ಬಾಗಲಕೋಟೆ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ಮಾದರಿ ನೀತಿ ಸಂಹಿತೆಯನ್ನು ಕಟುನಿಟ್ಟಾಗಿ ಪಾಲಿಸುತ್ತಿದ್ದು, ಅಕ್ರಮವಾಗಿ ಹಣ ಮದ್ಯ ಸಾಗಣೆ ಮೇಲೆ ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳು ಕಣ್ಣಿಟ್ಟಿದ್ದು ಈಗ ಬಾಗಲಕೋಟೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯಲ್ಲಿದ್ದ 59 ಲಕ್ಷಕ್ಕೂ ಹೆಚ್ಚು ಮೌಲ್ಯದ ಮಧ್ಯವನ್ನು ಜಪ್ತಿ ಮಾಡಿಕೊಂಡಿದ್ದಾರೆ.
ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಲಿದ್ದ 59 ಲಕ್ಷ ರೂಪಾಯಿ ಮೌಲ್ಯದ 14,688 ಲೀಟರ್ ಮದ್ಯವನ್ನು ಇದೀಗ ಅಬಕಾರಿ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.ಬಾಗಲಕೋಟೆ ಕ್ಷೇತ್ರದ ವ್ಯಾಪ್ತಿಯ ಕೆಎಸ್ಬಿಸಿಎಲ್ ಡಿಪೋದಲ್ಲಿ ಚುನಾವಣಾ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.
ಲಾರಿಯಲ್ಲಿದ್ದ 90 ಎಂಎಲ್ ವಿಸ್ಕಿ ಬಾಟಲ್ ಗಳಿರುವ 1700 ಬಾಕ್ಸ್ ಗಳನ್ನು ವಶಪಡಿಸಿಕೊಂಡಿದ್ದಾರೆ ಪ್ರಕರಣವನ್ನು ದಾಖಲಿಸಿಕೊಂಡು ಅಬಕಾರಿ ಇಲಾಖೆಗಳು ಇದೀಗ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.