ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಹಿರಿಯ ನಾಯಕ ಮತ್ತು ಅವರ ಆಪ್ತರಲ್ಲಿ ಒಬ್ಬರಾದ ಸಂಜಯ್ ರಾವತ್(Sanjay Raut) ಅವರಿಗೆ ವಿಶೇಷ ನ್ಯಾಯಾಲಯವು ಇಂದು ಜಾಮೀನು ಮಂಜೂರು ಮಾಡಿದೆ. ರಾಜ್ಯಸಭಾ ಸದಸ್ಯರಾಗಿರುವ ಸಂಜಯ್ ರಾವತ್ ಕಳೆದ ಮೂರೂವರೆ ತಿಂಗಳಿನಿಂದ ಜೈಲಿನಲ್ಲಿದ್ದರು.
ಎರಡೂ ಕಡೆಯ ವಾದಗಳನ್ನು ಆಲಿಸಿದ ನ್ಯಾಯಾಲಯ ಜಾಮೀನು ಅರ್ಜಿಯ ಆದೇಶವನ್ನು ಅಕ್ಟೋಬರ್ 21 ರಂದು ಕಾಯ್ದಿರಿಸಿತ್ತು. ಮುಂಬೈನ ವಸತಿ ಕಾಲೋನಿಯೊಂದರ ಪುನರಾಭಿವೃದ್ಧಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಸಂಜಯ್ ರಾವತ್ ಅವರನ್ನು ಆಗಸ್ಟ್ 1 ರಂದು ಜಾರಿ ನಿರ್ದೇಶನಾಲಯವು ಕಸ್ಟಡಿಗೆ ತೆಗೆದುಕೊಂಡಿತ್ತು.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿಯಲ್ಲಿ ಬಂಧಿಸುವ ಮೊದಲು, ರಾಜ್ಯಸಭಾ ಸಂಸದ ಎರಡು ಬಾರಿ ಏಜೆನ್ಸಿಯ ಸಮನ್ಸ್ನಿಂದ ಹೊರಗುಳಿದಿದ್ದರು.
ರಾಜಕೀಯ ದ್ವೇಷದಿಂದ ತಮ್ಮ ವಿರುದ್ಧ ಸುಳ್ಳು ಪ್ರಕರಣವನ್ನು ಸಿದ್ಧಪಡಿಸಲಾಗಿದೆ ಎಂದು ರಾವತ್ ಆರೋಪಿಸಿದ್ದರು.
BIGG NEWS: ಹಿಂದೂ ಪದ ಅಶ್ಲೀಲವಲ್ಲ, ಕಾಂಗ್ರೆಸ್ ಅಶ್ಲೀಲ ; ಸತೀಶ್ ಜಾರಕಿಹೊಳಿ ವಿರುದ್ಧ ಆರಗ ಜ್ಞಾನೇಂದ್ರ ಕಿಡಿ
BIGG NEWS : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ : ಹನಿ ನೀರಾವರಿಗಾಗಿ ಅರ್ಜಿ ಆಹ್ವಾನ
BIG NEWS: ʻಮೇರಿಲ್ಯಾಂಡ್ʼ ಲೆಫ್ಟಿನೆಂಟ್ ಗವರ್ನರ್ ಆಗಿ ಭಾರತೀಯ ಮೂಲದ ʻಅರುಣಾ ಮಿಲ್ಲರ್ʼ ಆಯ್ಕೆ | Aruna Miller
BIGG NEWS: ಹಿಂದೂ ಪದ ಅಶ್ಲೀಲವಲ್ಲ, ಕಾಂಗ್ರೆಸ್ ಅಶ್ಲೀಲ ; ಸತೀಶ್ ಜಾರಕಿಹೊಳಿ ವಿರುದ್ಧ ಆರಗ ಜ್ಞಾನೇಂದ್ರ ಕಿಡಿ