ಬೆಳಗಾವಿ : ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಆಗ್ರಹಿಸಿ ಪಂಚಮಸಾಲಿ ಸಮುದಾಯ ಮತ್ತೆ ಹೋರಾಟ ಆರಂಭಿಸಿದೆ.
ಸುವರ್ಣಸೌಧಕ್ಕೆ ನಾಳೆ ಪಂಚಮಸಾಲಿಗೆ ಮುತ್ತಿಗೆ ಹಿನ್ನೆಲೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, 6 ಸುವರ್ಣಸೌಧದ ಬಳಿ ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಹೀರೇಬಾಗೇಬಾಡಿ-ಬೆಳಗಾವಿ ರಾಷ್ಟ್ರೀಯ ಹೆದ್ದಾರಿ ಬಂದ್ ಆಗುವ ಸಾಧ್ಯತೆ ಇದೆ, ಆದ್ದರಿಂದ ಎಲ್ಲೆಡೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಬೆಳಗಾವಿಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
ಬಸವ ಜಯ ಮೃತ್ಯುಂಜಯ ಸ್ವಾಮಿ ಎಚ್ಚರಿಕೆ
ನಿಮ್ಮ ಮಾತಿಗೆ ಬೆಲೆಕೊಟ್ಟು ವಿಧಾನಸೌಧ ಮುತ್ತಿಗೆ ಹಿಂಪಡೆದಿದ್ದೇವು. ಈ ಬಾರಿ ಬೆಳಗಾವಿ ತಲಪುವುದರೊಳಗಾಗಿ ಮೀಸಲಾತಿ ಘೋಷಣೆಯಾಗದಿದ್ದಲ್ಲಿ ಸೌವರ್ಣಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದರು.ನಿಮ್ಮ ಮೇಲೆ ನಂಬಿಕೆ ಇಟ್ಟು ನ್ಯಾಯಯುತವಾಗಿ ಮೀಸಲಾತಿ ಕೇಳುತ್ತಿದ್ದೇವೆ ಎಂದರು.ಇದೇ ಅಧಿವೇಶನದಲ್ಲಿ ಮೀಸಲಾತಿ ಘೋಷಣೆ ಮಾಡಬೇಕು,. ಮೀಸಲಾತಿ ಘೋಷಿಸಿದ್ರೆ ಸನ್ಮಾನ, ಇಲ್ಲವಾದಲ್ಲಿ ಹೋರಾಟ ಮಾಡಲಾಗುತ್ತದೆ ಎಂದು ಬಸವ ಜಯ ಮೃತ್ಯುಂಜಯ ಸ್ವಾಮಿ ಹೇಳಿದ್ದಾರೆ.
ಬಿ.ಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ಮೀಸಲಾತಿ ನೀಡುವುದಾಗಿ ಘೋಷಣೆ ಮಾಡಿದ್ದರು, ಆದರೆ ಅವರು ಮೀಸಲಾತಿ ನೀಡದೇ ಕೊಟ್ಟ ಮಾತು ತಪ್ಪಿದ್ರು, ಈಗ ಸಿಎಂ ಬೊಮ್ಮಾಯಿ ಮೇಲೆ ವಿಶ್ವಾಸವಿದೆ, ಅವರು ನಮ್ಮ ಬೇಡಿಕೆ ಈಡೇರಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
BIGG NEWS : 35 ದಿನಗಳ ಶಬರಿಮಲೆಯಾತ್ರೆ ವೇಳೆ 23 ಮಂದಿಗೆ ಹೃದಯಾಘಾತ :106 ಮಂದಿ ಆಸ್ಪತ್ರೆಗೆ ದಾಖಲು
ಪೋಕ್ಸೋ ಕೇಸ್ : ಮುರುಘಾ ಶ್ರೀಗಳನ್ನು ಗಲ್ಲಿಗೇರಿಸುವಂತೆ ‘BSP’ ಪ್ರತಿಭಟನೆ |Murgha Sri