Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದ ಜನತೆಗೆ ಮತ್ತೊಂದು ಶಾಕ್ : ಪೆಟ್ರೋಲ್, ಡೀಸೆಲ್ ದರ ಏರಿಕೆ ಬೆನ್ನಲ್ಲೆ, ಖಾಸಗಿ ಬಸ್ ದರ ಶೇ.20 ರಷ್ಟು ಏರಿಕೆ!

BIG BREAKING : ಚಿನ್ನದ ಬೆಲೆಯಲ್ಲಿ 3,000 ರೂ. ಬೆಳ್ಳಿ ಬೆಲೆಯಲ್ಲಿ 19,000 ರೂ. ಇಳಿಕೆ | Gold silver prices fall

SHOCKING : ರಾಜ್ಯದಲ್ಲಿ ಹೆಚ್ಚಿದ ತಾಪಮಾನ : ದಕ್ಷಿಣಕನ್ನಡದಲ್ಲಿ ಹೀಟ್ ಸ್ಟ್ರೋಕ್ ನಿಂದ ನಾಯಿ ಸಾವು, ಪ್ರಾಣಿಗಳಿಗೆ ಹೆಚ್ಚಿದ ಸಂಕಷ್ಟ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈತಪರ ಬಜೆಟ್ ಮಂಡಿಸಲು ಸಿಎಂ ಸಿದ್ಧರಾಮಯ್ಯಗೆ ಬಿ.ವೈ.ವಿಜಯೇಂದ್ರ ಆಗ್ರಹ
KARNATAKA

ರೈತಪರ ಬಜೆಟ್ ಮಂಡಿಸಲು ಸಿಎಂ ಸಿದ್ಧರಾಮಯ್ಯಗೆ ಬಿ.ವೈ.ವಿಜಯೇಂದ್ರ ಆಗ್ರಹ

By ವಸಂತ ಬಿ ಈಶ್ವರಗೆರೆ

ಮಂಡ್ಯ: ರಾಜ್ಯದ ಮುಂದಿನ ಬಜೆಟ್ ರೈತಪರ ಬಜೆಟ್ ಆಗಿರಲಿ ಎಂದು ಮುಖ್ಯಮಂತ್ರಿಗಳನ್ನು ವಿನಂತಿಸುವುದಾಗಿ ಮತ್ತು ಆಗ್ರಹಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.

ಮಂಡ್ಯ ಜಿಲ್ಲೆಯ ಕೊತ್ತತ್ತಿ ಗ್ರಾಮದ ರೈತ ಸುಖೇಂದ್ರ ಶಿವಬಸಪ್ಪ ಅವರ ಜಮೀನಿನಲ್ಲಿ ಇಂದು ಭತ್ತ ನಾಟಿ ಕಾರ್ಯಕ್ರಮದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಜ್ಯ ಸರಕಾರಕ್ಕೆ ರೈತರ ಸಂಕಷ್ಟಕ್ಕೆ ಸ್ಪಂದಿಸುವ ಸದ್ಬುದ್ಧಿಯನ್ನು ತಾಯಿ ಚಾಮುಂಡೇಶ್ವರಿ ಕರುಣಿಸಲಿ ಎಂದು ಅವರು ಪ್ರಾರ್ಥಿಸಿದರು.

ಪಕ್ಷದ ಜಿಲ್ಲೆಯ ಮುಖಂಡರು, ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಭತ್ತ ನಾಟಿ ಮಾಡಿದ್ದಾಗಿ ಅವರು ತಿಳಿಸಿದರು. ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಯಾವುದೇ ರೈತಪರ ನಿರ್ಧಾರ ಮಾಡಿಲ್ಲ ಎಂದು ಟೀಕಿಸಿದರು.

ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರವು ಹಲವಾರು ಬಾರಿ ರೈತರ ಉತ್ಪನ್ನಗಳ ಬೆಂಬಲ ಬೆಲೆಯನ್ನು ಹೆಚ್ಚಿಸಿದೆ. ಕಿಸಾನ್ ಸಮ್ಮಾನ್ ಯೋಜನೆಯನ್ನೂ ಜಾರಿಗೊಳಿಸಿದ್ದಾರೆ. ಅದನ್ಯಾಕೆ ಸಿದ್ದರಾಮಯ್ಯರ ಸರಕಾರ ನಿಲ್ಲಿಸಿದೆ ಎಂದು ಕೇಳಿದರು. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ರೈತರು ಹೊಲಕ್ಕೆ ಟ್ರಾನ್ಸ್‍ಫಾರ್ಮರ್ ಹಾಕಲು 25 ಸಾವಿರ ರೂ. ಕಟ್ಟಿದರೆ ಸಾಕಾಗುತ್ತಿತ್ತು. ಸಿದ್ದರಾಮಯ್ಯರ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಇವತ್ತು 2ರಿಂದ 3 ಲಕ್ಷ ಖರ್ಚಾಗುತ್ತಿದೆ ಎಂದು ವಿವರಿಸಿದರು.

ಬಡವರ ವಿರೋಧಿ, ಅಭಿವೃದ್ಧಿಶೂನ್ಯ ಕಾಂಗ್ರೆಸ್ ಸರಕಾರ

ಒಂದು ಕಡೆ ಗ್ಯಾರಂಟಿ ಮೂಲಕ ಕೊಡುವುದಾಗಿ ಹೇಳುತ್ತಾರೆ. ಮತ್ತೊಂದು ಕಡೆ ಕಿತ್ತುಕೊಳ್ಳುವ ಕೆಲಸ ನಡೆಸುತ್ತಿದ್ದಾರೆ. ಇದು ಬಡವರ ವಿರೋಧಿ ಕಾಂಗ್ರೆಸ್ ಸರಕಾರ ಎಂದು ಆರೋಪಿಸಿದರು. ಇದು ಅಭಿವೃದ್ಧಿ ಶೂನ್ಯ ಸರಕಾರ ಎಂದು ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು.

ಇದು ರೈತವಿರೋಧಿ ಸರಕಾರ. ಈ ಅಧಿವೇಶನದಲ್ಲಿ ಬಿಜೆಪಿ, ಈ ಭ್ರಷ್ಟ ಕಾಂಗ್ರೆಸ್ ಸರಕಾರದ ಕಿವಿ ಹಿಂಡುವ ಕೆಲಸ ಮಾಡಲಿದೆ. ಕಾಂಗ್ರೆಸ್ ಸರಕಾರದ ನಿಜ ಬಣ್ಣವನ್ನು ರಾಜ್ಯದ ಜನರ ಮುಂದೆ ಬಿಚ್ಚಿಡಲಿದ್ದೇವೆ ಎಂದು ಹೇಳಿದರು.

ಕಾವೇರಿ ಕೊಳ್ಳದ ರೈತರಿಗೆ ಅನ್ಯಾಯ ಮಾಡುವ ರೀತಿಯಲ್ಲಿ, ತಮಿಳುನಾಡಿನ ಸ್ಟಾಲಿನ್‍ಗೆ, ಯುಪಿಎ ಮಿತ್ರಕೂಟಕ್ಕೆ ಖುಷಿಪಡಿಸಲು ಯಥೇಚ್ಛವಾಗಿ ನೀರು ಬಿಡುವ ಕೆಲಸವನ್ನು ಇದೇ ಕಾಂಗ್ರೆಸ್ ಸರಕಾರ ಮಾಡಿತ್ತು ಎಂದು ಅವರು ಆಕ್ಷೇಪಿಸಿದರು.

ರಾಜ್ಯವು ಈಗಾಗಲೇ ಪ್ರಖರ ಬಿಸಿಲನ್ನು ನೋಡುತ್ತಿದೆ. ಉಷ್ಣಾಂಶದ ತೀವ್ರ ಹೆಚ್ಚಳವನ್ನೂ ನಿರೀಕ್ಷಿಸಲಾಗಿದೆ. ಸಿದ್ದರಾಮಯ್ಯನವರು ರೈತರ ಪರ ಬಜೆಟ್ ಮಂಡಿಸಲಿ; ಸರಕಾರ ಜಾನುವಾರುಗಳಿಗೆ ಮೇವನ್ನು ಕ್ರೋಡೀಕರಿಸಿ ಇಡಬೇಕು. ಶುದ್ಧ ಕುಡಿಯುವ ನೀರು ಪೂರೈಕೆ ಕಡೆ ಗಮನಿಸಬೇಕು ಎಂದು ಒತ್ತಾಯಿಸಿದರು.

ಕಿಸಾನ್ ಸಮ್ಮಾನ್ ಹೆಚ್ಚುವರಿ ಮೊತ್ತ, ವಿದ್ಯಾನಿಧಿ ಸ್ಥಗಿತಗೊಳಿಸಿದ ಕಾಂಗ್ರೆಸ್

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರೈತರಿಗೆ 6 ಸಾವಿರ ರೂ. ನೀಡುವ ಕಿಸಾನ್ ಸಮ್ಮಾನ್ ಯೋಜನೆ ಜಾರಿ ಮಾಡಿದರು. ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿ 4 ಸಾವಿರ ರೂ. ಹೆಚ್ಚುವರಿಯಾಗಿ ರೈತರಿಗೆ ನೀಡಿದರು. ಕಾಂಗ್ರೆಸ್ ಸರಕಾರ ಬಂದ ಬಳಿಕ ಅದನ್ನು ನಿಲ್ಲಿಸಿದ್ದಾರೆ. ಹಿಂದೆ ಬಿಜೆಪಿ ಸರಕಾರವು ರೈತ ವಿದ್ಯಾನಿಧಿ ಕೊಟ್ಟಿದ್ದು, ಅದನ್ನೂ ನಿಲ್ಲಿಸಿದ್ದಾರೆ ಎಂದು ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದರು.

ಮಂಡ್ಯ ಜಿಲ್ಲೆ ಎಂದರೆ ಅದು ಸಕ್ಕರೆಯ ನಾಡು. ಅಕ್ಕರೆಯ ನಾಡು; ಮಂಡ್ಯ ಜಿಲ್ಲೆಯ ಜಲ, ಸಿರಿ ಮತ್ತು ಧಾನ್ಯಸಂಪತ್ತು ಬಗ್ಗೆ ಮೈಸೂರು ಮಹಾರಾಜರ ಕನಸು ಕಂಡಿದ್ದರು. ಮಂಡ್ಯ ಜಿಲ್ಲೆ ಯಾವತ್ತೂ ಹಚ್ಚ ಹಸುರಾಗಿರಬೇಕು. ಈ ಭಾಗದ ರೈತರಿಂದ ಮೈಸೂರು ಸೀಮೆಯ ಎಲ್ಲ ಜನರಿಗೆ ಎರಡು ತುತ್ತು ಅನ್ನ ಕೊಡುವ ಕೆಲಸ ಆಗಬೇಕು ಎಂದು ಕನಸು ಕಂಡಿದ್ದರು ಎಂದು ವಿವರಿಸಿದರು.

ಮಂಡ್ಯ ಜಿಲ್ಲೆ ಎಂದರೆ ಒಬ್ಬ ರೈತ ಹೋರಾಟಗಾರ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಜನ್ಮ ಕೊಟ್ಟ ನಾಡು. ಬೂಕನಕೆರೆಯ ಸಿದ್ದಲಿಂಗಪ್ಪ ಯಡಿಯೂರಪ್ಪ ಅವರಿಗೆ ಜನ್ಮ ಕೊಟ್ಟ ಪುಣ್ಯಭೂಮಿ ಎಂದು ತಿಳಿಸಿದರು. ನಾನು ಕೂಡ ಮಂಡ್ಯ ಜಿಲ್ಲೆಯ ಮೊಮ್ಮಗ ಎಂದರು. ಯಡಿಯೂರಪ್ಪ ಅವರಿಗೆ ರೈತಪರ ಹೋರಾಟಕ್ಕೆ ಮಂಡ್ಯ ಜಿಲ್ಲೆಯ ಮಣ್ಣು ಪ್ರೇರಣೆ ಕೊಟ್ಟಿದೆ ಎಂದು ವಿಶ್ಲೇಷಿಸಿದರು.

ಯಡಿಯೂರಪ್ಪ ಅವರು ರೈತರ ಹೆಸರಿನಲ್ಲಿ ಪ್ರಮಾಣ ತೆಗೆದುಕೊಂಡು, ರೈತರಿಗೆ ಒಂದು ಪ್ರತ್ಯೇಕ ಬಜೆಟ್ ಮಂಡಿಸಿದ್ದರು. ರೈತರ ಪಂಪ್‍ಸೆಟ್‍ಗಳಿಗೆ ಉಚಿತ ವಿದ್ಯುತ್ ಕೊಟ್ಟಂಥ ಏಕೈಕ ಮುಖ್ಯಮಂತ್ರಿ, ಧೀಮಂತ ನಾಯಕ, ರೈತನಾಯಕ ಸನ್ಮಾನ್ಯ ಯಡಿಯೂರಪ್ಪನವರು ಎಂದು ತಿಳಿಸಿದರು.

BIG NEWS: ಸಿನಿಮಾ ಇಲ್ಲದೇ ಬದುಕುವ ಶಕ್ತಿ ನನಗಿದೆ, ಅವರು ಬೆಳೆಯಲು ಸರ್ಕಾರ, ಜನ ಬೇಕು: ಡಿಸಿಎಂ ಡಿಕೆಶಿ

GOOD NEWS : ರಾಜ್ಯದ ಮಹಿಳೆಯರಿಗೆ ಶುಭಸುದ್ದಿ : ಅಕ್ಟೋಬರ್-ನವೆಂಬರ್ ನಲ್ಲಿ ಅರ್ಜಿ ಸಲ್ಲಿಸಿದವರ ಖಾತೆಗೆ `ಗೃಹಲಕ್ಷ್ಮಿ’ ಹಣ ಜಮೆ.!

Share. Facebook Twitter LinkedIn WhatsApp Email

Related Posts

BREAKING : ರಾಜ್ಯದ ಜನತೆಗೆ ಮತ್ತೊಂದು ಶಾಕ್ : ಪೆಟ್ರೋಲ್, ಡೀಸೆಲ್ ದರ ಏರಿಕೆ ಬೆನ್ನಲ್ಲೆ, ಖಾಸಗಿ ಬಸ್ ದರ ಶೇ.20 ರಷ್ಟು ಏರಿಕೆ!

1 Min Read

SHOCKING : ರಾಜ್ಯದಲ್ಲಿ ಹೆಚ್ಚಿದ ತಾಪಮಾನ : ದಕ್ಷಿಣಕನ್ನಡದಲ್ಲಿ ಹೀಟ್ ಸ್ಟ್ರೋಕ್ ನಿಂದ ನಾಯಿ ಸಾವು, ಪ್ರಾಣಿಗಳಿಗೆ ಹೆಚ್ಚಿದ ಸಂಕಷ್ಟ!

1 Min Read

ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದ ಬೆನ್ನಲ್ಲೇ, ಪರಪ್ಪನ ಅಗ್ರಹಾರ ಜೈಲಲ್ಲಿ ಮೌನಕ್ಕೆ ಶರಣಾದ ನಟ ದರ್ಶನ್!

1 Min Read
Recent News

BREAKING : ರಾಜ್ಯದ ಜನತೆಗೆ ಮತ್ತೊಂದು ಶಾಕ್ : ಪೆಟ್ರೋಲ್, ಡೀಸೆಲ್ ದರ ಏರಿಕೆ ಬೆನ್ನಲ್ಲೆ, ಖಾಸಗಿ ಬಸ್ ದರ ಶೇ.20 ರಷ್ಟು ಏರಿಕೆ!

BIG BREAKING : ಚಿನ್ನದ ಬೆಲೆಯಲ್ಲಿ 3,000 ರೂ. ಬೆಳ್ಳಿ ಬೆಲೆಯಲ್ಲಿ 19,000 ರೂ. ಇಳಿಕೆ | Gold silver prices fall

SHOCKING : ರಾಜ್ಯದಲ್ಲಿ ಹೆಚ್ಚಿದ ತಾಪಮಾನ : ದಕ್ಷಿಣಕನ್ನಡದಲ್ಲಿ ಹೀಟ್ ಸ್ಟ್ರೋಕ್ ನಿಂದ ನಾಯಿ ಸಾವು, ಪ್ರಾಣಿಗಳಿಗೆ ಹೆಚ್ಚಿದ ಸಂಕಷ್ಟ!

Pan Card New Updates: `ಪ್ಯಾನ್ ಕಾರ್ಡ್’ ನಿಯಮದಲ್ಲಿ 2 ಮಹತ್ವದ ಬದಲಾವಣೆ: ಹಣ ಡ್ರಾ ಮಾಡುವ ಮುನ್ನ ಈ ಹೊಸ ಷರತ್ತುಗಳ ಪಾಲನೆ ಕಡ್ಡಾಯ.!

State News
KARNATAKA

BREAKING : ರಾಜ್ಯದ ಜನತೆಗೆ ಮತ್ತೊಂದು ಶಾಕ್ : ಪೆಟ್ರೋಲ್, ಡೀಸೆಲ್ ದರ ಏರಿಕೆ ಬೆನ್ನಲ್ಲೆ, ಖಾಸಗಿ ಬಸ್ ದರ ಶೇ.20 ರಷ್ಟು ಏರಿಕೆ!

By ಸುರೇಶ್‌ KARNATAKA 1 Min Read

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಬೆಲೆ ಏರಿಕೆಯ ಬಿಸಿ ಒಂದರ ಮೇಲೊಂದರಂತೆ ತಟ್ಟುತ್ತಲೇ ಇದೆ. ಇತ್ತೀಚೆಗಷ್ಟೇ ಪೆಟ್ರೋಲ್ ಮತ್ತು ಡೀಸೆಲ್ ದರ…

SHOCKING : ರಾಜ್ಯದಲ್ಲಿ ಹೆಚ್ಚಿದ ತಾಪಮಾನ : ದಕ್ಷಿಣಕನ್ನಡದಲ್ಲಿ ಹೀಟ್ ಸ್ಟ್ರೋಕ್ ನಿಂದ ನಾಯಿ ಸಾವು, ಪ್ರಾಣಿಗಳಿಗೆ ಹೆಚ್ಚಿದ ಸಂಕಷ್ಟ!

ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದ ಬೆನ್ನಲ್ಲೇ, ಪರಪ್ಪನ ಅಗ್ರಹಾರ ಜೈಲಲ್ಲಿ ಮೌನಕ್ಕೆ ಶರಣಾದ ನಟ ದರ್ಶನ್!

BIG NEWS : ರಾಜ್ಯ ಸರ್ಕಾರದ ಸಾಧನಾ ಸಮಾವೇಶದ ದಿನಾಂಕದಲ್ಲಿ ಬದಲಾವಣೆ : ಮೇ 19ಕ್ಕೆ ನಡೆಸಲು ತೀರ್ಮಾನ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.