ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣದಲ್ಲಿ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಪಕ್ಷಕ್ಕೆ ಮುಜುಗರವಾಗಬಾರದೆಂದು ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಿದ್ದಾರೆ ಎಂಬುದಾಗಿ ತಿಳಿಸಿದರು.
ಸಿಎಂ ಸಿದ್ಧರಾಮಯ್ಯ ಭೇಟಿಯಾಗಿ ರಾಜೀನಾಮೆ ನೀಡಿದ್ದಾರೆ. ಅವರು ಈಗಾಗಲೇ ನಾನು ಅಕ್ರಮದಲ್ಲಿ ಭಾಗಿಯಾಗಿಲ್ಲ ಅಂತ ಸ್ಪಷ್ಟ ಪಡಿಸಿದ್ದರು. ಇದರ ನಡುವೆ ಪಕ್ಷಕ್ಕೆ ಮುಜುಗರ ಆಗಬಾರದು, ಧಕ್ಕೆಯಾಗಬಾರದು ಎನ್ನುವ ಕಾರಣಕ್ಕೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ ಎಂದರು.
BIG BREAKING: ಸಚಿವ ಸ್ಥಾನಕ್ಕೆ ‘ಬಿ.ನಾಗೇಂದ್ರ’ ರಾಜೀನಾಮೆ | B Nagendra resigns
ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್ : ಕೇವಲ 60 ಸೆಕೆಂಡ್ ನಲ್ಲಿ ʻಚಾರ್ಜ್ʼ ಆಗಲಿದೆ ಫೋನ್!