ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ಬಾಬುಸಾಬ್ ಪಾಳ್ಯ ದಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಭೀಕರ ದುರಂತದಲ್ಲಿ 8 ಜನ ಕಾರ್ಮಿಕರು ಮೃತಪಟ್ಟಿದ್ದರು. ಇದೀಗ ಮೃತ ಕುಟುಂಬಸ್ಥರಿಗೆ ಸಚಿವ ಸಂತೋಷ್ ಲಾಡ್ ಪರಿಹಾರದ ಚೆಕ್ ವಿತರಿಸಿದ್ದಾರೆ.
ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿತ ದುರಂತ ಪ್ರಕರಣಕ್ಕೆ ಸಂಬಂಧಪಟ್ಟಂತೆ 8 ಜನರು ಕಾರ್ಮಿಕರು ಸಾವನ್ನಪ್ಪಿದ್ದರು. ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಸೂಕ್ತ ಮಾಹಿತಿ ಪಡೆದುಕೊಂಡರು.ಬಳಿಕ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ಘೋಷಿಸಿದ್ದಾರೆ.
ಇದೀಗ ಬೆಂಗಳೂರಿನ ವಿಕಾಸ ಸೌಧದಲ್ಲಿ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮೃತ ಕುಟುಂಬಸ್ಥರಿಗೆ 2.04 ಲಕ್ಷ ಪರಿಹಾರದ ಚೆಕ್ ವಿತರಿಸಿದ್ದಾರೆ.