Author: Kannada News

ವರದಿ : ಲೀಲಾವತಿ ವಸಂತ ಬಿ ಈಶ್ವರಗೆರೆ ಬೆಂಗಳೂರು: ಈಗಾಗಲೇ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ( PU Board ) ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ( Second PUC Exam ) ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು. ಈಗ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ದಿನಾಂಕ 16-04-2022 ರಿಂದ ದಿನಾಂಕ 06-05-2022ರವರೆಗೆ ಪರೀಕ್ಷೆ ನಡೆಯಲಿವೆ. https://kannadanewsnow.com/kannada/hijab-controvercy-application-postpone-news/ ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ( Karnataka Second PU Exam Final Timetable ) ಪ್ರಕಟಿಸಲಾಗಿದೆ. 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ದಿನಾಂಕ 16-04-2022ರಿಂದ 06-05-2022ರವರೆಗೆ ನಡೆಸಲು ತೀರ್ಮಾನಿಸಿ, ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ತಿಳಿಸಿದೆ. https://kannadanewsnow.com/kannada/144-section-impose-in-shivamoga-district/ ಹೀಗಿದೆ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ದಿನಾಂಕ 16-04-2022ರ ಶನಿವಾರ – ಗಣಿತ, ಶಿಕ್ಷಣ ಶಾಸ್ತ್ರ, ಮೂಲ ಗಣಿತ ದಿನಾಂಕ 17-04-2022ರಂದು ಭಾನುವಾರ ರಜೆ ದಿನಾಂಕ 18-04-2022ರ ಸೋಮವಾರ –…

Read More

ಶಿವಮೊಗ್ಗ: ಹಿಜಾಬ್ ವಿರೋಧಿಸಿ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಟನೆಯನ್ನು ವಿದ್ಯಾರ್ಥಿಗಳು ನಡೆಸುತ್ತಿದ್ದರು. ಕಾಲೇಜಿನ ಧ್ವಜ ಸ್ತಂಭವನ್ನು ಹತ್ತಿ ಕೇಸರಿ ಧ್ವಜವನ್ನು ಹಾರಿಸಿದ್ದರು. ಕಾಲೇಜಿನಲ್ಲಿ ಕಲ್ಲು ತೂರಾಟ, ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿದ ಹಿನ್ನಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾಧ್ಯಂತ 144 ಸೆಕ್ಷನ್ ಅಡಿಯಲ್ಲಿ ಇಂದು ಮತ್ತು ನಾಳೆ ಸೇರಿ 2 ದಿನ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. https://kannadanewsnow.com/kannada/cm-relif-fund-application-doccuments/ ಶಿವಮೊಗ್ಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಹಿಜಾಬ್ ವಿರೋಧಿಸಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಪ್ರತಿಭಟನೆಗೆ ಇಳಿದಿದ್ದರು. ಜೈ ಶ್ರೀರಾಂ ಘೋಷಣೆ ಕೂಗುತ್ತಾ ಧರಣಿ, ಪ್ರತಿಭಟನೆ ನಡೆಸಿದ್ದರು. ಸ್ಥಳಕ್ಕೆ ಆಗಮಿಸಿದಂತ ಪೊಲೀಸರು ನಡುವೆ ವಾಗ್ವಾದ ನಡೆಸಿದ್ದರು. ಅಲ್ಲದೇ ಕಾಲೇಜಿನ ಆವರಣದಲ್ಲಿದ್ದಂತ ಧ್ವಜ ಕಂಬವೇರಿ ಕೇಸರಿ ಧ್ವಜವನ್ನು ಹಾರಿಸಿದ್ದರು. https://kannadanewsnow.com/kannada/hijab-controvercy-application-postpone-news/ ಈ ಬಳಿಕ ಲಾಠಿ ಚಾರ್ಜ್ ಕೂಡ ಮಾಡಲಾಗಿತ್ತು. ಸ್ವತಹ ಡಿಸಿಗಳೇ ಕಾಲೇಜಿಗೆ ಆಗಮಿಸಿ, ಮೊಕ್ಕಾಂ ಹೂಡಿ, ಪರಿಸ್ಥಿತಿ ನಿಯಂತ್ರಣಕ್ಕೆ ಮುಂದಾದರು. ಈ…

Read More

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ( Hijab ), ಕೇಸರಿ ಶಾಲು ವಿವಾದ ತಾರಕಕ್ಕೇರಿದೆ. ಈ ಸಂದರ್ಭದಲ್ಲಿಯೇ ಕರ್ನಾಟಕ ಹೈಕೋರ್ಟ್ ಗೆ ( Karnataka High Court ) ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಿರುವಂತ ಅರ್ಜಿಯ ವಿಚಾರಣೆ ಇಂದು ಆರಂಭಗೊಂಡಿದೆ. ಅರ್ಜಿದಾರರ ಪರ ಹಿರಿಯ ವಕೀಲ ದೇವದತ್ ಕಾಮತ್ ಅವರು ವಾದ ಮಂಡಿಸಿದರು. ವಾದ-ಪ್ರತಿವಾದದ ನಡುವೆ ಮಧ್ಯಾಹ್ನದ ಲಂಚ್ ಬ್ರೇಕ್ ಬಂದ ಕಾರಣ, ಹೈಕೋರ್ಟ್ ( High Court ) ಏಕಸದಸ್ಯ ಪೀಠವು ಮಧ್ಯಾಹ್ನ 2.30ಕ್ಕೆ ವಿಚಾರಣೆಯನ್ನು ಮುಂದೂಡಿದೆ. https://kannadanewsnow.com/kannada/cm-relif-fund-application-doccuments/ ಇಂದು ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ ಏಕ ಸದಸ್ಯ ನ್ಯಾಯಪೀಠವು ವಿಚಾರಣೆ ಆರಂಭಿಸಿತು. ಈ ವೇಳೆ ಅರ್ಜಿದಾರರ ಪರ ವಕೀಲ ದೇವದತ್ ಕಾಮತ್ ತಮ್ಮ ವಾದ ಮಂಡಿಸಿ, ಹಿಜಾಬ್ ಇಸ್ಲಾಂ ಅತ್ಯಗತ್ಯ ಆಚರಣೆಯಾಗಿದೆ ಎಂದು ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಟ್ಟರು. ಇದಲ್ಲದೇ ಪವಿತ್ರ ಖುರಾನ್ ನಲ್ಲಿನ ಕೆಲ ಭಾಗಗಳನ್ನು ಉಲ್ಲೇಖಿಸಿದಂತ ಅವರು, ಸರ್ಕಾರ ವಿದ್ಯಾರ್ಥಿನಿಯರ…

Read More

ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ( Union Minister Rajnath Singh ) ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. https://kannadanewsnow.com/kannada/cm-relif-fund-application-doccuments/ ಸಂಗೊಳ್ಳಿಯಲ್ಲಿ 189 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ( Rayanna Shainika School ) ಮುಕ್ತಾಯದ ಹಂತದಲ್ಲಿದ್ದು ಈ ಶಾಲೆಯನ್ನು ಸೈನಿಕ ಸ್ಕೂಲ್ ಸೊಸೈಟಿಗೆ ಹಸ್ತಾಂತರಿಸಲು ಅನುವು ಮಾಡಿಕೊಡುವಂತೆ ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಮನವಿ ಮಾಡಿದರು. https://kannadanewsnow.com/kannada/good-news-for-karnataka-farmenr-on-goverment-land/ ಸೈನಿಕ್ ಸ್ಕೂಲ್ ಸೊಸೈಟಿಯ ಅಧಿಕಾರಿಗಳು ಹಾಗೂ ಬೆಳಗಾವಿ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿಯು ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದೆ. ಸೈನಿಕ ಸ್ಕೂಲ್ ಮಾನದಂಡಗಳ ಪಾಲನೆಗೆ ಕ್ರಮ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶೀಘ್ರವೇ ಈ ಶಾಲೆಯನ್ನು ಸೈನಿಕ್ ಸ್ಕೂಲ್ ಸೊಸೈಟಿಯ ಅಧೀನಕ್ಕೆ ಒಳಪಡಿಸಲು ಅನುಮೋದನೆ ನೀಡುವಂತೆ ಕೋರಿದರು. ಈ ಸಂದರ್ಭದಲ್ಲಿ ಜಲಸಂಪನ್ಮೂಲ…

Read More

ಬೆಂಗಳೂರು: ರಾಜ್ಯದ ಅನೇಕ ರೈತರು ( Farmer ) ಸರ್ಕಾರಿ ಜಮೀನನ್ನು ( Government Land ) ಒತ್ತುವರಿ ಮಾಡಿಕೊಂಡು ಸಾಗುವಳಿ ನಡೆಸುತ್ತಿದ್ದಾರೆ. ಈ ರೈತರಿಗೆ ಕಂಟಕವಾಗಿ ಪರಿಣಮಿಸಿದ್ದು, ಬಂಧನದ ಭೀತಿಯನ್ನು ಎದುರಿಸುವಂತೆ ಮಾಡಿದ್ದೇ ಭೂ ಕಬಳಿಕೆ ನಿಷೇಧ ಕಾಯ್ದೆಯಾಗಿತ್ತು. ಇದೀಗ ಈ ಕಾಯ್ದೆಯಲ್ಲಿನ ನಿಯಮಗಳನ್ನು ಸಡಿಲ ಮಾಡೋದಕ್ಕೆ ನಿರ್ಧರಿಸಿದೆ. ಈ ಮೂಲಕ ರಾಜ್ಯದ ಲಕ್ಷಾಂತರ ರೈತರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಿದೆ. https://kannadanewsnow.com/kannada/cm-relif-fund-application-doccuments/ ಈ ಕುರಿತಂತೆ ಕಂದಾಯ ಸಚಿವ ಆರ್ ಅಶೋಕ್ ( Revenue Minister R Ashok ) ಮಾಹಿತಿ ಹಂಚಿಕೊಂಡಿದ್ದು, ಭೂ ಕಬಳಿಕ ನಿಷೇಧ ಕಾಯ್ದೆಯಲ್ಲಿನ ನಿಯಮಗಳನ್ನು ಸಡಿಲಗೊಳಿಸಲು ನಿರ್ಧರಿಸಲಾಗಿದೆ. ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡು ಕಾಫಿ, ತೋಟ, ಅಡಿಕೆ ಸೇರಿದಂತೆ ಇತ್ಯಾದಿ ಬೆಳೆ ಬೆಳೆದಿರುವಂತ ರೈತರಿಗೆ, ಆ ಜಮೀನನ್ನು ಗುತ್ತಿಗೆ ಆಧಾರದ ಮೇಲೆ ನೀಡುವಂತ ನಿಯಮ ರೂಪಿಸಲಾಗುತ್ತಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಕಂದಾಯ ಇಲಾಖೆಯ ದಾಖಲೆಗಳನ್ನು ಮನೆ ಭಾಗಿಲಿಗೆ ತಲುಪಿಸುವಂತ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಕನಿಷ್ಠ…

Read More

ಬೆಂಗಳೂರು: ಮುಖ್ಯಮಂತ್ರಿ ಪರಿಹಾರ ನಿಧಿಗಾಗಿ ( Chief Minister Relief Fund ) ರಾಜ್ಯದ ಅನೇಕರು ಜನಪ್ರತಿನಿಧಿಗಳ ಮೂಲಕ ಅರ್ಜಿಯನ್ನು ಸಲ್ಲಿಸಲಾಗುತ್ತಿದೆ. ಇದು ಹಿಂದಿನಿಂದಲು ನಡೆಯುತ್ತಲೇ ಬಂದಿದೆ. ಬಡವರು, ನಿರ್ಗತಿಕರು ಹಾಗೂ ನೊಂದ ಜನತೆಗೆ ಈ ಸೌಲಭ್ಯದಡಿ ಅನುಕೂಲ ಕೂಡ ಆಗುತ್ತಿದೆ. ಆದ್ರೇ ಇತ್ತೀಚಿಗೆ ಸಲ್ಲಿಕೆಯಾಗುತ್ತಿರುವಂತ ಅರ್ಜಿಗಳ ( Application ) ಜೊತೆಗೆ ಅನೇಕ ದಾಖಲೆಗಳನ್ನು ( Documents ) ಮಿಸ್ ಮಾಡಲಾಗುತ್ತಿದೆ. ಇದರಿಂದ ಕಡತ ವಿಲೇವಾರಿಗೆ ತೊಂದರೆ ಉಂಟಾಗುತ್ತಿದೆ ಅಂತ ತಿಳಿಸಿದ್ದು, ತಪ್ಪದೇ ಕೆಲ ಕಡ್ಡಾಯ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ. https://kannadanewsnow.com/kannada/hijab-controvercy-college-holiday-news/ ಈ ಕುರಿತಂತೆ ರಾಜ್ಯದ ಎಲ್ಲಾ ಸಚಿವ ಸಂಪುಟದ ಸಚಿವರು, ಲೋಕಸಭಾ, ರಾಜ್ಯ ಸಭಾ ಸದಸ್ಯರಿಗೆ, ವಿಧಾನಸಭಾ, ಪರಿಷತ್ ಸದಸ್ಯರಿಗೆ ಪತ್ರ ಬರೆದಿರುವಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ( CM Basavaraj Bommai ), ಇತ್ತೀಚಿನ ದಿನಗಳಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಪರಿಹಾರ ಕೋರಿ, ಸಚಿವರು, ವಿಧಾನಸಭಾ, ಪರಿಷತ್ ಸದಸ್ಯರು, ಲೋಕಸಬಾ, ರಾಜ್ಯಸಭಾ ಸದಸ್ಯರ ಕಚೇರಿಗಳಿಂದ ಅರ್ಜಿಯನ್ನು ಸಲ್ಲಿಸಲಾಗುತ್ತಿದೆ.…

Read More

ಬೆಂಗಳೂರು: ರಾಜ್ಯಾಧ್ಯಂತ ಇಂದು ಮತ್ತೆ ಹಿಜಾಬ್ ( Hijab Controversy ) ಹಾಗೂ ಕೇಸರಿ ಶಾಲು ( Kesari Shalu ) ವಿವಾದ ತಾರಕಕ್ಕೇರಿದೆ. ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಕಾಲೇಜುಗಳ ( College ) ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೇ ಕೆಲ ಕಡೆಯಲ್ಲಿ ಶಾಲಾ ಬಸ್ ಮೇಲೂ ಕಲ್ಲು ತೂರಾಟ ನಡೆಸಿರೋ ಘಟನೆ ನಡೆದಿದೆ. ಹೀಗಾಗಿ ಅನೇಕ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. https://kannadanewsnow.com/kannada/minister-ks-eshwarappa-reaction-on-hijab-row/ ಇಂದು ಉಡುಪಿ ಜಿಲ್ಲೆಯ ಎಂಜಿಎಂ ಕಾಲೇಜಿನಲ್ಲಿ ಹಿಜಾಬ್ ವಿರೋಧಿಸಿ ವಿದ್ಯಾರ್ಥಿನಿಗಳು ಕೇಸರಿ ಶಾಲು ಜೊತೆಗೆ, ಕೇಸರಿ ಪೇಟ ಧರಿಸಿ ಬಂದು ಪ್ರತಿಭಟನೆ ನಡೆಸಿದರು. ಒಂದೇ ಮಾತರಂ, ಜೈ ಶ್ರೀರಾಂ ಘೋಷಣೆ ಕೂಡ ಕೂಗಿದರು. ವಿದ್ಯಾರ್ಥಿಗಳ ಪ್ರತಿಭಟನೆಯಿಂದಾಗಿ ಪ್ರಾಂಶುಪಾಲರು ಮುಂದಿನ ಆದೇಶದವರೆಗೆ ಕಾಲೇಜಿಗೆ ರಜೆಯನ್ನು ಘೋಷಿಸಿ, ವಿದ್ಯಾರ್ಥಿಗಳನ್ನು ಮನಗೆ ಹೋಗುವಂತೆ ಸೂಚಿಸಿದರು. https://kannadanewsnow.com/kannada/holiday-declear-in-udupi-mgm-college/ ಇತ್ತ ಶಿವಮೊಗ್ಗದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದು, ಹಿಜಾಬ್ ಗೆ ವಿರೋಧ ವ್ಯಕ್ತ ಪಡಿಸಿದರು. ಹಿಜಾಬ್…

Read More

ಮೈಸೂರು: ರಾಜ್ಯಾಧ್ಯಂತ ಹಿಜಾಬ್ ( Hijab ) ಮತ್ತು ಕೇಸರಿ ಶಾಲು ವಿವಾದ ತಾರಕಕ್ಕೇರಿದೆ. ಈ ವೇಳೆ ಪರ-ವಿರೋಧದ ಚರ್ಚೆಗಳು ಕೂಡ ನಡೆಯುತ್ತಿವೆ. ಕಾಂಗ್ರೆಸ್ ಶಾಸಕಿ ಫಾತಿಮಾ ಹಿಜಾಬ್ ಧರಿಸಿಯೇ ವಿಧಾನಸೌಧ, ಸದನಕ್ಕೂ ಹಾಜರಾಗೋದಾಗಿ ಹೇಳಿದ್ದರು. ಇದಕ್ಕೆ ಪ್ರತಿಸವಾಲ್ ಎಸೆದಿರುವಂತ ಸಚಿವ ಕೆ.ಎಸ್ ಈಶ್ವರಪ್ಪ ( Minister K S Eshwarappa ), ನಿಮ್ಗೆ ಧಮ್ ಇದ್ರೇ, ಮಸೀದಿಗಳಲ್ಲಿ ಮಹಿಳೆಯರು ಪ್ರವೇಶಕ್ಕೆ ಅವಕಾಶ ಕೊಡಿಸಿ ಅಂತ ಸವಾಲ್ ಹಾಕಿದ್ದಾರೆ. https://kannadanewsnow.com/kannada/hijab-row-and-kesari-shalu-protest-of-karnataka/ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನೀವು ಹಿಜಾಬ್ ಹಾಕೊಂಡು ವಿಧಾನಸೌಧಕ್ಕೆ ಬರೋದಲ್ಲ, ನಿಮ್ಗೆ ಧಮ್ ಇದ್ದರೇ ಮೊದಲು ಮಸೀದಿಗೆ ಹೋಗಿ. ಮಸೀದಿಯೊಳಗೆ ಪ್ರವೇಶಿಸೋದಕ್ಕೆ ಪ್ರಯತ್ನ ಮಾಡಿ. ನಾವು ಶಾಲೆಗಳಲ್ಲಿ ಮಾತ್ರ ಹಿಜಾಬ್ ನಿಷೇಧಿಸಿದ್ದೇವೆ. ಹೊರಗಡೆ ನಿಷೇಧಿಸಿಲ್ಲ ಎಂದು ಹೇಳಿದರು. https://kannadanewsnow.com/kannada/holiday-declear-in-udupi-mgm-college/ ಸಿದ್ದರಾಮಯ್ಯ ಮಾತಿಗೆ ಪ್ರತಿಕ್ರಿಯಿಸಿದಂತ ಅವರು, ಸಿದ್ದರಾಮಯ್ಯ ತಾನೇ 2ನೇ ಅಂಬೇಡ್ಕರ್ ಅಂದುಕೊಂಡಿದ್ದಾರೆ. ಕಾನೂನು ಅವರಿಗೇನ್ ಗೊತ್ತಿಲ್ಲವಾ.? ಕೇರಳ ಹೈಕೋರ್ಟ್ ಈ ಕುರಿತಂತೆ ಏನ್ ಹೇಳಿದೆ ಎಂಬುದನ್ನು ಓದಿಕೊಳ್ಳಲಿ.…

Read More

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ ( Hijab and Kesari Shalu Controversy ) ತಾರಕಕ್ಕೇರಿದೆ. ಈ ಸಂದರ್ಭದಲ್ಲಿಯೇ ರಾಜ್ಯದಲ್ಲಿ ವಿವಾದ ತಾರಕಕ್ಕೇರಿದೆ. ಕೆಲ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ( College Student ) ಕಲ್ಲು ತೂರಾಟ ಕೂಡ ನಡೆಸಿದ್ದಾರೆ. ಇದೇ ವೇಳೆ ಧರಣಿ ನಿರತ ವಿದ್ಯಾರ್ಥಿಗಳಿಗೆ ಹಾಜರಾತಿ ( Attendance ) ನೀಡಲ್ಲ. ಪರೀಕ್ಷೆಗೆ ( Exam ) ಅವಕಾಶವಿಲ್ಲ ಎಂಬುದಾಗಿ ಎಚ್ಚರಿಕೆ ನೀಡಿದ್ದಾರೆ. https://kannadanewsnow.com/kannada/hijab-row-and-kesari-shalu-protest-of-karnataka/ ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯ ಸರ್ಕಾರ ಜಾರಿಗೊಳಿಸಿರುವಂತ ನಿಯಮವನ್ನು ಮೀರಿ, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವುದು ಸರಿಯಲ್ಲ. ಕಾನೂನು ಮೀರಿ ವರ್ತಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ತಿಳಿಸಿದರು. https://kannadanewsnow.com/kannada/wearing-kesari-shalu-in-udupi/ ಇಂದು ಹೈಕೋರ್ಟ್ ತೀರ್ಪು ಬರುವ ಸಾಧ್ಯತೆ ಇದೆ. ಅಲ್ಲಿಯವರೆಗೆ ಕಾದು ನೋಡೋಣ. ವಿದ್ಯಾರ್ಥಿಗಳು ಧರಣಿ, ಪ್ರತಿಭಟನೆ ಕೈಬಿಟ್ಟು ತರಗತಿಗಳಿಗೆ ಹಾಜರಾಗಬೇಕು. ಒಂದು ವೇಳೆ ಪ್ರತಿಭಟನೆ ನಡೆಸಿದ್ರೇ.. ಅಂತಹ ವಿದ್ಯಾರ್ಥಿಗಳಿಗೆ ಹಾಜರಾತಿ ನೀಡಲ್ಲ. ಪರೀಕ್ಷೆಗೆ ಅವಕಾಶವಿಲ್ಲ ಎಂಬುದಾಗಿ ಖಡಕ್ ಎಚ್ಚರಿಕೆ…

Read More

ಉಡುಪಿ: ರಾಜ್ಯಾಧ್ಯಂತ ಹಿಜಾಬ್ ಮತ್ತು ಕೇಸರಿ ಶಾಲು ಫೈಟ್ ( Hijab Fight ) ತಾರಕಕ್ಕೇರಿದೆ. ಕುಂದಾಪುರದಲ್ಲಿ ಶುರುವಾದಂತ ವಿವಾದ ಈಗ ರಾಜ್ಯಾಧ್ಯಂತ ಹಬ್ಬಿದೆ. ಶಿವಮೊಗ್ಗ, ಬಾಗಲಕೋಟೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿರೋದಾಗಿ ತಿಳಿದು ಬಂದಿದೆ. ವಿದ್ಯಾರ್ಥಿಗಳ ಪ್ರತಿಭಟನೆ ತಾರಕಕ್ಕೇರಿದ ಪರಿಣಾಮದಿಂದಾಗಿ ಉಡುಪಿಯ ಎಂ.ಜಿ.ಎಂ ಕಾಲೇಜಿಗೆ ರಜೆ ( College Holiday ) ಘೋಷಣೆ ಮಾಡಲಾಗಿದೆ. https://kannadanewsnow.com/kannada/hijab-row-and-kesari-shalu-protest-of-karnataka/ ಇಂದು ಉಡುಪಿಯ ಎಂ.ಜಿ.ಎಂ ಕಾಲೇಜಿನಲ್ಲಿ ( Udupi MGM College ) ಹಿಜಾಬ್ ವಿರೋಧಿಸಿ ಕೇಸರಿ ಶಾಲು, ಕೇಸರಿ ಪೇಟ ಧರಿಸಿ ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸಿ, ಪ್ರತಿಭಟನೆ ನಡೆಸುತ್ತಿದ್ದರು. ವಿದ್ಯಾರ್ಥಿಗಳನ್ನು ಎಷ್ಟೇ ಮನವೊಲಿಸೋದಕ್ಕೆ ಪ್ರಯತ್ನ ಪಟ್ಟರು, ವಿದ್ಯಾರ್ಥಿಗಳು ಪ್ರತಿಭಟನೆ ಕೈಬಿಡಲಿಲ್ಲ. https://kannadanewsnow.com/kannada/wearing-kesari-shalu-in-udupi/ ಈ ವೇಳೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದಂತ ಪ್ರಾಂಶುಪಾಲರು, ಈಗ ಎದ್ದಿರುವಂತ ವಿವಾದದ ಬಗ್ಗೆ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಇಂದು ತೀರ್ಪು ಕೂಡ ಪ್ರಕಟಗೊಳ್ಳಲಿದೆ. ಅಲ್ಲಿಯವರೆಗೆ ವಿದ್ಯಾರ್ಥಿಗಳು ಶಾಂತಿಯಿಂದ ವರ್ತಿಸಬೇಕು. ಈಗ ಮನೆಗೆ ಹೋಗಿ. ಕಾಲೇಜಿಗೆ ರಜೆಯನ್ನು ಘೋಷಿಸಿರೋದಾಗಿ…

Read More


best web service company