ಬಾಗಲಕೋಟೆ : ಪ್ರತಿ ಟನ್ ಕಬ್ಬಿಗೆ 4,500 ರೂಪಾಯಿ ನಿಗದಿಗೆ ಆಗ್ರಹಿಸಿ ರಾಜ್ಯ ರೈತ ಸಂಘವು ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದೆ.
ಇನ್ನೂ, ಮುಧೋಳ ನಗರದ ಬಹುತೇಕ ಅಂಗಡಿ ಮುಂಗಟ್ಟುಗಳನ್ನು ಇಂದು ಬಂದ್ ಮಾಡಲಾಗಿದ್ದು, ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿವೆ .ಬಸ್ ಸಂಚಾರ ಸ್ಥಗಿತಗೊಂಡಿದೆ. ಪ್ರತಿ ಟನ್ ಕಬ್ಬಿಗೆ 4,500 ರೂಪಾಯಿ ನಿಗದಿಗೆ ಆಗ್ರಹಿಸಿ ಮುಧೋಳ ತಾಲೂಕಿನ ಅನೇಕ ಭಾಗಗಳಲ್ಲಿ ರೈತರು ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಇದೀಗ ನಾಳೆಯೂ ಕೂಡ ಮುಧೋಳ ಪಟ್ಟಣದಲ್ಲಿ ಬಂದ್ ಮುಂದುವರೆಯಲಿದೆ ಎಂದು ಪ್ರತಿಭಟನಾ ನಿರತ ರೈತರು ಹೇಳಿದ್ದಾರೆ. ಸಚಿವರು ಭರವಸೆ ಈಡೇರಿಸದ ಹಿನ್ನೆಲೆ ನಾಳೆ ಮತ್ತೆ ಪ್ರತಿಭಟನೆ ಮುಂದುವರೆಸಲಿದ್ದೇವೆ, ಬಂದ್ ಮಾಡಲಿದ್ದೇವೆ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ. ನಾಳೆಯೂ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ, ಅಂಗಡಿ ಮುಂಗಟ್ಟುಗಳು ಬಂದ್ ಆಗಲಿದೆ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.
ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಬಾಗಲಕೋಟೆ ಜಿಲ್ಲಾದ್ಯಂತ ಇಂದಿನಿಂದ ನವೆಂಬರ್ 19 ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ.ಪ್ರತಿ ಟನ್ ಕಬ್ಬಿಗೆ 4,500 ರೂಪಾಯಿ ನಿಗದಿಗೆ ಆಗ್ರಹಿಸಿ ರಾಜ್ಯ ರೈತ ಸಂಘವು ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದೆ. ಈ ಹಿನ್ನೆಲೆ ಇಂದು ಮುಧೋಳ ನಗರ ಬಂದ್ ಗೆ ಕೂಡ ಕರೆ ನೀಡಲಾಗಿತ್ತು.
ಭಾರತದಲ್ಲಿ ‘ಉದ್ಯೋಗಿ’ಗಳಿಗೆ ಇವು ಬೇಕಂತೆ ; ಸಮೀಕ್ಷೆಯಲ್ಲಿ ಸ್ವಾರಸ್ಯಕರ ಸಂಗತಿ ಬಹಿರಂಗ