ಗ್ವಾಲಿಯರ್ (ಮಧ್ಯಪ್ರದೇಶ): ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ನಾಲ್ಕು ಕಾಲುಗಳಿರುವ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಇಲ್ಲಿನ ಕಮಲರಾಜ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗದಲ್ಲಿ ಸಿಕಂದರ್ ಕಂಪೂ ಪ್ರದೇಶದ ಆರತಿ ಕುಶ್ವಾಹ ಅವರು ಬುಧವಾರ ಈ ಮಗುವಿಗೆ ಜನ್ಮ ನೀಡಿದ್ದಾರೆ. ನವಜಾತ ಶಿಶು ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಜಯರೋಗ್ಯ ಆಸ್ಪತ್ರೆ ಸಮೂಹದ ಸೂಪರಿಂಟೆಂಡೆಂಟ್ ಡಾ.ಆರ್.ಕೆ.ಎಸ್.ಧಕಡ್ ಮಾತನಾಡಿ, “ಮಗುವಿಗೆ ಹುಟ್ಟಿನಿಂದಲೇ ನಾಲ್ಕು ಕಾಲುಗಳಿವೆ. ಆಕೆಗೆ ದೈಹಿಕ ವಿಕಲತೆ ಇದೆ. ಕೆಲವು ಭ್ರೂಣಗಳಲ್ಲಿ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಇದನ್ನು ವೈದ್ಯಕೀಯ ವಿಜ್ಞಾನದ ಭಾಷೆಯಲ್ಲಿ ಇಶಿಯೋಪಾಗಸ್ ಎಂದು ಕರೆಯಲಾಗುತ್ತದೆ. ಭ್ರೂಣವು ಎರಡು ಭಾಗಗಳಾಗಿ ವಿಭಜನೆಯಾದಾಗ, ದೇಹವು ಎರಡು ಸ್ಥಳಗಳಲ್ಲಿ ಬೆಳವಣಿಗೆಯಾಗುತ್ತದೆ. ಈ ಹೆಣ್ಣು ಮಗುವಿನ ಸೊಂಟದ ಕೆಳಗಿನ ಭಾಗವು ಎರಡು ಹೆಚ್ಚುವರಿ ಕಾಲುಗಳೊಂದಿಗೆ ಅಭಿವೃದ್ಧಿಗೊಂಡಿದೆ. ಆದರೆ ಆ ಕಾಲುಗಳು ನಿಷ್ಕ್ರಿಯವಾಗಿವೆ” ಎಂದಿದ್ದಾರೆ.
ಇದೀಗ ಮಕ್ಕಳ ವಿಭಾಗದ ವೈದ್ಯರು ದೇಹದ ಯಾವುದೇ ಭಾಗದಲ್ಲಿ ಬೇರೆ ಯಾವುದೇ ಅಂಗವಿಕಲತೆ ಇದೆಯೇ ಎಂದು ತಪಾಸಣೆ ನಡೆಸುತ್ತಿದ್ದು, ಪರೀಕ್ಷೆ ಬಳಿಕ ಆಕೆ ಆರೋಗ್ಯವಾಗಿದ್ದರೆ, ಶಸ್ತ್ರಚಿಕಿತ್ಸೆ ಮೂಲಕ ಆ ಕಾಲುಗಳನ್ನು ತೆಗೆಯಲಾಗುತ್ತದೆ. ಇದರಿಂದ ಆಕೆ ಸಹಜ ಜೀವನ ನಡೆಸಬಹುದು ವೈದ್ಯರು ತಿಳಿಸಿದ್ದಾರೆ.
WATCH VIDEO: ವಾಹನ ಪೂಜೆಗಾಗಿ ದೇವಸ್ಥಾನಕ್ಕೆ `ಹೆಲಿಕಾಪ್ಟರ್’ ತೆಗೆದುಕೊಂಡು ಹೋದ ಉದ್ಯಮಿ!… ವಿಡಿಯೋ ವೈರಲ್
WATCH VIDEO: ವಾಹನ ಪೂಜೆಗಾಗಿ ದೇವಸ್ಥಾನಕ್ಕೆ `ಹೆಲಿಕಾಪ್ಟರ್’ ತೆಗೆದುಕೊಂಡು ಹೋದ ಉದ್ಯಮಿ!… ವಿಡಿಯೋ ವೈರಲ್