ಅಯೋಧ್ಯೆ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರ ನಿರ್ಮಾಣಕ್ಕೆ ಸುಮಾರು 1,800 ಕೋಟಿ ರೂ. ವೆಚ್ಚವಾಗುವ ಸಾಧ್ಯತೆಯಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಭಾನುವಾರ ನಡೆದ ಸಭೆಯ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಈ ಭವ್ಯವಾದ ರಾಮಮಂದಿರ ನಿರ್ಮಾಣಕ್ಕೆ ಸುಮಾರು 1,800 ಕೋಟಿ ರೂ. ವೆಚ್ಚವಾಗಲಿದೆ. ಇದು ಪರಿಷ್ಕೃತ ಅಂದಾಜು ಎಂದು ರೈ ತಿಳಿಸಿದ್ದಾರೆ. ಹಲವಾರು ಪರಿಷ್ಕರಣೆಗಳ ನಂತರ ನಾವು ಈ ಮೊತ್ತವನ್ನು ಅಂದಾಜಿಸಿದ್ದೇವೆ. ಈ ಮೊತ್ತವು ಕೂಡ ಮತ್ತೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ರೈ ಹೇಳಿದರು.
ರಾಮಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ನೇತೃತ್ವದಲ್ಲಿ ಭಾನುವಾರ ಈ ಸಭೆ ನಡೆಯಿತು. ಸಭೆಯಲ್ಲಿ ದೇವಸ್ಥಾನದ ಟ್ರಸ್ಟ್ನ 15 ಸದಸ್ಯರ ಪೈಕಿ 14 ಮಂದಿ ಭಾಗವಹಿಸಿದ್ದರು. ಈ ವೇಳೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ನಿಯಮಗಳು ಮತ್ತು ನಿಬಂಧನೆಗಳನ್ನು ಅಂತಿಮಗೊಳಿಸಲಾಗಿದೆ.
ಮಂದಿರದ ನಿರ್ಮಾಣವು 2023 ರ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ರೈ ತಿಳಿಸಿದರು.
BIG NEWS: ಜ್ಞಾನವಾಪಿ ಮಸೀದಿ ಪ್ರಕರಣ: ಇಂದು ಭವಿಷ್ಯ ನಿರ್ಧಾರ? | Gyanvapi Mosque Case
ಯುಪಿ ಆಸ್ಪತ್ರೆಯಲ್ಲಿ ಪವರ್ ಕಟ್: ಮೊಬೈಲ್ ಟಾರ್ಚ್ ಬಳಸಿ ಚಿಕಿತ್ಸೆ ನೀಡಿದ ವೈದ್ಯರು