ಮಂಡ್ಯ : ಸಿಎಂ ಸಿದ್ದರಾಮಯ್ಯಗೆ ಜೆಡಿಎಸ್ ಕಾರ್ಯಕರ್ತರಿಂದ ಅವಹೇಳನ ಹಿನ್ನಲೆ, ಬಸರಾಳು ಗ್ರಾಮದಲ್ಲಿ ಅಂಗಡಿ ಮುಂಗಟ್ಟು ಮುಚ್ಚಿ ಸ್ವಯಂ ಪ್ರೇರಿತ ಬಂದ್ ಗೆ ಬೆಂಬಲ ನೀಡಲಾಗಿದೆ. ಬಸರಾಳು ಗ್ರಾಮ ಬಂದ್ ಮಾಡಿದ್ದು, ನಾಗಮಂಗಲ ಮಂಡ್ಯ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೂರಾರು ಕೈ ಕಾರ್ಯಕರ್ತರು ಮತ್ತು ಕುರುಬ ಸಮುದಾಯದ ಜನರು ಬಂದ್ ನಲ್ಲಿ ಭಾಗಿಯಾಗಿದ್ದಾರೆ.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಅವಹೇಳನಕಾರಿಯಾಗಿ ಮಾತನಾಡಿರುವ ಇಬ್ಬರ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ. ವ್ಯಕ್ತಪಡಿಸಿದ್ದಾರೆ. ಈ ಇಬ್ಬರನ್ನು ಬಂಧಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆನ್ನಟ್ಟಿ ಗ್ರಾಮದ ಕುಮಾರ್ ಶ್ಯಾನಬೋಗನಹಳ್ಳಿ ಮಹೇಶ್ ಸಿಎಂ. ವಿರುದ್ದ ನಾಲಿಗೆ ಹರಿಬಿಟ್ಟಿದ್ದ ಜೆಡಿಎಸ್ ಕಾರ್ಯಕರ್ತರು. ಬಸರಾಳು ಗ್ರಾಮ ಬಂದ್ ಪ್ರತಿಭಟನೆಯಿಂದಾಗಿ ನಾಗಮಂಗಲ ಮಂಡ್ಯ ಹೆದ್ದಾರಿ ಸಂಚಾರ ಬಂದ್ ಆಗಿದೆ.
ಸಂಚಾರ ಅಸ್ತವ್ಯಸ್ತವಾಗಿದೆ. ಬಸರಾಳು ಬಂದ್ ಹಿನ್ನಲೆಯಲ್ಲಿ ಮುನ್ನೇಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದ್ದು, ಸ್ವಯಂ ಪ್ರೇರಿತವಾಗಿ ಗ್ರಾಮದಲ್ಲಿ ಅಂಗಡಿ ಮುಂಗ್ಗಟ್ಟು ಮುಚ್ಚಿರುವ ವರ್ತಕರು. ಕಿಡಿಕೇಡಿಗಳ ವಿರುದ್ದ ಘೋಷಣೆ ಕೂಗಿ ಆಕ್ರೋಶ. ಪ್ರತಿಭಟನೆಯಲ್ಲಿ ಮಾಜಿ ಜಿ.ಪಂ.ಸದಸ್ಯ ಪ್ರಸನ್ನ, ಕುರುಬರ ಸಂಘದ ಅಧ್ಯಕ್ಷ ಸುರೇಶ್, ಚಿದಂಬರ್, ಸೇರಿ ಹಲವರು ಭಾಗಿ.