ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಳೆ ಬಿ.ವೈ ರಾಘವೇಂದ್ರ ಅವರು ನಾಮಪತ್ರವನ್ನು ಸಲ್ಲಿಸಲಿದ್ದಾರೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಅವರು, ರಾಮಣ್ಣಶ್ರೇಷ್ಠಿ ಪಾರ್ಕ್ ನಿಂದ ಮೆರವಣಿಗೆ ಆರಂಭಿಸಲಾಗುತ್ತದೆ. ಅಲ್ಲಿಂದ ಡಿಸಿ ಕಚೇರಿಗೆ ನೂರಾರು ಮಂದಿ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಾಗುತ್ತದೆ ಎಂದರು.
ಅದಕ್ಕೂ ಮೊದಲು ರಾಘವೇಂದ್ರ ಸ್ವಾಮಿ ಮಠದಲ್ಲಿ ಪೂಜೆ ಸಲ್ಲಿಸಲಾಗುತ್ತದೆ. ನಾಳೆ ಬೆಳಿಗ್ಗೆ 10 ಗಂಟೆಗೆ ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ ಮೆರವಣಿಗೆ ಮೂಲಕ ತೆರಳಿ, ನಾಮಪತ್ರವನ್ನು ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.
ನಾಳೆ ನಾಮಪತ್ರ ಸಲ್ಲಿಕೆಯ ವೇಳೆಯಲ್ಲಿ ತಂದೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಹೆಚ್.ಡಿ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ಮಾಜಿ ಡಿಸಿಎಂ ಗೋವಿಂದ ಕಾರಜೋಳ ಸೇರಿದಂತೆ ಇತರೆ ರಾಜಕೀಯ ನಾಯಕರು ಸಾಥ್ ನೀಡಲಿದ್ದಾರೆ ಎಂದು ಹೇಳಿದರು.
BREAKING : ಪಶ್ಚಿಮ ಬಂಗಾಳ ರಾಜ್ಯಪಾಲರ ‘ಕೂಚ್ ಬೆಹಾರ್’ ಭೇಟಿಗೆ ‘ಚುನಾವಣಾ ಆಯೋಗ’ ತಡೆ