ಬಾಗಲಕೋಟೆ : ಜೀತಕ್ಕೆ ಇಟ್ಟುಕೊಂಡಿದ್ದ ಒಡಿಶಾ ಮೂಲದ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ಇಳಕಲ್ ತಾಲೂಕಿನ ಸಂಕ್ಲಾಪುರ ಗ್ರಾಮದಲ್ಲಿ ಕಾರ್ಮಿಕರನ್ನು ಇದೀಗ ರಕ್ಷಣೆ ಮಾಡಲಾಗಿದ್ದು, ಬಾಗಲಕೋಟೆ ಜಿಲ್ಲೆಯ ಇಳ್ಕಲ್ ತಾಲೂಕಿನ ಸಂಕ್ಲಾಪುರ ಗ್ರಾಮದಲ್ಲಿ ಐವರು ಬಾಲ ಕಾರ್ಮಿಕರು ಸೇರಿದಂತೆ 24 ಕಾರ್ಮಿಕರನ್ನ ರಕ್ಷಣೆ ಮಾಡಲಾಗಿದೆ.
ಇಳಕಲ್ ತಹಶೀಲ್ದಾರ್ ಮತ್ತು ಕಾರ್ಮಿಕ ಇಲಾಖೆ ಅಧಿಕಾರಿಗಳಿಂದ ರಕ್ಷಣೆ ಮಾಡಲಾಗಿದೆ. ಈರಪ್ಪ ಕುಂಬಾರ ಎಂಬ ಅವರ ಇಟ್ಟಿಗೆ ಬಟ್ಟಿಯಲ್ಲಿ ಈ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಇಟ್ಟಿಗೆ ಭಟ್ಟಿ ಮಾಲೀಕ ಈರಪ್ಪ ಕುಂಬಾರ ವಿರುದ್ಧ ಇದೀಗ ಪ್ರಕರಣ ದಾಖಲಾಗಿದೆ. ಬಾಲ ಕಾರ್ಮಿಕ ನಿಷೇಧ ಮತ್ತು ಜೀತ ಪದ್ಧತಿ ನಿಷೇಧ ಕಾಯ್ದೆ ಅಡಿ ಕೇಸ್ ದಾಖಲಾಗಿದೆ. ಈ ಕುರಿತು ಇಳಕಲ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








