ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದಂತ ಬಿ.ಆರ್ ಜಯಂತ್ ಅವರು, ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಪಕ್ಷದಿಂದ ಹೊರ ನಡೆದಿರೋದಾಗಿ ತಿಳಿದು ಬಂದಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಬಿ.ಆರ್.ಜಯಂತ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಕಳೆದ ಐದು ವರ್ಷಗಳಿಂದ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಬಿ.ಆರ್.ಜಯಂತ್ ವೈಯಕ್ತಿಕ ಕಾರಣದಿಂದ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿರುವುದಾಗಿ ತಿಳಿದು ಬಂದಿದೆ.
ತಮ್ಮ ರಾಜೀನಾಮೆ ಪತ್ರವನ್ನು ಶಿವಮೊಗ್ಗ ಜಿಲ್ಲಾಧ್ಯಕ್ಷರ ಮೂಲಕ ಕೆಪಿಸಿಸಿ ಅಧ್ಯಕ್ಷರಿಗೆ ಸಲ್ಲಿಸಿದ್ದಾರೆ. ಈ ಮೂಲಕ ಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಜಯಂತ್ ಗುಡ್ ಬೈ ಹೇಳಿದ್ದಾರೆ.
ತನ್ನ ರಾಜೀನಾಮೆ ಪತ್ರದಲ್ಲಿ ತಮಗೆ ಐದು ವರ್ಷಗಳ ಅವಧಿಯಲ್ಲಿ ಸಹಕಾರ ನೀಡಿದ ಪಕ್ಷದ ಪದಾಧಿಕಾರಿಗಳಿಗೆ, ಪ್ರಮುಖರಿಗೆ, ಕಾರ್ಯಕರ್ತರಿಗೆ ಕೃತಜ್ಞತೆಗಳು ಎಂಬುದಾಗಿ ತಿಳಿಸಿದ್ದಾರೆ.
BREAKING NEWS: ‘ಮ್ಯಾನ್ಮಾರ್’ ಜೊತೆಗಿನ ‘ಮುಕ್ತ ಸಂಚಾರ ವ್ಯವಸ್ಥೆ’ಯನ್ನು ರದ್ದುಗೊಳಿಸಿದ ‘ಭಾರತ’
BREAKING: ಉಡುಪಿಯ ‘ಪರುಶುರಾಮ ಥೀಂ ಪಾರ್ಕ್’ ಹಗರಣ: ರಾಜ್ಯ ಸರ್ಕಾರದಿಂದ ‘CID ತನಿಖೆ’ಗೆ ವಹಿಸಿ ಆದೇಶ