ಬೆಂಗಳೂರು : ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1,2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪ್ರತಿಭಾ ಪುರಸ್ಕಾರಕ್ಕಾಗಿ ಆನ್ ಲೈನ್ ಮೂಲಕ ಮೂಲಕ ಅರ್ಜಿಗಳನ್ನುಆಹ್ವಾನಿಸಿದೆ.
2022ನೇ ವರ್ಷದಲ್ಲಿ ಪದವಿ/ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ/ವೃತ್ತಿಪರ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ್ದು, ಸರಾಸರಿ ಶೇಕಡ 70ಮತ್ತು ಅದಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1,2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪ್ರತಿಭಾ ಪುರಸ್ಕಾರಕ್ಕಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನುಆಹ್ವಾನಿಸಿದೆ.
ಅರ್ಹತೆ ಮತ್ತು ಸೂಚನೆಗಳು:
ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಆ) ವಿದ್ಯಾರ್ಥಿಯು ಪ್ರವರ್ಗ-1, 2ಎ, 3ಎ ಅಥವಾ 3ಬಿ ಗೆ ಸೇರಿರಬೇಕು. ಇ) ವಿದ್ಯಾರ್ಥಿಯ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿಪ್ರವರ್ಗ 1 ಆದಾಯ ಮಿತಿ ರೂ.2.50 ಲಕ್ಷ, 2ಎ, 3ಎ ಮತ್ತು 3ಬಿ ರೂ.1.00 ಲಕ್ಷ ಆಗಿದೆ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08.02.2023 ಆಗಿದ್ದು, ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್ಸೈಟ್ https://bcwd.karnataka.gov.in ವೀಕ್ಷಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8050770004 (ಕಛೇರಿ ಕಾರ್ಯನಿರ್ವಹಿಸುವ ಸಮಯ ಬೆಳಗ್ಗೆ 10.00 ರಿಂದ ಸಂಜೆ 5.30ರವರೆಗೆ)ಆಯುಕ್ತರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು.) ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆ ಹೊರಡಿಸಿದೆ.
* ರಂಜಿತ್ ಶೃಂಗೇರಿ
JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಬೆಂಗಳೂರಿನಲ್ಲಿ ಫೆ. 12ರಂದು ಬೃಹತ್ ಉದ್ಯೋಗ ಮೇಳ ಆಯೋಜನೆ