ಬೆಂಗಳೂರು: ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕೆಯುಡಬ್ಲ್ಯೂಜೆ ಮಾಜಿ ಅಧ್ಯಕ್ಷ, ರಣಕಹಳೆ ಪ್ರಾದೇಶಿಕ ಪತ್ರಿಕೆಯ ಸಂಪಾದಕರಾದಂತ ಬಿ.ಪಿ ಪ್ರಕಾಶ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.
ಇಂದು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಕರ್ನಾಯಕ ನಗರಾಭಿವೃದ್ಧಿ ಪ್ರಾಧಿಕಾರ ಕಾಯ್ದೆ 1987ರ ಕಲಂ3ರ ಉಪ ಕಲಂ 3(ಎ) ಮತ್ತು 3(ಎಂ) ಹಾಗೂ 3(4) ಅಡಿಯಲ್ಲಿ ಈ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು, ಸದಸ್ಯರನ್ನಾಗಿ ಈ ಕೆಳಕಂಡವರನ್ನು ನಾಮನಿರ್ದೇಶನ ಮಾಡಿ ಆದೇಶಿಸಿದ್ದಾರೆ.
ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಬಿ.ಪಿ ಪ್ರಕಾಶ್ ಅವರನ್ನು ನೇಮಕ ಮಾಡಿದ್ದರೇ, ಸದಸ್ಯರನ್ನಾಗಿ ಇದ್ರೀಸ್ ಖಾನ್, ಕಾರ್ತಿಕ್ ಕೆ.ಜೆ, ಎನ್ ಎಸ್ ಮಹೇಶ್ ಹಾಗೂ ಕಮಲಮ್ಮ ಅವರನ್ನು ನೇಮಕ ಮಾಡಲಾಗಿದೆ.
ವರದಿ; ಗಿರೀಶ್ ರಾಜ್, ಮಂಡ್ಯ
ಸಾಗರದಲ್ಲಿ ‘ಶಾಸಕ ಗೋಪಾಲಕೃಷ್ಣ ಬೇಳೂರು’ ನಡೆಸಿದ ‘ಜನ ಸಂಪರ್ಕ ಸಭೆ’ಗೆ ಭರ್ಜರಿ ರೆಸ್ಪಾನ್ಸ್!








