ಕುಂದಾಪುರ: ಹೆಚ್ಚೆಚ್ಚು ಭಕ್ತರು ಬರುವ ಮೈಸೂರಿನ ಚಾಮುಂಡೇಶ್ವರಿ, ಕೊಪ್ಪಳದ ಹುಲಿಗೆಮ್ಮ ಹಾಗೂ ದೊಡ್ಡಬಳ್ಳಾಪುರದ ಘಾಟಿ ಸುಬ್ರಮಣ್ಯ ದೇವಸ್ಥಾನಗಳ ಉಸ್ತುವಾರಿಗೆ ಪ್ರಾಧಿಕಾರ ರಚನೆ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ರಾಜ್ಯ ಮುಜರಾಯಿ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಭಾನುವಾರ ಇಲ್ಲಿನ ಮಾರಣಕಟ್ಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಜರಾಯಿ ಇಲಾಖೆ ದೇವಸ್ಥಾನಗಳ ಆಸ್ತಿ ಸರ್ವೇ ಮಾಡಲು ಈಗಾಗಲೇ ಕಂದಾಯ ಇಲಾಖೆ ಜೊತೆ ಕ್ರಮವಹಿಸಲಾಗಿದೆ.ಇಲಾಖೆಗೆ ಆಸ್ತಿಗಳುಪರಭಾರೆ ಅಥವಾಅತಿಕ್ರಮಣವಾಗಿದ್ದರೆ ಹಿಂಪಡೆಯಲು ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಮುಜರಾಯಿ ದೇವಸ್ಥಾನದ ಎ,ಬಿ ದರ್ಜೆಯ ನೌಕರರನ್ನು ಹೊರತುಪಡಿಸಿ ಉಳಿದವರನ್ನು ಇಲಾಖೆಯ ಇತರೆ ದೇವಾಲಯಗಳಿಗೆ ಅಂತರ್ವರ್ಗಾವಣೆ ಮಾಡುವ ಪ್ರಾಸ್ತಾಪ ಇಲ್ಲ. ಆದರೆ ನೌಕರರ ಮೇಲೆ ನಿರ್ದಿಷ್ಟ ದೂರುಗಳು ಬಂದಲ್ಲಿ ತನಿಖೆ ನಡೆಸಿ ವರ್ಗಾವಣೆ ಸೇರಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು.