ಬೆಂಗಳೂರು : ಇರಾನ್ ಇಸ್ರೇಲ್ ಯುದ್ಧದ ಪರಿಣಾಮ ಸದ್ಯ ಭಾರತದಲ್ಲಿ ಗ್ಯಾಸ್ ಸಿಲೆಂಡರ್ ಪೂರೈಕೆಯಲ್ಲಿ ಭಾರಿ ವ್ಯತ್ಯಯ ಉಂಟಾಗಿದ್ದು, ಇದೀಗ ಬೆಂಗಳೂರಲ್ಲಿ ದೊಡ್ಡ ದೊಡ್ಡ ಹೋಟೆಲ್ ಗಳೆಲ್ಲ ಬಂದ್ ಆಗಿವೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಈ ಸಮಸ್ಯೆ ಬಗೆಹರಿಸುವಂತೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದಿಪ್ ಸಿಂಗ್ ಪುರಿ ಅವರಿಗೆ ಪಾತ್ರ ಬರೆದಿದ್ದಾre
ಸಿಎಂ ಸಿದ್ದರಾಮಯ್ಯ ತಮ್ಮ ಟ್ವೀಟ್ ನಲ್ಲಿ ದೇಶೀಯ ಎಲ್‌ಪಿಜಿ ಪೂರೈಕೆಗೆ ಆದ್ಯತೆ ನೀಡುವಂತೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಇತ್ತೀಚೆಗೆ ಹೊರಡಿಸಿದ ಆದೇಶದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ಪಿಜಿ ಪೂರೈಕೆಯಲ್ಲಿ ಉಂಟಾಗಿರುವ ಕೊರತೆಯ ಕುರಿತು ನಾನು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಪತ್ರ ಬರೆದಿದ್ದೇನೆ.
ಈ ಆದೇಶದಿಂದಾಗಿ ಪ್ರತಿದಿನ ಲಕ್ಷಾಂತರ ಜನರಿಗೆ ಆಹಾರ ಒದಗಿಸುವ ಹೋಟೆಲ್‌ಗಳು, ಮೆಸ್‌ಗಳು, ಹಾಸ್ಟೆಲ್‌ಗಳು, ಕಲ್ಯಾಣ ಮಂಟಪಗಳು ಮತ್ತು ಇತರ ಸಂಸ್ಥೆಗಳ ಕಾರ್ಯಚಟುವಟಿಕೆಗೆ ತೀವ್ರ ಅಡಚಣೆಯಾಗಿದೆ. ಆದ್ದರಿಂದ, ವಾಣಿಜ್ಯ ಎಲ್‌ಪಿಜಿಯ ಸಮರ್ಪಕ ಪೂರೈಕೆಯನ್ನು ಪುನಃಸ್ಥಾಪಿಸಲು ತುರ್ತಾಗಿ ಹಸ್ತಕ್ಷೇಪ ಮಾಡಬೇಕೆಂದು ನಾನು ಈ ಮೂಲಕ ವಿನಂತಿಸಿದ್ದೇನೆ ಎಂದು ಬರೆದುಕೊಂಡಿದ್ದಾರೆ.
I have written to Union Petroleum & Natural Gas Minister Shri @HardeepSPuri regarding the shortage of commercial LPG in Bengaluru following a recent order by the Ministry of Petroleum & Natural Gas prioritising domestic LPG supply.
This has disrupted supply for hotels, mess… pic.twitter.com/FyymFuGds9
— Siddaramaiah (@siddaramaiah) March 10, 2026








