ಬಾಗಲಕೋಟೆ : ಬಾಗಲಕೋಟೆಯಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ಕಲ್ಲು ಗಣಿಗಾರಿಕೆಯ ವೇಳೆ ಕಲ್ಲು ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಜಕನೂರು ಗ್ರಾಮದ ಬಳಿ ಈ ಒಂದು ಘಟನೆ ಸಂಭವಿಸಿದೆ.
ಅರಣ್ಯ ಇಲಾಖೆಯ ಜಾಗದಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿತ್ತು ಎನ್ನುವ ಆರೋಪ ಕೇಳಿ ಬಂದಿದೆ. ಚಿನಗುಡಿಯ ಹನುಮಂತ ಮೆಡಿಗೇರಿ (28) ಮೃತ ಕಾರ್ಮಿಕ ಎಂದು ತಿಳಿದು ಬಂದಿದ್ದು, ಸದ್ಯ ಘಟನಾ ಸ್ಥಳಕ್ಕೆ ಜಮಖಂಡಿಯ ಗ್ರಾಮೀಣ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








