ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ಮೇಲೇತು ವೆಗೆ ಕೆ.ಆರ್.ಪುರ ಕಡೆಯಿಂದ ಬರುವ ಅಪ್ ಕ್ಯಾಂಪ್ ಮುಚ್ಚಿರುವುದರಿಂದ ಮಂಗಳವಾರದಿಂದ ನಾಗವಾರ ಕಡೆಯಿಂದ ಹೆಬ್ಬಾಳ ಮೇಲ್ಲೇ ತುವೆ ಕಡೆಗೆ ಬರುವ ಎಲ್ಲ ಮಾದರಿ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಏಪ್ರಿಲ್ 17ರಿಂದ ಕೆ.ಆರ್.ಪುರ ಲೂಪ್ ಸೇರುವ ಟ್ರ್ಯಾಕ್‌ನಲ್ಲಿ ದ್ವಿಚಕ್ರ ವಾಹನಗಳನ್ನು ಹೊರತುಪಡಿಸಿ ಎಲ್ಲ ವಾಹನ ಸಂಚಾರ ನಿರ್ಬ೦ ಧಿಸಲಾಗಿತ್ತು. ಇದೀಗ ನಾಗವಾರ ಕಡೆಯಿಂದ ಹೆಬ್ಬಾಳ ಮೇಲೇತುವೆ ಕಡೆಗೆ ಬರುವ ಎಲ್ಲ ಮಾದರಿ ವಾಹನಗಳ ಸಂಚಾರವನ್ನು ನಿಬಂಧಿಸಿ, ವಾಹನಗಳ ಸುಗಮ ಸಂಚಾರಕ್ಕೆ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ.
ಪರ್ಯಾಯ ಮಾರ್ಗಗಳು ಯಾವವು?
ನಾಗವಾರ (ಔಟರ್‌ರಿಂಗ್ ರಸ್ತೆ) ಕಡೆಯಿಂದ ನಗರದ ಒಳಗೆ ಮೇನ್ರಿ ವೃತ್ತದ ಮೂಲಕ ಸಂಚರಿಸುವ ವಾಹನಗಳು ಹೆಬ್ಬಾಳ ವೃತ್ತ ದಲ್ಲಿ ಮೇಲೇತುವೆ ಕೆಳಗಿನ ರಸ್ತೆಯಿಂದ ಬಲಕ್ಕೆ ತಿರುವು ಪಡೆದು ಕೊಡಿಗೆಹಳ್ಳಿ ಜಂಕ್ಷನ್ ಬಳಿ ಯೂಟರ್ನ್ ಪಡೆದು ಸರ್ವಿಸ್ ರಸ್ತೆಯಿಂದ ಹೆಬ್ಬಾಳ ಮೇಲ್ಸ್ತುವೆ ರ್ಯಾಂಪ್ ಮೂಲಕ ನಗರದ ಕಡೆಗೆ ಚಲಿಸಬಹುದು.
ಅಲ್ಲದೆ ಇತ್ತ ಕೆ.ಆರ್.ಪುರ ಕಡೆಯಿಂದ ಹೆಬ್ಬಾಳ ಮಾರ್ಗ ವಾಗಿ ಯಶವಂತಪುರ ಕಡೆಗೆ ಚಲಿಸುವ ವಾಹ ನಗಳು ಹೆಬ್ಬಾಳ ಮೇಲ್ಸ್ತುವೆ ಕೆಳಗಿನ ರಸ್ತೆ ಯಿಂದ ನೇರವಾಗಿ ಬಿಇಎಲ್ ವೃತ್ತ ತಲುಪಿ, ಎಡಕ್ಕೆ ತಿರುವು ಪಡೆದು ಸದಾ ಶಿವನಗರ ಜಂಕ್ಷನ್‌ನಲ್ಲಿ ಬಲಕ್ಕೆ ತಿರುವು ಪಡೆದು ಐಐಎಸ್ಸಿ ಮುಖಾಂತರ ಮುಂದಕ್ಕೆ ಸಾಗಬಹುದು.
ಅದೇ ರೀತಿಯಾಗಿ ಕೆ.ಆರ್.ಪುರ, ಹೆಣ್ಣೂರು, ಎಚ್‌ಆರ್‌ಬಿ ಆರ್ ಲೇಔಟ್, ಬಾಣಸವಾಡಿ ಕಡೆಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆಗೆ ಸಂಚರಿಸುವ ವಾಹನಗಳು ಹೆಣ್ಣೂರು-ಬಾಗಲೂರು ರಸ್ತೆ ಮುಖಾಂತರ ವಿಮಾನ ನಿಲ್ದಾಣ ತಲುಪಬಹುದು ಎಂದು ನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ.