ಬೆಂಗಳೂರು: ನಗರದಲ್ಲಿನ ಜವಾಹರ್ ಬಾಲಭವನ ಸೊಸೈಟಿಯ ಅಧ್ಯಕ್ಷರನ್ನಾಗಿ ಬಿಆರ್ ನಾಯ್ಡು ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಇಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ರಶ್ಮಿ ಎಂ ಎಸ್ ಅವರು ಅಧಿಸೂಚನೆ ಹೊರಡಿಸಿದ್ದಾರೆ.
ಬಿಆರ್ ನಾಯ್ಡು, ಎಂಬೇಸಿ ಹ್ಯಾಬಿಟೆಟ್, ಅರಮನೆ ರಸ್ತೆ, ವಸಂತನಗರ, ಬೆಂಗಳೂರು ಇವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಆಡಳಿತ ವ್ಯಾಪ್ತಿಯಡಿಯಲ್ಲಿ ಬರುವ ಜವಾಹರ್ ಬಾಲಭವನ ಸೊಸೈಟಿ, ಬೆಂಗಳೂರು ಇದರ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಎರಡು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ನೇಮಿಸಿ ಆದೇಶಿಸಿದ್ದಾರೆ.
ಕೇಂದ್ರ ಸಚಿವ ವಿ.ಸೋಮಣ್ಣ ಪುತ್ರನ ವಿರುದ್ಧ ‘420 ಕೇಸ್’ ದಾಖಲು | Union Minister V.Somanna
ಗಮನಿಸಿ: ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಂದ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ