ಬೆಳಗಾವಿ: ದೀಪಾವಳಿ ಅಮಾವಾಸ್ಯೆಯಂದೇ ಖಂಡಗ್ರಾಸ ಸೂರ್ಯಗ್ರಹಣ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಬಹುತೇಕ ದೇವಸ್ಥಾನಗಳಲ್ಲಿ ಗ್ರಹಣ ವೇಳೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದ್ದು ಮಂದಿರಗಳಲ್ಲಿ ಎಂದಿನಂತೆ ಪೂಜಾ ಕೈಂಕರ್ಯ ನಡೆಯುತ್ತಿವೆ.
BIGG BREAKING NEWS : ಮುರುಘಾಶ್ರೀಗಳಿಗೆ ಬಿಗ್ ಶಾಕ್ : ಶ್ರೀಗಳ ವಿರುದ್ಧ ಮತ್ತೊಂದು ಪೋಕ್ಸೋ ಪ್ರಕರಣ ದಾಖಲು
ಬೆಳಗಾವಿ ನಗರದಲ್ಲಿ ಗ್ರಹಣ ಆರಂಭ ಸಮಯ ಸಂಜೆ 5ಗಂಟೆ 11 ನಿಮಿಷಕ್ಕೆ ಆರಂಭವಾಗಿ ಗ್ರಹಣದ ಮಧ್ಯಕಾಲ ಸಂಜೆ 5ಗಂಟೆ 50 ನಿಮಿಷಕ್ಕೆ ಹಾಗೂ ಸಂಜೆ 6 ಗಂಟೆ 28 ನಿಮಿಷಕ್ಕೆ ಸೂರ್ಯಗ್ರಹಣ ಮೋಕ್ಷ ಕಾಲ ನಡೆಯುತ್ತಿದೆ. ದಕ್ಷಿಣಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಬೆಳಗಾವಿಯ ಕಪಿಲೇಶ್ವರ ದೇವಸ್ಥಾನದಲ್ಲಿ ಎಂದಿನಂತೆ ಪೂಜಾ ಕೈಂಕರ್ಯ ನಡೆಯುತ್ತಿದ್ದು ಕಪಿಲೇಶ್ವರ ದೇವಸ್ಥಾನದಲ್ಲಿ ಬೆಳಗ್ಗೆ ಶಿವಲಿಂಗಕ್ಕೆ ರುದ್ರಾಭಿಷೇಕ, ಸಂಜೆ 4ಗಂಟೆಯಿಂದ 6.30ರವರೆಗೆ ಮಹಾಮೃತ್ಯುಂಜಯ ಜಪ ಹಾಗೂ ಸೂರ್ಯಗ್ರಹಣ ವೇಳೆ ಕಪಿಲೇಶ್ವರ್ ಮಂದಿರದ ಶಿವಲಿಂಗವನ್ನು ಸಂಪೂರ್ಣವಾಗಿ ಬಿಲ್ವಪತ್ರೆಗಳಿಂದ ಅರ್ಚಕರು ಮುಚ್ಚಲಿದ್ದಾರೆ. ಇದಲ್ಲದೇ ಗ್ರಹಣ ಸಮಯದಲ್ಲಿ ಭಕ್ತರಿಗೆ ದೇಗುಲ ಪ್ರವೇಶಕ್ಕೆ ಯಾವುದೇ ನಿರ್ಬಂಧ ಇಲ್ಲ.