ಬೆಂಗಳೂರು: ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿದ್ದಾರೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವಂತ ಅವರಿಗೆ ಭದ್ರತಾ ದೃಷ್ಠಿಯಿಂದ ಬಿ-ಬ್ಯಾರಕ್ ವ್ಯವಸ್ಥೆ ಮಾಡಲಾಗಿದೆ.
ಇಂದು ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ನಟ ದರ್ಶನ್ ಹಾಗೂ ಮೂವರನ್ನು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ಹಾಜರುಪಡಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ಅವರು, ಜುಲೈ.4ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಹೀಗಾಗಿ ಪೊಲೀಸರು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ದರು. ನಟ ದರ್ಶನ್‌ಗೆ ವಿಚಾರಣಾಧೀನ ಕೈದಿ ನಂಬರ್ 6106 ಸಂಖ್ಯೆ ನೀಡಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರಿಗೆ ಹೆಚ್ಚಿನ ಭದ್ರತೆಗೆ ಬಿ ಬ್ಯಾರಕ್‌ನಲ್ಲಿ ವ್ಯವಸ್ಥೆ ಮಾಡಲಾಗಿದೆ.
ಇನ್ನೂ ನಟ ದರ್ಶನ್ ಜೊತೆಗೆ ಇಂದು ಜೈಲು ಪಾಲಾದಂತ ಎ9 ಧನರಾಜ್ ವಿಚಾರಣಾಧೀನ ಕೈದಿ ನಂಬರ್ 6107, ಎ10 ವಿನಯ್ ವಿಚಾರಣಾಧೀನ ಕೈದಿ ನಂಬರ್ 6108, ಎ14 ಪ್ರದೋಶ್ ವಿಚಾರಣಾಧೀನ ಕೈದಿ ನಂಬರ್ 6109 ಸಂಖ್ಯೆ ನೀಡಲಾಗಿದೆ.