Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಉದ್ವಿಗ್ನತೆ ನಡುವೆ ಅಮೆರಿಕದ ಜೊತೆ ಪರಮಾಣು ಮಾತುಕತೆ ಆರಂಭಕ್ಕೆ ಇರಾನ್ ಅಧ್ಯಕ್ಷ ಆದೇಶ ; ವರದಿ

02/02/2026 6:32 PM

ರಂಜಾನ್ ಮಾಸದ ಹಿನ್ನಲೆ: ಮಾರ್ಚ್.20ರವರೆಗೆ ರಾಜ್ಯದ ‘ಉರ್ದು ಪ್ರಾಥಮಿಕ, ಪ್ರೌಢ ಶಾಲೆ’ಗಳ ಅವಧಿ ಬದಲಾವಣೆ

02/02/2026 6:30 PM

ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

02/02/2026 6:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಂಜಾನ್ ಮಾಸದ ಹಿನ್ನಲೆ: ಮಾರ್ಚ್.20ರವರೆಗೆ ರಾಜ್ಯದ ‘ಉರ್ದು ಪ್ರಾಥಮಿಕ, ಪ್ರೌಢ ಶಾಲೆ’ಗಳ ಅವಧಿ ಬದಲಾವಣೆ
KARNATAKA

ರಂಜಾನ್ ಮಾಸದ ಹಿನ್ನಲೆ: ಮಾರ್ಚ್.20ರವರೆಗೆ ರಾಜ್ಯದ ‘ಉರ್ದು ಪ್ರಾಥಮಿಕ, ಪ್ರೌಢ ಶಾಲೆ’ಗಳ ಅವಧಿ ಬದಲಾವಣೆ

By kannadanewsnow0902/02/2026 6:30 PM

ಬೆಂಗಳೂರು: ರಂಜಾನ್ ಮಾಸದ ಹಿನ್ನಲೆಯಲ್ಲಿ ರಾಜ್ಯದ ಉರ್ದು ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಾಲಾ ಅವಧಿಯನ್ನು ಬದಲಾವಣೆ ಮಾಡಿ ಸರ್ಕಾರ ಆದೇಶಿಸಿದೆ.

ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಕ್ರಿಯಾ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ನಿರ್ದೇಶನವಿರುತ್ತದೆ. ಅದರಂತೆ ಶಾಲೆಗಳ ದೈನಂದಿನ ಶೈಕ್ಷಣಿಕ ಚಟುವಟಿಕೆಗಳ ನಿರ್ವಹಣೆಗೆ ಸಲಹಾತ್ಮಕ ವೇಳಾ ಪಟ್ಟಿಯಲ್ಲಿ ಬೆಳಿಗ್ಗೆ 10-00 ಗಂಟೆಯಿಂದ ಸಂಜೆ 4-20 ರವರೆಗೆ ಶಾಲಾ ಅವಧಿ ನಿಗಧಿಪಡಿಸಲಾಗಿರುತ್ತದೆ ಎಂದಿದ್ದಾರೆ.

ಸರ್ಕಾರದ ಪತ್ರದಲ್ಲಿ ರಂಜಾನ್ ಮಾಸದ ಪ್ರಯುಕ್ತ ರಾಜ್ಯದಲ್ಲಿನ ಉರ್ದು ಮಾಧ್ಯಮದ ಕಿರಿಯ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳನ್ನು ಬೆಳಿಗ್ಗೆ 8-00 ಗಂಟೆಯಿಂದ ಮಧ್ಯಾಹ್ನ 12.45 ರವರೆಗೆ ರಂಜಾನ್ ತಿಂಗಳು ಪ್ರಾರಂಭವಾದ ದಿನಾಂಕದಿಂದ ಒಂದು ತಿಂಗಳವರೆಗೆ ಮಾತ್ರ ನಡೆಸಲು ಈ ಹಿಂದೆ ದಿನಾಂಕ: 31-10-2002 ರಲ್ಲಿ ಹೊರಡಿಸಲಾಗಿದ್ದ ಸ್ಟ್ಯಾಂಡಿಂಗ್ ಆರ್ಡರ್ (Standing Order) ನ್ನು ನಿಯಮಾನುಸಾರ ಪರಿಶೀಲಿಸಿ ಅಗತ್ಯ ಕ್ರಮವಹಿಸುವಂತೆ ಸೂಚಿಸಲಾಗಿರುತ್ತದೆ. ಮುಂದುವರೆದು, ಉಲ್ಲೇಖಿತ-(2) ರ ಪತ್ರದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಣ ಸಂಘ(ರಿ), ಬೆಂಗಳೂರು ರವರು ಮನವಿ ಮಾಡಿಕೊಂಡಿದ್ದು ಅದರಂತೆ ಪರಿಶೀಲಿಸಿ ಈ ಕೆಳಕಂಡಂತೆ ಆದೇಶಿಸಿದ್ದಾರೆ.

1. 2025-26ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಉರ್ದು ಮಾಧ್ಯಮದ ಕಿರಿಯ, ಹಿರಿಯ ಹಾಗೂ ಪ್ರೌಢಶಾಲೆಗಳು ರಂಜಾನ್ ತಿಂಗಳು ಪ್ರಾರಂಭವಾದ ದಿನಾಂದಿಂದ ದಿನಾಂಕ: 20-03-2026ರವರೆಗೆ ಮಾತ್ರ ಶಾಲಾ ಅವಧಿಯ ವೇಳಾಪಟ್ಟಿಯ ಬದಲಾವಣೆಯ ವಿವರಗಳು

2. ಈ ವ್ಯವಸ್ಥೆಯಿಂದ ಶಾಲೆಗಳ ಕೆಲಸದ ಅವಧಿಯಲ್ಲಿ ಕಡಿಮೆ ಆಗುವ ಅವಧಿಯನ್ನು ಇತರೇ ರಜಾ ದಿನಗಳಲ್ಲಿ ಕಾರ್ಯ ನಿರ್ವಹಿಸುವ ಮೂಲಕ ಸರಿದೂಗಿಸಿಕೊಳ್ಳತಕ್ಕದ್ದು.

3. ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ರಂಜಾನ್ ಮಾಹೆಯಲ್ಲಿ ಉಪವಾಸ ವ್ರತವನ್ನು ಕೈಗೊಳ್ಳುವುದರಿಂದ ಅವರುಗಳಿಗೆ ರಂಜಾನ್ ಮಾಹೆಯಲ್ಲಿ ಪ್ರತಿದಿನ ಸಂಜೆ ಅರ್ಧ ಗಂಟೆ ಮುಂಚಿತವಾಗಿ ತೆರಳಲು ಅನುಮತಿಸಬಹುದು.

4. 2025-26ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಪರೀಕ್ಷಾ ವೇಳಾಪಟ್ಟಿಯಂತೆ ನಡೆಸುವಂತೆ ಕ್ರಮವಹಿಸುವುದು.

5. 2025-26ನೇ ಸಾಲಿಗೆ ನಿಗದಿಪಡಿಸಿರುವ ಎಸ್‌.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರ ಮತ್ತು ಪರೀಕ್ಷಾ ಕರ್ತವ್ಯ ನಿರತ ಉರ್ದು ಮಾಧ್ಯಮದ ಶಿಕ್ಷಕರಿಗೆ ಈ ಆದೇಶವು ಅನ್ವಯಿಸುವುದಿಲ್ಲ.

Share. Facebook Twitter LinkedIn WhatsApp Email

Related Posts

ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

02/02/2026 6:28 PM2 Mins Read

ಸಾಗರದ ಉಳ್ಳೂರು ಬಳಿಯಲ್ಲಿ ಭೀಕರ ಅಪಘಾತ: ಅಕ್ಷಯ ಬ್ಯಾಂಕ್ ಸಿಬ್ಬಂದಿ, ಮತ್ತೋರ್ವ ಸ್ಥಳದಲ್ಲೇ ಸಾವು

02/02/2026 4:16 PM2 Mins Read

ಜಾಗೃತಿ ಶಿಕ್ಷಣವೇ ಮಕ್ಕಳಿಗೆ ಪೂರಕ; ‘ಸೋಶಿಯಲ್ ಮೀಡಿಯಾ’ ಬಗ್ಗೆ ಶಾಲಾ ಮಟ್ಟದಲ್ಲಿ ಪಠ್ಯಕ್ರಮಕ್ಕೆ ಕಾಂಗ್ರೆಸ್ ಕಾನೂನು ಘಟಕ ಸಲಹೆ

02/02/2026 3:56 PM3 Mins Read
Recent News

BREAKING : ಉದ್ವಿಗ್ನತೆ ನಡುವೆ ಅಮೆರಿಕದ ಜೊತೆ ಪರಮಾಣು ಮಾತುಕತೆ ಆರಂಭಕ್ಕೆ ಇರಾನ್ ಅಧ್ಯಕ್ಷ ಆದೇಶ ; ವರದಿ

02/02/2026 6:32 PM

ರಂಜಾನ್ ಮಾಸದ ಹಿನ್ನಲೆ: ಮಾರ್ಚ್.20ರವರೆಗೆ ರಾಜ್ಯದ ‘ಉರ್ದು ಪ್ರಾಥಮಿಕ, ಪ್ರೌಢ ಶಾಲೆ’ಗಳ ಅವಧಿ ಬದಲಾವಣೆ

02/02/2026 6:30 PM

ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

02/02/2026 6:28 PM

ಧೂಮಪಾನಿಗಳಿಗೆ ಬಿಗ್ ಶಾಕ್ ; ಹೊಸ ಅಬಕಾರಿ ಸುಂಕ ಜಾರಿ, ಸಿಗರೇಟ್ ಬೆಲೆ ಪ್ಯಾಕ್’ಗೆ 55 ರೂಪಾಯಿ ಏರಿಕೆ!

02/02/2026 6:13 PM
State News
KARNATAKA

ರಂಜಾನ್ ಮಾಸದ ಹಿನ್ನಲೆ: ಮಾರ್ಚ್.20ರವರೆಗೆ ರಾಜ್ಯದ ‘ಉರ್ದು ಪ್ರಾಥಮಿಕ, ಪ್ರೌಢ ಶಾಲೆ’ಗಳ ಅವಧಿ ಬದಲಾವಣೆ

By kannadanewsnow0902/02/2026 6:30 PM KARNATAKA 2 Mins Read

ಬೆಂಗಳೂರು: ರಂಜಾನ್ ಮಾಸದ ಹಿನ್ನಲೆಯಲ್ಲಿ ರಾಜ್ಯದ ಉರ್ದು ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಾಲಾ ಅವಧಿಯನ್ನು ಬದಲಾವಣೆ ಮಾಡಿ ಸರ್ಕಾರ…

ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

02/02/2026 6:28 PM

ಸಾಗರದ ಉಳ್ಳೂರು ಬಳಿಯಲ್ಲಿ ಭೀಕರ ಅಪಘಾತ: ಅಕ್ಷಯ ಬ್ಯಾಂಕ್ ಸಿಬ್ಬಂದಿ, ಮತ್ತೋರ್ವ ಸ್ಥಳದಲ್ಲೇ ಸಾವು

02/02/2026 4:16 PM

ಜಾಗೃತಿ ಶಿಕ್ಷಣವೇ ಮಕ್ಕಳಿಗೆ ಪೂರಕ; ‘ಸೋಶಿಯಲ್ ಮೀಡಿಯಾ’ ಬಗ್ಗೆ ಶಾಲಾ ಮಟ್ಟದಲ್ಲಿ ಪಠ್ಯಕ್ರಮಕ್ಕೆ ಕಾಂಗ್ರೆಸ್ ಕಾನೂನು ಘಟಕ ಸಲಹೆ

02/02/2026 3:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.