ಬೆಂಗಳೂರು: ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, ರಾಜ್ಯ ಸರ್ಕಾರ ಶನಿವಾರ ಬ್ಯಾಗ್ ಹೊರೆಯಿಂದ ಮುಕ್ತಿ ನೀಡುವ ಚಿಂತನೆ ನಡೆಸಿದೆ.
ಹೌದು, ಪ್ರತಿನಿತ್ಯ ಪುಸ್ತಕದ ಭಾರ ಹೊತ್ತು ಶಾಲೆಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಇನ್ನು ಮುಂದೆ ಶನಿವಾರ ಬ್ಯಾಗ್ ಬೆನ್ನಿಗೇರಿಸಿ ಮಕ್ಕಳು ಶಾಲೆಗೆ ಹೋಗಬೇಕಾದ ಅಗತ್ಯ ಇಲ್ಲ . ರಾಜ್ಯದಲ್ಲಿ ಶನಿವಾರ ಬ್ಯಾಗ್ ಲೆಸ್ ಡೇ ಆಚರಿಸಲು ಸರ್ಕಾರ ಚಿಂತನೆ ನಡೆದಿದೆ.
ಶನಿವಾರ ಪಾಠದ ಬದಲಾಗಿ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊ಼ಡಗಿಸಿಕೊಳ್ಳಲು ತೀರ್ಮಾನಿಸಲಾಗಿದೆ. ಶಿಕ್ಷಣ ಸಚಿವ ನಾಗೇಶ್ ಅವರು ಈ ಯೋಜನೆ ಜಾರಿಗೆ ತರಲು ಚಿಂತನೆ ನಡೆಸಿದ್ದು, ಶೀಘ್ರದಲ್ಲೇಯೇ ಈ ಸಂಬಂಧ ಅಂತಿಮ ಆದೇಶ ಹೊರ ಬೀಳುವ ನಿರೀಕ್ಷೆಯಿದೆ. ವಾರದ ಒಂದು ದಿನ ಮಕ್ಕಳಿಗೆ ಬ್ಯಾಗ್ ಹೊರೆಯಿಂದ ಮುಕ್ತಿ ಸಿಕ್ಕರೆ ಒಳ್ಳೆಯದು ಅಲ್ಲವಾ..?.
ಪೋಷಕರಿಗೆ ಮುಖ್ಯ ಮಾಹಿತಿ : 1 ನೇ ತರಗತಿ ದಾಖಲಾತಿಗೆ 6 ವರ್ಷ ಪೂರ್ಣ ಕಡ್ಡಾಯ
ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಸಚಿವ ಬಿ.ಸಿ ನಾಗೇಶ್ ಮುಖ್ಯ ಮಾಹಿತಿ ನೀಡಿದ್ದು, ಒಂದನೇ ತರಗತಿಗೆ ಮಗು ಸೇರಿಸಲು ಆರು ವರ್ಷ ಪೂರ್ಣಗೊಂಡಿರಬೇಕು ಎಂದು ಸಚಿವರು ಮಾಹಿತಿ ನೀಡಿದ್ದಾರೆ,ಈ ಕುರಿತು ಸಚಿವ ಬಿಸಿ ನಾಗೇಶ್ ಸ್ಪಷ್ಟನೆ ನೀಡಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ ಒಂದನೇ ತರಗತಿಗೆ ಶಾಲೆಗೆ ಸೇರಿವುದಕ್ಕೆ ಮಗುವಿಗೆ 6 ವರ್ಷ ಪೂರ್ಣವಾಗುವುದು ಕಡ್ಡಾಯವಾಗಿದೆ . ಈ ನಿಯಮವನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿಗೆ ತರಲಾಗುತ್ತದೆ ಎಂದರು.
ಈಗಾಗಲೇ ಇತರ 23 ರಾಜ್ಯಗಳಲ್ಲಿ ಈ ನಿಯಮ ಜಾರಿಗೆ ತರಲಾಗಿದ್ದು, ಕರ್ನಾಟಕದಲ್ಲಿ ಕೂಡ ಬರುವ ಶೈಕ್ಷಣಿಕ ವರ್ಷದಿಂದ ಜಾರಿಗೆ ತರಲಾಗುತ್ತದೆ. ಮಕ್ಕಳನ್ನು ಶಾಲೆಗೆ ಸೇರಿಸಲು 6 ವರ್ಷ ಕಡ್ಡಾಯವಾಗಲಿದೆ ಎಂದು ಸಚಿವರು ಮಾಹಿತಿ ನೀಡಿದರು.
ಕೊರೊನಾ ನಂತರ ಮಕ್ಕಳು ಕಲಿಕೆಯಲ್ಲಿ ಹಿಂದುಳಿದಿದ್ದು, ಕಲಿಕೆ ಸಾಮರ್ಥ್ಯ ಹೆಚ್ಚಿಸಲು 5 ಹಾಗೂ 8 ನೇ ತರಗತಿಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲು ಚಿಂತನೆ ಇದೆ , ಈ ಬಗ್ಗೆ ನಿರ್ಧರಿಸಿ ತೀರ್ಮಾನ ಮಾಡಲಾಗುತ್ತದೆ ಎಂದರು.