Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗಮನಿಸಿ : ಕೇವಲ ಆಧಾರ್ ಕಾರ್ಡ್ ಇದ್ದರೆ ಸಾಕು 5 ನಿಮಿಷಗಳಲ್ಲಿ ಸಿಗಲಿದೆ ನಿಮಗೆ `ಗ್ಯಾಸ್ ಸಿಲಿಂಡರ್’.!

23/04/2026 9:58 AM

ಲೆಬನಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ: ಮಹಿಳಾ ಪತ್ರಕರ್ತೆ ಸೇರಿ ಐವರು ಸಾವು! ಕದನ ವಿರಾಮದ ನಡುವೆಯೂ ಸಂಘರ್ಷ

23/04/2026 9:54 AM

ತೈಲ ಆಮದು ಕಡಿತಕ್ಕೆ ಮಾಸ್ಟರ್ ಪ್ಲಾನ್: ಇ-100 ಇಂಧನ ಮತ್ತು ಫ್ಲೆಕ್ಸ್ ಫ್ಯುಯೆಲ್ ವಾಹನಗಳಿಗೆ ಕೇಂದ್ರದ ಹಸಿರು ನಿಶಾನೆ

23/04/2026 9:50 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಭಂಡತನ, ಹುಡುಗಾಟಿಕೆ ಬಿಡಿ, ರಾಜೀನಾಮೆ ಕೊಡಿ: ಸಿಎಂಗೆ ಬಿ.ವೈ.ವಿಜಯೇಂದ್ರ ಒತ್ತಾಯ
KARNATAKA

ಭಂಡತನ, ಹುಡುಗಾಟಿಕೆ ಬಿಡಿ, ರಾಜೀನಾಮೆ ಕೊಡಿ: ಸಿಎಂಗೆ ಬಿ.ವೈ.ವಿಜಯೇಂದ್ರ ಒತ್ತಾಯ

By kannadanewsnow0919/10/2024 3:58 PM

ಬೆಂಗಳೂರು: ದೆಹಲಿಯಲ್ಲಿ ಆಮ್ ಆದ್ಮಿ ಪಾರ್ಟಿಯ ಅರವಿಂದ ಕೇಜ್ರಿವಾಲ್ ಅವರ ಪರಿಸ್ಥಿತಿಯನ್ನು ದೇಶ, ರಾಜ್ಯದ ಜನರು ನೋಡಿದ್ದಾರೆ. ಸುತ್ತಿ ಬಳಸಿ ಮಾತನಾಡುವುದಿಲ್ಲ; ನೇರವಾಗಿ ಹೇಳುತ್ತೇನೆ. ಮುಖ್ಯಮಂತ್ರಿಗಳು ಭಂಡತನ, ಹುಡುಗಾಟಿಕೆ ಬಿಟ್ಟು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಒತ್ತಾಯಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸಿಎಂ ಅವರು ಕಾಂಗ್ರೆಸ್ ಪಕ್ಷದ ಹೈಕಮಾಂಡಿನ ಬೆಂಬಲ ಇದೆ ಎಂಬಂತೆ ವರ್ತಿಸುತ್ತಿದ್ದಾರೆ. ಎಸ್‍ಟಿ ಅಭಿವೃದ್ಧಿ ನಿಗಮದಲ್ಲಿ ದೋಚಿದ ಹಣವು ಕಾಂಗ್ರೆಸ್ ಹೈಕಮಾಂಡಿಗೆ ತಲುಪಿದೆ ಎಂಬ ವಿಷಯವೂ ಕೇಳಿಬರುತ್ತಿದೆ. ಆದ್ದರಿಂದ ಹೈಕಮಾಂಡ್ ಸಿದ್ದರಾಮಯ್ಯರ ಪರ ನಿಂತಿದೆ ಎಂಬುದು ದೊಡ್ಡ ವಿಚಾರವಲ್ಲ. ಹೈಕೋರ್ಟ್ ತೀರ್ಪಿನಲ್ಲಿ ತಿಳಿಸಿದ ವಿಚಾರಗಳು, ಜನಪ್ರತಿನಿಧಿಗಳ ಕೋರ್ಟಿನ ಆದೇಶದ ಕುರಿತು ಸಿದ್ದರಾಮಯ್ಯನವರು ಇನ್ನೊಂದು ಬಾರಿ ಓದಿದರೆ ತಕ್ಷಣ ರಾಜೀನಾಮೆ ಕೊಡಲು ಅವರಿಗೂ ಅನುಕೂಲವಾಗುತ್ತದೆ ಎಂದು ಪ್ರಶ್ನೆಗೆ ಉತ್ತರಿಸಿದರು.

ಮುಖ್ಯಮಂತ್ರಿಯವರು ರಾಜೀನಾಮೆ ಕೊಡುತ್ತಾರೆ. ಕೊಡಲೇಬೇಕಾಗುತ್ತದೆ. ಬಹಳ ದಿನ ಓಡಿಹೋಗಲು ಸಾಧ್ಯವಿಲ್ಲ. ಗೌರವಯುತವಾಗಿ ರಾಜೀನಾಮೆ ಕೊಟ್ಟರೆ ರಾಜ್ಯಕ್ಕೂ ಒಳ್ಳೆಯದು; ಅವರ ಗೌರವವೂ ಅಲ್ಪಸ್ವಲ್ಪ ಉಳಿಯುತ್ತದೆ ಎಂದು ತಿಳಿಸಿದರು. ಮುಖ್ಯಮಂತ್ರಿಯವರು ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿದರು.

ಮುಡಾ ಹಗರಣ ನಡೆದಿಲ್ಲ; ಬಿಜೆಪಿಯವರಿಗೆ ತಲೆ ಕೆಟ್ಟಿದೆ ಎಂಬಂತೆ ಮುಖ್ಯಮಂತ್ರಿಗಳು ಮಾತನಾಡುತ್ತಿದ್ದರು. 62 ಕೋಟಿ ಪರಿಹಾರ ಅಪೇಕ್ಷಿಸದೆ 14 ನಿವೇಶನ ಹಿಂತಿರುಗಿಸುವ ಪ್ರಯತ್ನವನ್ನು ಮುಖ್ಯಮಂತ್ರಿಗಳು ಮಾಡಿದ್ದಾರೆ. ಹೈಕೋರ್ಟಿನ ತೀರ್ಪು, ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ಬಳಿಕವೂ ಮುಖ್ಯಮಂತ್ರಿಗಳು ತಮ್ಮ ಭಂಡತನ ಮುಂದುವರೆಸಿದ್ದಾರೆ ಎಂದು ಆಕ್ಷೇಪಿಸಿದರು.

ನಿರಪರಾಧಿ ಎಂಬಂತೆ ಬಿಂಬಿಸಿಕೊಳ್ಳುವ ಪ್ರಯತ್ನ..

ಇ.ಡಿ. ಅಖಾಡಕ್ಕೆ ಇಳಿದಿದೆ. ಮೈಸೂರು ಮುಡಾ ಮೇಲೆ ದಾಳಿಯನ್ನೂ ನಡೆಸಿದೆ. ಇವತ್ತು ಕೂಡ ದಾಳಿ ಮುಂದುವರೆದಿದೆ. ಆದರೆ, ಮುಖ್ಯಮಂತ್ರಿಗಳು ತಾನು ನಿರಪರಾಧಿ ಎಂಬಂತೆ ಬಿಂಬಿಸಿಕೊಳ್ಳುವ ಪ್ರಯತ್ನದಲ್ಲಿ ಇದ್ದಾರೆ. ಇ.ಡಿ. ಕೇಂದ್ರ ಸರಕಾರದ ಕೈಗೊಂಬೆ ಎನ್ನುವ ರೀತಿಯಲ್ಲಿ ಟೀಕಿಸುತ್ತಿದ್ದಾರೆ. ಕೆಳಗೆ ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬ ಭಾವನೆಯಲ್ಲಿ ಮುಖ್ಯಮಂತ್ರಿಗಳು ಇದ್ದಂತಿದೆ ಎಂದು ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು.

ಚನ್ನಪಟ್ಟಣ ಅಭ್ಯರ್ಥಿ ಕುರಿತು ಚರ್ಚಿಸಿ ನಿರ್ಧಾರ..

ಚನ್ನಪಟ್ಟಣ ಅಭ್ಯರ್ಥಿ ಕುರಿತು ಕುಮಾರಸ್ವಾಮಿಯವರ ಜೊತೆ ಚರ್ಚೆಗೆ ಸಮಯ, ಸ್ಥಳ ನಿಗದಿ ಆಗಿಲ್ಲ ಎಂದು ಪ್ರಶ್ನೆಗೆ ಉತ್ತರಿಸಿದ ಅವರು, ಇವತ್ತು ಅಥವಾ ನಾಳೆ ಕುಳಿತು ಚರ್ಚಿಸುತ್ತೇವೆ ಎಂದರು. ಯೋಗೇಶ್ವರ್ ಅವರು ಚನ್ನಪಟ್ಟಣದಲ್ಲಿ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಆ ಕ್ಷೇತ್ರಕ್ಕೆ ಅವರದೇ ಆದ ಕೊಡುಗೆ ನೀಡಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ಅವರು ಬಳಿಕ ಆ ಕ್ಷೇತ್ರವನ್ನು ಪ್ರತಿನಿಧಿಸಿದ್ದು, ಈಗ ಸಂಸದ, ಕೇಂದ್ರದ ಸಚಿವರಾಗಿದ್ದಾರೆ. ಆ ಕ್ಷೇತ್ರದ ಕುರಿತು ಎಚ್‍ಡಿಕೆಯವರು ನಮ್ಮ ಪಕ್ಷದ ವರಿಷ್ಠರ ಜೊತೆ ಚರ್ಚೆ ಮಾಡಿದ್ದಾರೆ ಎಂದು ಮತ್ತೊಂದು ಪ್ರಶ್ನೆಗೆ ಉತ್ತರ ನೀಡಿದರು.

ಯೋಗೇಶ್ವರ್‍ಗೆ ಅನ್ಯಾಯ ಆಗಬಾರದೆಂಬ ಆಸೆ ನನಗೂ ಇದೆ. ಇಲ್ಲಿಯೂ ಚರ್ಚೆ ಮಾಡುತ್ತೇವೆ. ಕೇಂದ್ರದ ವರಿಷ್ಠರು ಅಂತಿಮ ತೀರ್ಮಾನ ಮಾಡುತ್ತಾರೆ ಎಂದು ಪ್ರಶ್ನೆಗೆ ಉತ್ತರಿಸಿದರು.

ತುಮಕೂರಿನಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ ನಿರ್ಮಾಣ: ಗೃಹ ಸಚಿವ ಡಾ.ಜಿ ಪರಮೇಶ್ವರ್

ತುಮಕೂರಿನ ಜನತೆಗೆ ಗುಡ್ ನ್ಯೂಸ್: ಶೀಘ್ರವೇ ‘ಗ್ರೇಟರ್ ಬೆಂಗಳೂರು’ ವ್ಯಾಪ್ತಿಗೆ ತುಮಕೂರು ಸೇರ್ಪಡೆ

Share. Facebook Twitter LinkedIn WhatsApp Email

Related Posts

ಗಮನಿಸಿ : ಕೇವಲ ಆಧಾರ್ ಕಾರ್ಡ್ ಇದ್ದರೆ ಸಾಕು 5 ನಿಮಿಷಗಳಲ್ಲಿ ಸಿಗಲಿದೆ ನಿಮಗೆ `ಗ್ಯಾಸ್ ಸಿಲಿಂಡರ್’.!

23/04/2026 9:58 AM2 Mins Read

GOOD NEWS : ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : `PM ಇಂಟರ್ನ್ ಶಿಪ್ ಯೋಜನೆ’ ಯಡಿ ಪ್ರತಿ ತಿಂಗಳು ಸಿಗಲಿದೆ ₹9,000 ಸ್ಟೈಫಂಡ್.!

23/04/2026 9:48 AM1 Min Read

ಮುಖದ ಮೇಲಿನ ಕಪ್ಪು ಕಲೆ ಸಮಸ್ಯೆಗೆ ಆಲೂಗಡ್ಡೆ ರಸವೇ ರಾಮಬಾಣ.!

23/04/2026 9:43 AM1 Min Read
Recent News

ಗಮನಿಸಿ : ಕೇವಲ ಆಧಾರ್ ಕಾರ್ಡ್ ಇದ್ದರೆ ಸಾಕು 5 ನಿಮಿಷಗಳಲ್ಲಿ ಸಿಗಲಿದೆ ನಿಮಗೆ `ಗ್ಯಾಸ್ ಸಿಲಿಂಡರ್’.!

23/04/2026 9:58 AM

ಲೆಬನಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ: ಮಹಿಳಾ ಪತ್ರಕರ್ತೆ ಸೇರಿ ಐವರು ಸಾವು! ಕದನ ವಿರಾಮದ ನಡುವೆಯೂ ಸಂಘರ್ಷ

23/04/2026 9:54 AM

ತೈಲ ಆಮದು ಕಡಿತಕ್ಕೆ ಮಾಸ್ಟರ್ ಪ್ಲಾನ್: ಇ-100 ಇಂಧನ ಮತ್ತು ಫ್ಲೆಕ್ಸ್ ಫ್ಯುಯೆಲ್ ವಾಹನಗಳಿಗೆ ಕೇಂದ್ರದ ಹಸಿರು ನಿಶಾನೆ

23/04/2026 9:50 AM

GOOD NEWS : ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : `PM ಇಂಟರ್ನ್ ಶಿಪ್ ಯೋಜನೆ’ ಯಡಿ ಪ್ರತಿ ತಿಂಗಳು ಸಿಗಲಿದೆ ₹9,000 ಸ್ಟೈಫಂಡ್.!

23/04/2026 9:48 AM
State News
KARNATAKA

ಗಮನಿಸಿ : ಕೇವಲ ಆಧಾರ್ ಕಾರ್ಡ್ ಇದ್ದರೆ ಸಾಕು 5 ನಿಮಿಷಗಳಲ್ಲಿ ಸಿಗಲಿದೆ ನಿಮಗೆ `ಗ್ಯಾಸ್ ಸಿಲಿಂಡರ್’.!

By kannadanewsnow5723/04/2026 9:58 AM KARNATAKA 2 Mins Read

ಈಗ ಗ್ಯಾಸ್ ಸಿಲಿಂಡರ್ ಪಡೆಯುವುದು ಮೊದಲಿನಿಗಿಂತ ತುಂಬಾ ಸುಲಭವಾಗಿದೆ. ವಿಶೇಷವಾಗಿ ವಿದ್ಯಾರ್ಥಿಗಳು, ವಲಸೆ ಕಾರ್ಮಿಕರು ಮತ್ತು ಬಾಡಿಗೆ ಮನೆಯಲ್ಲಿ ವಾಸಿಸುವವರಿಗೆ…

GOOD NEWS : ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : `PM ಇಂಟರ್ನ್ ಶಿಪ್ ಯೋಜನೆ’ ಯಡಿ ಪ್ರತಿ ತಿಂಗಳು ಸಿಗಲಿದೆ ₹9,000 ಸ್ಟೈಫಂಡ್.!

23/04/2026 9:48 AM

ಮುಖದ ಮೇಲಿನ ಕಪ್ಪು ಕಲೆ ಸಮಸ್ಯೆಗೆ ಆಲೂಗಡ್ಡೆ ರಸವೇ ರಾಮಬಾಣ.!

23/04/2026 9:43 AM

ALERT : `QR’ ಕೋಡ್ ಸ್ಕ್ಯಾನ್ ಮಾಡುವ ಮುನ್ನ ಇರಲಿ ಎಚ್ಚರ: ನಿಮ್ಮ ಹಣ ವ್ಯಾಪಾರಿಗಲ್ಲ, ವಂಚಕನ ಖಾತೆಗೆ ಹೋಗಬಹುದು!

23/04/2026 9:10 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.