ತುಮಕೂರು : ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿದಾರರಿಗೆ ಮಾಹಿತಿ ನೀಡದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ ಕುಣಿಗಲ್ ತಹಶೀಲ್ದಾರ್ ರಶ್ಮಿಗೆ 25,000 ದಂಡ ವಿಧಿಸಲಾಗಿದೆ.ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಅವರು ಈ ಆದೇಶ ಹೊರಡಿಸಿದ್ದು, ಮಾಹಿತಿ ಆಯೋಗದ ಆಯುಕ್ತ ರುದ್ರಣ್ಣ ಸೂಚನೆ ಮೇರೆಗೆ ಆದೇಶ ಹೊರಡಿಸಿದ್ದಾರೆ.
ಕಡತ ಒಂದರ ಮಾಹಿತಿ ನೀಡುವಂತೆ ನರಸೇಗೌಡ ಎಂಬುವವರು ಅರ್ಜಿ ಸಲ್ಲಿಸಿದರು. ಕುಣಿಗಲ್ ತಾಲೂಕಿನ ಕುಂದೂರು ಗ್ರಾಮದ ನಿವಾಸಿ ನರಸೇಗೌಡ ಅರ್ಜಿ ಸಲ್ಲಿಸಿದ್ದರು. ಮಾಹಿತಿ ನೀಡಲು ವಿಳಂಬವಾಗಿದ್ದಕ್ಕೆ ಮಾಹಿತಿ ಆಯೋಗಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಿದ ಮಾಹಿತಿ ಆಯೋಗ ತಹಶೀಲ್ದಾರ ರಶ್ಮಿಗೆ 25,000 ದಂಡ ಮತ್ತು ಶಿಸ್ತು ಕ್ರಮಕ್ಕೆ ಸೂಚನೆ ನೀಡಿದ್ದಾರೆ. ನವೆಂಬರ್ ವೇತನದಲ್ಲಿ 25,000 ದಂಡ ಹಿಡಿದಿಡುವಂತೆ ಆದೇಶಿಸಿದ್ದಾರೆ. ಅರ್ಜಿದಾರ ನರಸಿ ಗೌಡಗೆ 5000 ನೀಡುವಂತೆ ಆದೇಶ ಹೊರಡಿಸಿದ್ದಾರೆ.








