ಬೆಂಗಳೂರು : ಬೆಂಗಳೂರಲ್ಲಿ ಮೈಸೂರು ರಸ್ತೆಯಲ್ಲಿರುವ ಗಾಳಿ ಆಂಜನೇಯ ದೇವಾಲಯವನ್ನು ಮುಜರಾಯಿ ಇಲಾಖೆ ತನ್ನ ಸುಪರ್ದಿಗೆ ಪಡೆದ ಹಿನ್ನೆಲೆಯಲ್ಲಿಇತ್ತೀಚಿಗೆ ದೇವಾಲಯದ ಆಡಳಿತ ಮಂಡಳಿ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಇಂದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಸರ್ಕಾರದ ಕ್ರಮಕ್ಕೆ ತಡೆಯಾಜ್ಞೆ ನೀಡಲು ನಕಾರ ವ್ಯಕ್ತಪಡಿಸಿದೆ.
ಗಾಳಿ ಆಂಜನೇಯ ದೇವಾಲಯದಲ್ಲಿ ಹಣ ದುರುಪಯೋಗ ಆರೋಪವಿದೆ ಈ ನೆಲೆಯಲ್ಲಿ ಸರ್ಕಾರದ ಕ್ರಮ ಮೇಲ್ನೋಟಕ್ಕೆ ತಪ್ಪು ಎನ್ನಲಾಗುವುದಿಲ್ಲ. ಹಾಗಾಗಿ ರಾಜ್ಯ ಸರ್ಕಾರದ ಕ್ರಮಕ್ಕೆ ತಡೆಯಾಜ್ಞೆ ನೀಡಲು ಹೈಕೋರ್ಟ್ ಇದೀಗ ನಕಾರ ವ್ಯಕ್ತಪಡಿಸಿದೆ. ಗಾಳಿ ಆಂಜನೇಯ ದೇವಾಲಯದಲ್ಲಿ ಹಣ ದುರುಪಯೋಗದ ಆರೋಪವಿದೆ. ಹೀಗಾಗಿ ಸರ್ಕಾರದ ಕ್ರಮ ಮೇಲ್ನೋಟಕ್ಕೆ ತಪ್ಪೆನ್ನಲಾಗುವುದಿಲ್ಲ ಎಂದು ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.
ಗಾಳಿ ಆಂಜನೇಯಸ್ವಾಮಿ ದೇವಾಲಯದ ಆಡಳಿತವನ್ನು ಸರ್ಕಾರ ತನ್ನ ಅಧೀನಕ್ಕೆ ಪಡೆದಿದ್ದು, ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳು ಇನ್ಮುಂದೆ ದೇವಾಲಯದ ಉಸ್ತುವಾರಿಯ ನಡೆಸಿಕೊಂಡು ಹೋಗಲಿದೆ. ದೇವಾಲಯದ ಆಡಳಿತ ಮಂಡಳಿಗೆ ಬೇರೆ ದಾರಿ ಕಾಣದೇ ಸರ್ಕಾರದ ನಿರ್ಧಾರದ ವಿರುದ್ಧ ಕೋರ್ಟ್ ಮೊರೆಹೋಗಿತ್ತು. ಆದ್ರೆ, ಇದೀಗ ಕೋರ್ಟ್ ಸಹ ಸರ್ಕಾರದ ಕ್ರಮ ಸರಿ ಇದೆ ಎಂದು ತಡೆ ನೀಡಲು ನಿರಾಕರಿಸಿದೆ. ಇದರಿಂದ ದೇವಸ್ಥಾನದ ಟ್ರಸ್ಟ್ ಗೆ ನಿರಾಸೆಯಾಗಿದೆ.