ಕಾರವಾರ: ಜಿಲ್ಲೆಯ ನೌಕಾನೆಲೆಯ ಸಿಬ್ಬಂದಿಯೊಬ್ಬರು ಅಯ್ಯಪ್ಪ ಮಾಲಾಧಾರಿ ಮೇಲೆಯೇ ಹಲ್ಲೆ ಮಾಡಿರುವಂತ ಘಟನೆ ನಡೆದಿದೆ. ಇದನ್ನು ಖಂಡಿಸಿ ಸಾರ್ವಜನಿಕರು ಸ್ಥಳದಲ್ಲಿ ಪ್ರತಿಭಟನೆ ಮಾಡುತ್ತಿರುವುದಾಗಿ ತಿಳಿದು ಬಂದಿದೆ.
ನಿನ್ನೆ ರಾತ್ರಿ 25ಕ್ಕೂ ಹೆಚ್ಚು ನೌಕಾನೆಲೆಯ ಸಿಬ್ಬಂದಿಗಳಿಂದ ಅಯ್ಯಪ್ಪ ಮಾಲಾಧಾರಿಯೊಬ್ಬರ ಮೇಲೆ ಹಲ್ಲೆ ಮಾಡಿರುವುದಾಗಿ ಆರೋಪ ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿ ನೌಕಾನೆಲೆಯ ಗೇಟ್ ಬಳಿಯಲ್ಲಿ ಜಮಾಯಿಸಿರುವಂತ ಸಾರ್ವಜನಿಕರು ಹಲ್ಲೆ ಕೋರರನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಇನ್ನೂ ಈ ಪ್ರತಿಭಟನೆಗೆ ಮಾಜಿ ಶಾಸಕಿ ರೂಪಾಲಿ ನಾಯ್ಕ್ ಕೂಡ ಬೆಂಬಲ ಸೂಚಿಸಿದ್ದಾರೆ. ಕಾಂಗ್ರೆಸ್ ಮುಖಂಡ ಶಂಭು ಶೆಟ್ಟಿ ಸೇರಿದಂತೆ ಇತರರು ಸ್ಥಳದಲ್ಲಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣದಿಂದ ಕೂಡಿದ್ದು, ಮುಂಜಾಗ್ರತಾ ಕ್ರಮವಾಗಿ 4 ಡಿಎಆರ್ ಎಫ್ ತುಕಡಿಯನ್ನು ನಿಯೋಜಿಸಲಾಗಿದೆ. ಜೊತೆಗೆ ಸ್ಥಳದಲ್ಲೇ ಹಿರಿಯ ಪೊಲೀಸ್ ಅಧಿಕಾರಿಗಳು ಮೊಕ್ಕಾಂ ಕೂಡ ಹೂಡಿದ್ದಾರೆ.
BREAKING : ವಿಜಯಪುರದಲ್ಲಿ ಘೋರ ದುರಂತ : ನಾಲ್ವರು ಮಕ್ಕಳ ಜೊತೆ ಕಾಲುವೆಗೆ ಹಾರಿದ ತಾಯಿ, ಮಕ್ಕಳ ಸಾವು ತಾಯಿ ಬಚಾವ್!