ಬಲಿ ಪ್ರತಿಪದ, ಬಲಿ ಪಾಡ್ಯಮಿ ಅಥವಾ ಪಾಡ್ವಾವನ್ನು ದೀಪಾವಳಿ ಹಬ್ಬದ ನಾಲ್ಕನೇ ದಿನದಂದು ಆಚರಿಸಲಾಗುತ್ತದೆ. ಇದು ಹಿಂದೂ ಮಾಸವಾದ ಕಾರ್ತಿಕ ಮಾಸದಲ್ಲಿ ಪ್ರಕಾಶಮಾನವಾದ ಚಂದ್ರನ ಶುಕ್ಲ ಪಕ್ಷದ ಹದಿನೈದು ದಿನಗಳ ಮೊದಲ ದಿನವಾಗಿದೆ. ಈ ದಿನವು ವಾಮನ ಅವತಾರದಲ್ಲಿ ರಾಕ್ಷಸ-ರಾಜ ಬಲಿಯ ವಿರುದ್ಧ ಭಗವಾನ್ ವಿಷ್ಣುವಿನ ವಿಜಯವನ್ನು ಸ್ಮರಿಸುವ ದಿನವಾಗಿದೆ. ಹಾಗೆಯೇ ಜಗತ್ತಿಗೆ ರಾಕ್ಷಸ ರಾಜ ಬಲಿಯು ಹಿಂದಿರುಗುವ ಕ್ಷಣವನ್ನು ನೆನಪಿಸುತ್ತದೆ. ಈ ದಿನದಂದು ಶ್ರೀಕೃಷ್ಣನು ಗೋಕುಲದ ನಿವಾಸಿಗಳನ್ನು ಇಂದ್ರನ ಕೋಪದಿಂದ ಮುಕ್ತಗೊಳಿಸಿದನು ಎನ್ನುವ ಕಥೆಯಿದೆ.
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564
ಬಲಿಪಾಡ್ಯಮಿ 2024 ಶುಭಮುಹೂರ್ತ:
– ಬಲಿಪಾಡ್ಯಮಿ 2024 ದಿನಾಂಕ: 2024 ನವೆಂಬರ್ 2ರಂದು ಶನಿವಾರ
– ಬಲಿ ಪೂಜೆ ಪ್ರಾತಃ ಕಾಲ ಮುಹೂರ್ತ: 2024 ನವೆಂಬರ್ 2ರಂದು ಶನಿವಾರ ಮುಂಜಾನೆ 06:14 ರಿಂದ 08:33
– ಅವಧಿ: 02 ಗಂಟೆ 20 ನಿಮಿಷಗಳು
– ಗೋವರ್ಧನ ಪೂಜೆ 2024: ನವೆಂಬರ್ 2ರಂದು ಶನಿವಾರ
– ಬಲಿ ಪೂಜೆ ಸಾಯಂಕಾಲ ಮುಹೂರ್ತ: 2024 ನವೆಂಬರ್ 2ರಂದು ಮಧ್ಯಾಹ್ನ 03:33 ರಿಂದ ಸಂಜೆ 05:53
– ಅವಧಿ: 02 ಗಂಟೆಗಳು 20 ನಿಮಿಷಗಳು
– ಪ್ರತಿಪದೆ ತಿಥಿ ಪ್ರಾರಂಭ: 2024 ನವೆಂಬರ್ 1ರಂದು ಸಂಜೆ 6:16
– ಪ್ರತಿಪಾದ ತಿಥಿ ಮುಕ್ತಾಯ: 2024 ನವೆಂಬರ್ 2ರಂದು ಶನಿವಾರ ರಾತ್ರಿ 8:21 ರವರೆಗೆ.
ಬಲಿಪಾಡ್ಯಮಿ ಹಿನ್ನೆಲೆ:
ಬಲಿಪಾಡ್ಯಮಿ ದಿನ ರಾಜ ಬಲೀಂದ್ರನನ್ನು ಪೂಜಿಸುವ ಪದ್ಧತಿಯಿದೆ. ರಾಜ ಬಲೀಂದ್ರ ಸದ್ಗುಣಶೀಲ ರಾಜನಾಗಿದ್ದು, ತನ್ನ ಪ್ರಜೆಗಳನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದನು. ಆದರೆ, ಆತನ ಸುತ್ತಮುತ್ತಲಿನ ಜನರು ರಾಕ್ಷಸ ಪ್ರವೃತ್ತಿಯನ್ನು ಹೊಂದಿದವರಾಗಿದ್ದರು. ಅವರಿಂದ ಜನರು ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಇದಕ್ಕೆ ಪ್ರತ್ಯಕ್ಷವಾಗಿ ಅಲ್ಲದಿದ್ದರೂ ಪರೋಕ್ಷವಾಗಿ ರಾಜ ಬಲಿ ಕಾರಣನಾಗಿದ್ದ. ಈ ದುಷ್ಟರ ಸಂಹಾರಕ್ಕಾಗಿ ವಿಷ್ಣು ವಾಮನ ಅವತಾರವನ್ನು ತಾಳಿ ಭೂಮಿಗೆ ಬರುತ್ತಾನೆ. ಹಾಗೂ ರಾಜ ಬಲಿಯ ಬಳಿಗೆ ಬಂದು ದಾನವನ್ನು ಕೇಳುತ್ತಾನೆ. ಬಲೀಂದ್ರ ರಾಜ ಕೊಡುಗೈ ದಾನಿ. ವಾಮನನಿಗೆ ನಿನಗೆ ಏನು ಬೇಕೆಂದು ಕೇಳು ಎನ್ನುತ್ತಾನೆ. ಆಗ ವಾಮನ ನನಗೆ ಮೂರು ಹೆಜ್ಜೆಗಳನ್ನಿಡುವಷ್ಟು ಜಾಗ ಕೊಡು ಎಂದು ಕೇಳುತ್ತಾನೆ.
ಕೇವಲ ಮೂರು ಹೆಜ್ಜೆಗಳನ್ನಿಡುವಷ್ಟು ಜಾಗವೇ ಎಂದು ಹಿಂದೆಮುಂದೆ ಯೋಚಿಸದೆ ಬಲೀಂದ್ರ ಒಪ್ಪುತ್ತಾನೆ. ವಿಷ್ಣು ವಾಮನನಿಂದ ತನ್ನ ತ್ರಿವಿಕ್ರಮ ರೂಪದಲ್ಲಿ ಒಂದು ಹೆಜ್ಜೆಯನ್ನು ಭೂಲೋಕದಲ್ಲಿ, ಇನ್ನೊಂದು ಹೆಜ್ಜೆಯನ್ನು ಸ್ವರ್ಗ ಲೋಕದಲ್ಲಿ ಮೂರನೇ ಹೆಜ್ಜೆ ಎಲ್ಲಿಡುವುದು ಎಂದು ಕೇಳಿದಾಗ ತನ್ನ ತಲೆ ಮೇಲೆ ಇಡುವಂತೆ ಬಲೀಂದ್ರ ಹೇಳುತ್ತಾನೆ. ವಿಷ್ಣುದೇವ ಮೂರನೇ ಹೆಜ್ಜೆಯನ್ನು ಬಲೀಂದ್ರನ ತಲೆ ಮೇಲೆ ಇಟ್ಟಾಗ ಪಾತಾಳ ಲೋಕಕ್ಕೆ ಇಳಿದು ಹೋಗುತ್ತಾನೆ. ಅವನ ಜೊತೆ ಉಳಿದ ರಾಕ್ಷಸರೂ ಪಾತಾಳಕ್ಕೆ ಇಳಿಯುತ್ತಾರೆ. ಹೀಗೆ ಪಾತಾಳ ಲೋಕಕ್ಕೆ ಹೋದ ಬಲೀಂದ್ರನನ್ನು ವರ್ಷಕ್ಕೆ ಒಂದು ದಿನ ನೆನೆದು ಭೂಮಿಗೆ ಕರೆಯುವ ದಿನವೇ ಬಲಿಪಾಡ್ಯಮಿ.
ಬಲಿ ಪಾಡ್ಯಮಿ ಪೂಜೆ ವಿಧಾನ:
ಬಲಿ ಪಾಡ್ಯಮಿಯಂದು ಗೋಮಯದಿಂದ ತುಳಸಿಕಟ್ಟೆಯ ಸಮೀಪ ಏಳುಸುತ್ತಿನ ಕೋಟೆಯನ್ನು ಕಟ್ಟಲಾಗುತ್ತದೆ. ಈ ಕೋಟೆಗೆ ಗಣಪತಿಯನ್ನು ಕಾವಲಿಗೆ ನಿಲ್ಲಿಸಲಾಗುತ್ತದೆ. ಮನೆ ಬಾಗಿಲಿನ ಹೊಸ್ತಿಲಿಗೆ ಯಾವುದೇ ದುಷ್ಟಶಕ್ತಿಗಳು ಒಳಪ್ರವೇಶಿಸದಂತೆ ಸಗಣಿಯಿಂದ ಮಾಡಿದ ಸಣ್ಣ ಗೊಂಬೆಗಳನ್ನು ಇಡಲಾಗುತ್ತದೆ. ಸಂಜೆ ಗೋಧೂಳಿ ಲಗ್ನದ ಸಮಯದಲ್ಲಿ ಮನೆಯ ಸದಸ್ಯರೆಲ್ಲಾ ಬಲೀಂದ್ರನಿಗೆ ಪೂಜೆ ಮಾಡುತ್ತಾರೆ. ತುಳುನಾಡು ಮತ್ತು ಕರಾವಳಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಬಲೀಂದ್ರನನ್ನು ರಚಿಸಿ, ತುಳಸಿ ಕಟ್ಟೆಯ ಸಮೀಪ ನಿಲ್ಲಿಸಿ ಬಲೀಂದ್ರ, ಬಲೀಂದ್ರ, ಕೂ… ಕೂ.. ಬಲೀಂದ್ರ ಎಂದು ಮೂರು ಬಾರಿ ಕರೆದು ಪೂಜೆ ಮಾಡಿ ಪಾತಾಳ ಲೋಕಕ್ಕೆ ಕಳುಹಿಸಿಕೊಡುವ ಸಂಪ್ರದಾಯವನ್ನು ಪಾಲಿಸುತ್ತಾರೆ.
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564
ಮಲೆನಾಡಿನಲ್ಲಿ ಬಲಿಪಾಡ್ಯಮಿಯಂದು ಬೆಳಗ್ಗೆಯೇ ದನದ ಕೊಟ್ಟಿಗೆಯನ್ನು ತೊಳೆದು, ಸೆಗಣಿಯಿಂದ ಗಣಪತಿಯನ್ನು ಮಾಡಿ, ಹೂವಿನಿಂದ ಸಿಂಗರಿಸುತ್ತಾರೆ. ಕಂಚಿಕಡ್ಡಿ, ಬ್ರಹ್ಮದಂಡೆ ಗಿಡಗಳನ್ನು ತಂದು ಜಡೆಯಂತೆ ಹಣೆದು ಕೊಟ್ಟಿಗೆಯಲ್ಲಿ ಸೆಗಣಿ ಬೆನಕನ ಪಕ್ಕದಲ್ಲಿ ಇಡುತ್ತಾರೆ. ಎಲ್ಲಾ ಹಸುಗಳ ಮೈತೊಳೆದು ಹೂಹಾರ ಹಾಕಿ ಪೂಜಿಸುತ್ತಾರೆ. ಹಣ್ಣು ತುಂಬಿದ ಎಡೆಯನ್ನು ನೈವೇದ್ಯ ಮಾಡುತ್ತಾರೆ.
ಈ ರೀತಿಯಾಗಿ ಬಲೀಂದ್ರನಿಗೆ ಪೂಜೆಯನ್ನು ಮಾಡುವ ಸಂಪ್ರದಾಯ ಹಾಗೂ ಪದ್ಧತಿ ನಮ್ಮಲ್ಲಿದೆ. ಬಲೀಂದ್ರನ ಆಶೀರ್ವಾದವನ್ನು ಪಡೆದುಕೊಂಡಿರುವ ವ್ಯಕ್ತಿಗೆ ಜೀವನದಲ್ಲಿ ಹಣಕಾಸಿನ ಸಮಸ್ಯೆಗಳು ಎದುರಾಗುವುದಿಲ್ಲ ಎನ್ನುವ ನಂಬಿಕೆಯೂ ಇದೆ.