ಮಡಿಕೇರಿ : 2024-25 ನೇ ಸಾಲಿನಲ್ಲಿ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅಲ್ವಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ 2024-25 ನೇ ಸಾಲಿನಲ್ಲಿ ಬಿ.ಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್ ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಸೇವಾಸಿಂಧು ಪೋರ್ಟಲ್ ಆನ್ಲೈನ್ನಲ್ಲಿ (https://sevasindhu.karnataka.gov.in) ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜನವರಿ, 20 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ,ಎಫ್.ಎಂ.ಸಿ. ಕಾಲೇಜು ಹತ್ತಿರ ಮಡಿಕೇರಿ, ದೂರವಾಣಿ ಸಂಖ್ಯೆ ; 08272-225528 ಎಂದು ಪ್ರಕಟಣೆ ತಿಳಿಸಿದೆ.
ಕನ್ನಡಿಗ ಅಭ್ಯರ್ಥಿಗಳಿಗೆ ನ್ಯಾಯ ದೊರಕಿಸದ KPSC ತನ್ನ ಅಸಹಾಯಕತೆಯನ್ನು ಒಪ್ಪಿಕೊಳ್ಳಲಿ: ಡಾ.ಪುರುಷೋತ್ತಮ ಬಿಳಿಮಲೆ
ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು ಈ ಏರಿಯಾಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut