ಹಾಕಿ ಲೆಜೆಂಡ್ ಬಲ್ಬೀರ್ ಸಿಂಗ್ ಆರೋಗ್ಯ ಸ್ಥಿತಿ ಗಂಭೀರ : ಐಸಿಯುನಲ್ಲಿ ಚಿಕಿತ್ಸೆ – Kannada News Now


Other Sports Sports

ಹಾಕಿ ಲೆಜೆಂಡ್ ಬಲ್ಬೀರ್ ಸಿಂಗ್ ಆರೋಗ್ಯ ಸ್ಥಿತಿ ಗಂಭೀರ : ಐಸಿಯುನಲ್ಲಿ ಚಿಕಿತ್ಸೆ

ಚಂಡೀಗಢ: ಲೆಜೆಂಡ್ ಹಾಕಿ ಆಟಗಾರ ಬಲ್ಬೀರ್ ಸಿಂಗ್ ಸೀನಿಯರ್ ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದ್ದು, ಅವರನ್ನು ಚಂಡೀಗಢ್‌ದ ಆಸ್ಪತ್ರೆಗೆ ದಾಖಲಿಸಲಾಗಿದೆ.ಅವರ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಮೊದಲು ಅವರನ್ನು ಪಿಜಿಐ ಚಂಡೀಗಢ್ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿಂದ ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.

‘ಶುಕ್ರವಾರ ಸಂಜೆ ಅವರ ಆರೋಗ್ಯವು ಹಠಾತ್ತನೆ ಹದಗೆಟ್ಟಿತ್ತು. ಸದ್ಯ ಫೋರ್ಟಿಸ್ ಆಸ್ಪತ್ರೆಯ ಐಸಿಯುನಲ್ಲಿ ಚೀತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹಾಕಿ ಆಟಗಾರನ ಮೊಮ್ಮಗ ಕಬೀರ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಕಳೆದ ಎರಡು-ಮೂರು ದಿನಗಳಿಂದ ಅವರು ಉಸಿರಾಟದ ತೊಂದರೆ ಅನುಭವಿಸುತ್ತಿದ್ದು. ಅವರ ವಿವಿಧ ಅಂಗಗಳ ಮೇಲೂ ಪರಿಣಾಮ ಬೀರಿದೆ. ಅವರ ಪರಿಸ್ಥಿತಿ ತೀರಾ ಹದಗೆಟ್ಟಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.