ಬೆಂಗಳೂರು : ಇದೇ 22ರಂದು ಬಾಲರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಜನವರಿ 22ರಂದು ರಾಜ್ಯಾದ್ಯಂತ ಸರ್ಕಾರ ರಜೆ ನೀಡುವಂತೆ ರಜೆ ಘೋಷಣೆ ಮಾಡಿ ರಾಮಭಕ್ತರಿಗೆ ಅನುಕೂಲ ಮಾಡಿಕೊಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವೀರೇಂದ್ರ ರಾಜ್ಯ ಸರ್ಕಾರಕ್ಕೆ ಅಗ್ರಹಿಸಿದ್ದಾರೆ.
ಈಗಾಗಲೇ ಹಲವು ರಾಜ್ಯಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ. ಕೇಂದ್ರ ಸರ್ಕಾರ ಕೂಡ ಅರ್ಧ ದಿನ ರಜೆ ಘೋಷಣೆ ಮಾಡಿದೆ.ಹಾಗಾಗಿ ರಾಜ್ಯದಲ್ಲೂ ರಜೆ ಘೋಷಣೆ ಮಾಡಬೇಕು ಎಂದು ಬಿವೈ ವಿಜಯೇಂದ್ರ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಅಲ್ಲದೆ ರಾಮ ಭಕ್ತರಿಗೆ ಸಮಸ್ಯೆ ಆಗದಂತೆ ಸರ್ಕಾರ ನೋಡಿಕೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ರಾಮಮಂದಿರ ಕಾರ್ಯಕ್ರಮದ ವಿಚಾರದಲ್ಲಿ ಕಾಂಗ್ರೆಸ್ ಗೆ ಗೊಂದಲವಿದೆ. ದುರುದ್ದೇಶಪೂರ್ವಕವಾಗಿ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಲಾಯಿತು. ವಾತಾವರಣ ಕಲುಷಿತಗೊಳಿಸಬೇಕೆಂಬ ದುರುದ್ದೇಶದಿಂದಲೇ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಲಾಗಿತ್ತು. ಕಾಂಗ್ರೆಸ್ ನಾಯಕರು ರಾಮಮಂದಿರ ಅಹ್ವಾನವನ್ನು ತಿರಸ್ಕರಿಸಿದ್ದಾರೆ.
ಅಹ್ವಾನ ತಿರಸ್ಕರಿಸಿ ಬಹು ಸಂಖ್ಯಾತರ ಭಾವನೆಗೆ ಧಕ್ಕೆ ಮಾಡಿದ್ದಾರೆ. ಅಲ್ಪಸಂಖ್ಯಾತರಿಗೆ ನೋವಾಗುತ್ತದೆ ಎಂದು ಆಹ್ವಾನವನ್ನು ತಿರಸ್ಕರಿಸಿದರು. ರಾಮಮಂದಿರ ನಿರ್ಮಾಣಕ್ಕೆ ಕರ್ನಾಟಕದಿಂದ ವಿಶೇಷ ಕೊಡುಗೆ ಇದೆ ಅಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವೀರೇಂದ್ರ ಹೇಳಿದರು.
22ರಂದು ಬಾಲರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ 22ರಂದು ರಾಜ್ಯಾದ್ಯಂತ ಸರ್ಕಾರ ರಜೆ ನೀಡುವಂತೆ ಕನ್ನಡಪರ ಸಂಘಟನೆಗಳು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದವು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕನ್ನಡಪರ ಸಂಘಟನೆಗಳು ಭೇಟಿಯಾಗಿ ಮನವಿ ಸಲ್ಲಿಸಿವೆ.