ಬಾಗಲಕೋಟೆ : ಸುಮಾರು 30ಕ್ಕೂ ಹೆಚ್ಚು ಜನರಿಗೆ ಕಚ್ಚಿ ಮಂಗ ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಆಸಂಗಿ ಗ್ರಾಮದಲ್ಲಿ ಕೊನೆಗೂ ಹುಚ್ಚು ಮಂಗ ಸೆರೆ ಸಿಕ್ಕಿದೆ. ಹೌದು ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಆಸಂಗಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.
ಹುಚ್ಚು ಮಂಗವು ಸುಮಾರು 30ಕ್ಕೂ ಹೆಚ್ಚು ಜನರಿಗೆ ಕಚ್ಚಿ ಗಾಯಗೊಳಿಸಿತ್ತು. ಇದೀಗ ಜನರು ಮಂಗನನ್ನು ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ. ಗ್ರಾಮ ಪಂಚಾಯಿತಿ ಸಿಬ್ಬಂದಿ ಮಂಗನ ಸೆರೆ ಹಿಡಿಯುವ ತಂಡದ ಕಾರ್ಯಚರಣೆ ನಡೆಸಿದ್ದು ಜನರ ಮೈ ಮೇಲೆ ಎರಗಿ ಕರಿಮಂಗ ಕಚ್ಚಿ ಗಾಯಗೊಳಿಸಿತ್ತು. ಇದೀಗ ಮಂಗನನ್ನು ಹಿಡಿದು ಜನರು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಮಂಗನನ್ನು ಬೋನಿನಲ್ಲಿ ಹಾಕಿಕೊಂಡು ತೆರಳಿದ್ದಾರೆ.