ಬೆಂಗಳೂರು: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ದಿನಾಂಕ:22.01.2024 ರಂದು ಅಯೋಧ್ಯೆಯಲ್ಲಿ ನೂತನ ಶ್ರೀ ರಾಮನ ವಿಗ್ರಹ ಪ್ರಾಣ ಪ್ರತಿಷ್ಠಾಪನ ಪ್ರಯುಕ್ತ ವಿಶೇಷ ಪೂಜೆ/ ಪ್ರಾರ್ಥನೆ ನಡೆಸುವ ಬಗ್ಗೆ ರಾಜ್ಯ ಸರ್ಕಾರದಿಂದ ಆದೇಶವನ್ನು ಹೊರಡಿಸಿದೆ.
ಆದೇಶದಲ್ಲಿ ಶ್ರೀ ರಾಮನ ಜನ್ಮಸ್ಥಳವಾದ ಅಯೋಧ್ಯಯಲ್ಲಿ ಹೊಸದಾಗಿ ನಿರ್ಮಿಸಿರುವ ಶ್ರೀರಾಮ ಮಂದಿರದಲ್ಲಿ ದಿನಾಂಕ:22.01.2024 ರಂದು ನೂತನವಾಗಿ ಶ್ರೀರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮವು ನಡೆಯಲಿರುವುದರಿಂದ, ದೇಶದ/ರಾಜ್ಯದ ಎಲ್ಲಾ ಜನರ ಒಳಿತಿಗಾಗಿ ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ದಿನಾಂಕ:22.01.2024 ರಂದು ಶ್ರೀರಾಮನ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಸಮಯದಲ್ಲಿ ವಿಶೇಷ ಪೂಜೆ/ಪ್ರಾರ್ಥನೆ/ ಮಂಗಳಾರತಿಯನ್ನು ನಡೆಸಲು ಸೂಚಿಸಿದೆ ಅಂತ ಉಲ್ಲೇಖ ಮಾಡಿದೆ.
.