿಲ್ಲ. ಸದಾ ಜನಪರ ಕಾರ್ಯಗಳನ್ನು ಮುಂದುವರಿಸಲಿದೆ ಎಂದು…

Read More


best web service company