ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿನ ಅನಧಿಕೃತ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ ಎನ್ನುವಂತೆ ಸರ್ಕಾರದಿಂದ ಬಿ-ಖಾತಾ ನೀಡಲು ನಿರ್ಧಾರ ಕೈಗೊಂಡಿದೆ ಎನ್ನಲಾಗುತ್ತಿದೆ.
ರಾಜ್ಯದ ಪಟ್ಟಣ, ನಗರ ಪ್ರದೇಶದಲ್ಲಿನ ಅನಧಿಕೃತ ಆಸ್ತಿಗಳಿಗೆ ಬಿ-ಖಾತಾ ವಿತರಣೆ ಮಾಡಿದಂತೆಯೇ, ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅನಧಿಕೃತ ಆಸ್ತಿಗಳಿಗೂ ಇದೇ ಕ್ರಮ ವಹಿಸಲು ಮುಂದಾಗಿದೆ ಎಂಬುದಾಗಿ ತಿಳಿದು ಬಂದಿದೆ.
ರಾಜ್ಯ ಸರ್ಕಾರದಿಂದ ಹಳ್ಳಿಗಳಲ್ಲಿನ ಅನಧಿಕೃತ ಆಸ್ತಿಗಳಿಗೆ ಬಿ-ಖಾತಾ ನೀಡಲು ಕಾಯ್ದೆಗೂ ತಿದ್ದುಪಡಿ ತರೋದಕ್ಕೆ ಪರಿಶೀಲನೆ ನಡೆಸುತ್ತಿದೆ ಎಂಬುದಾಗಿ ಹೇಳಲಾಗುತ್ತಿದೆ.
ಈ ಹಿನ್ನಲೆಯಲ್ಲಿ ರಾಜ್ಯದ ಗ್ರಾಮೀಣ ಭಾಗದಲ್ಲಿನ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅನಧಿಕೃತ ಆಸ್ತಿಗಳಿಗೆ ನಗರ, ಪಟ್ಟಣ ವ್ಯಾಪ್ತಿಯಲ್ಲಿ ನೀಡುವಂತೆಯೇ ಬಿ-ಖಾತಾ ವಿತರಣೆಗೆ ನಿರ್ಧಾರವನ್ನು ಸರ್ಕಾರ ಶೀಘ್ರವೇ ಪ್ರಕಟಿಸೋ ಸಾಧ್ಯತೆ ಇದೆ.
‘ಫೈನಾನ್ಸ್’ನವರು ಬಲವಂತವಾಗಿ ವಸೂಲಿಗಿಳಿದ್ರೆ ಸಾಲ ಮನ್ನಾ: ವಿಧಾನಸಭೆಯಲ್ಲಿ ‘ಮಸೂದೆ’ ಮಂಡನೆ
ರಾಜ್ಯದಲ್ಲಿ ಗಲಭೆ ಸೃಷ್ಟಿಸಿದರೇ ಸ್ವಯಂಪ್ರೇರಿತ ಕೇಸ್ ದಾಖಲು: ಗೃಹ ಸಚಿವ ಡಾ.ಜಿ ಪರಮೇಶ್ವರ್ ಎಚ್ಚರಿಕೆ