ಬಾಗಲಕೋಟೆ : ಮನೆಯ ಮೇಲ್ಚಾವಣಿ ಕುಸಿದು ಅಕ್ಕ ತಮ್ಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘೋರ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಕಂದಗಲ್ ಎಂಬ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಹೌದು ಬಾಗಲಕೋಟೆಯ ಜಿಲ್ಲೆಯ ಇಳಕಲ್ ತಾಲೂಕಿನ ಕಂದಗಲ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಮೇಲ್ಚಾವಣಿ ಕುಸಿದು ಅಕ್ಕ ತಮ್ಮ ದುರ್ಮರಣ ಹೊಂದಿದ್ದಾರೆ. ಗೀತಾ ಆದಾಪುರ ಮಠ (14) ಹಾಗೂ ಆಕೆಯ ತಮ್ಮ ರುದ್ರಯ್ಯ (10) ಸಾವನಪ್ಪಿದ್ದಾರೆ. ಇಬ್ಬರ ಮೃತ ದೇಹಗಳನ್ನು ಸ್ಥಳೀಯರು ಸದ್ಯ ಹೊರ ತೆಗೆದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.