ಬಳ್ಳಾರಿ : ಇಂದು ರಾಜ್ಯಾದ್ಯಂತ ಬೆಳ್ಳಂ ಬೆಳಿಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದು, ವಿವಿಧಡೆ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಸರ್ಕಾರಿ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಇದೀಗ ಬಳ್ಳಾರಿ ಜಿಲ್ಲೆಯಲ್ಲಿ ತಾಲೂಕು ಬಿಸಿಎಂ ಹಾಸ್ಟೆಲ್ ಅಧಿಕಾರಿ ಲೋಕೇಶ್ ಮನೆ ಮೇಲೆ ದಾಳಿ ಮಾಡಿದ್ದು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಹೌದು ಬಳ್ಳಾರಿ ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು ತಾಲೂಕು ಬಿಸಿಎಂ ಅಧಿಕಾರಿ ಲೋಕೇಶ್ ಮನೆಯ ಮೇಲೆ ದಾಳಿ ಮಾಡಿದ್ದಾರೆ. ಅಲ್ಲದೆ ಅಧಿಕಾರಿ ಲೋಕೇಶ್ ಸ್ನೇಹಿತರ ಮನೆಗಳ ಮೇಲು ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಳ್ಳಾರಿಯ ರಾಮಾಂಜನೇಯ ನಗರದಲ್ಲಿರುವ ಲೋಕೇಶ್ ನಿವಾಸದ ಮೇಲೆ ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಈ ಹಿಂದೆ ವಾರ್ಡನ್ ಆಗಿದ್ದ ಲೋಕೇಶ್ ಇದೀಗ ತಾಲೂಕು ಬಿಸಿಎಂ ಹಾಸ್ಟೆಲ್ ಅಧಿಕಾರಿಯಾಗಿದ್ದಾನೆ.
ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಅಲ್ಲದೇ ಲೋಕೇಶ್ ಹುಟ್ಟುಹಬ್ಬದ ವೇಳೆ ಹಾಸ್ಟೆಲ್ ವಿದ್ಯಾರ್ಥಿನಿಯರಿಂದ ಹೂವಿನ ಮಳೆ ಸುರಿಸಿದ್ದರು. ಇದೆ ವೇಳೆ ಬರ್ತಡೆ ಆಚರಣೆ ವಿಚಾರವಾಗಿ ಕಿರುಕುಳ ಆರೋಪ ಕೂಡ ಕೇಳಿಬಂದಿತ್ತು ವಿದ್ಯಾರ್ಥಿಯರಿಗೆ ಹಾಗೂ ಹಾಸ್ಟೆಲ್ ಮಹಿಳಾ ಸಿಬ್ಬಂದಿಗಳಿಗೂ ಕೂಡ ಲೋಕೇಶ್ ಕಿರುಕುಳ ನೀಡಿದ ಎನ್ನಲಾಗಿದೆ. ಲೋಕೇಶ್ ವಿರುದ್ಧ ಸಾಲ ಸಾಲು ಆರೋಪ ಹಿನ್ನೆಲೆ ಇದೀಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.