ಬೆಂಗಳೂರು: ಇಂದೇ ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಸಚಿವ ಸ್ಥಾನಕ್ಕೆ ಸ್ವಇಚ್ಛೆಯಿಂದ ರಾಜೀನಾಮೆ ನೀಡುವುದಾಗಿ ಬಿ.ನಾಗೇಂದ್ರ ಪತ್ರಿಕಾಗೋಷ್ಠಿಯಲ್ಲಿ ಘೋಷಣೆ ಮಾಡಿದ್ದರು. ಅದರಂತೆ ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾದಂತ ಬಿ.ನಾಗೇಂದ್ರ ಅವರು, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ಕೆಲವನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ವಿಪಕ್ಷಗಳ ನಾಯಕರು ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಬೇಕು ಎಂಬುದಾಗಿ ಆಗ್ರಹಿಸಿದ್ದರು.
ಇದೀಗ ಖಾಸಗೀ ಕಾರಿನಲ್ಲಿ ಸಿಎಂ ಸಿದ್ಧರಾಮಯ್ಯ ಅವರ ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದಂತ ಬಿ.ನಾಗೇಂದ್ರ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮದ ಬಗ್ಗೆ ಕೆಲ ಕಾಲ ಚರ್ಚಿಸಿದರು. ಆ ಬಳಿಕ ಸಿಎಂ ಸಿದ್ಧರಾಮಯ್ಯ ಅವರಿಗೆ ಯಾವುದೇ ಒತ್ತಡವಿಲ್ಲದೇ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದಿದ್ದಾರೆ.
ಅವರು ಸಿಎಂ ಸಿದ್ಧರಾಮಯ್ಯಗೆ ಸಲ್ಲಿಸಿರುವಂತ ರಾಜೀನಾಮೆ ಪತ್ರದಲ್ಲಿ ನನ್ನ ಸ್ವಇಚ್ಛೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ
ನಾನು ‘ಲೋಕಸಭಾ ಚುನಾವಣೆ’ಯಲ್ಲಿ ತಂತ್ರ, ಕುತಂತ್ರ ನಡೆಸಿ ಗೆಲುವು ಪಡೆದಿಲ್ಲ: HDK
ವಿಧಾನಸಭೆಯಿಂದ ವಿಧಾನಪರಿಷತ್ತಿಗೆ 11 ಅಭ್ಯರ್ಥಿಗಳು ಅವಿರೋಧ ಆಯ್ಕೆ: ಎಂ.ಕೆ ವಿಶಾಲಾಕ್ಷಿ ಮಾಹಿತಿ