ಬಳ್ಳಾರಿ : ನಿಂತಿದ್ದ ಲಾರಿಗೆ ಟೆಂಪೋ ಟ್ರಾಕ್ಸಿ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುಲಿಕೆರೆ ಕ್ರಾಸ್ ನ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ.
ಮೃತನನ್ನು . ಕೃಷ್ಟಪ್ಪ(62) ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ 10 ಜನಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದೆ. ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಟೆಂಪೋ ಟ್ರಾಕ್ಸಿ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ತಕ್ಷಣ ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ
ಕಲ್ಬುರ್ಗಿಯಿಂದ ನಿಶ್ಚಿತಾರ್ಥ ಮುಗಿಸಿಕೊಂಡು ಚಿಕ್ಕಬಳ್ಳಾಪುರದ ಕಡೆಗೆ ತೆರಳುತ್ತಿದ್ದ ಈ ಒಂದು ಟಿಟಿ ವಾಹನದಲ್ಲಿ ಮಕ್ಕಳು ಸೇರಿದಂತೆ 16 ಜನರು ಇದ್ದರು. ಗಂಗಾವತಿಯಿಂದ ಮೈಸೂರಿಗೆ ತೆರಳುತ್ತಿದ್ದ ಲಾರಿ ಕೆಟ್ಟು ನಿಂತಿತ್ತು. ಹೀಗೆ ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ ಹೊಡೆದಿದೆ. ತಕ್ಷಣ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.