ಬಳ್ಳಾರಿ: ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ ಮೋಕಾ-ಮೀನಹಳ್ಳಿ ಮಾರ್ಗದ ಲಿಲೋ ನಿರ್ಮಾಣ ಕಾರ್ಯವನ್ನು ತುರ್ತಾಗಿ ಕೈಗೆತ್ತಿಕೊಳ್ಳುತ್ತಿರುವುದರಿಂದ 110/11ಕೆ.ವಿ ಮೀನಹಳ್ಳಿ ಉಪಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಲ್ಲಾ 11ಕೆ.ವಿ ಮಾರ್ಗಗಳಲ್ಲಿ ಮೇ 20 ರಂದು ಬೆಳಿಗ್ಗೆ 07 ರಿಂದ ಸಂಜೆ 07 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಜೆಸ್ಕಾಂನ ಕಾರ್ಯ ಮತ್ತು ಪಾಲನಾ ಗ್ರಾಮೀಣ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಮೋಹನಬಾಬು ಅವರು ತಿಳಿಸಿರುತ್ತಾರೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು
ಎಫ್-2 ಚಾಗನೂರು ಐಪಿ ಫೀಡರ್ ಮಾರ್ಗದ ಮೀನಹಳ್ಳಿ, ಶಿಡಿಗಿನಮೋಳ, ಕೆ.ವೀರಾಪುರ, ಕಾರೆಕಲ್ಲು, ಚಾಗನೂರು. ಎಫ್-1 ಮೀನಹಳ್ಳಿ/ ಕೆ.ವೀರಾಪುರ ಎನ್.ಜೆ.ವೈ ಮಾರ್ಗದ ಮೀನಹಳ್ಳಿ, ಶಿಡಿಗಿನಮೋಳ, ಕೆ.ವೀರಾಪುರ ಕಾರೆಕಲ್ಲು ಗ್ರಾಮ.
ಎಫ್-4 ಎ.ಟಿ.ಪಿ.ಎಸ್ ಚೆಳ್ಳಗುರ್ಕಿ ಮಾರ್ಗದ ಹಗರಿ, ಪಿ.ಡಿ.ಹಳ್ಳಿ, ಕಗ್ಗಲ್, ಲಿಂಗದೇವನಹಳ್ಳಿ, ಯಾಳ್ಪಿ, ಜೋಳದರಾಶಿ, ಚೆಳ್ಳಗುರ್ಕಿ ಗ್ರಾಮ. ಎಫ್-5 ಹಗರಿ ಐಪಿ ಫೀಡರ್ ಮಾರ್ಗದ ಹಗರಿ, ಪಿ.ಡಿ.ಹಳ್ಳಿ, ಕಗ್ಗಲ್, ಲಿಂಗದೇವನಹಳ್ಳಿ, ಯಳ್ಪಿ, ಜೋಳದರಾಶಿ, ಚೆಳ್ಳಗುರ್ಕಿ ಕೃಷಿ ಪ್ರದೇಶಗಳು.
ಎಫ್-6 ಫೀಡರ್ ಮಾರ್ಗದ ಎ-ಒನ್ ಕೋಲ್ಡ್ ಸ್ಟೋರೆಜ್, ಮೆ.ಜಾನಕಿ ಕಾರ್ಪೋ,ಪ್ರೈ.ಲಿ, ಮೆ.ಬಸಾಯಿ ಸ್ಟೀಲ್ ಪ್ರೈ.ಲಿ, ಮೆ.ಕ್ಲೀನ್ ಮ್ಯಾಕ್ಸ್ ಸೊಲಾರ್, ಕ್ಲೀನ್ ಸೋಲಾರ್, ಮೆ.ಮೌರ್ಯ ಸೀಲಾಮ್ ಸೋಲಾರ್ ಐ.ಪಿ.ಪಿ ಸೇರಿ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ ಕುಡುತಿನಿ ಉಪ-ಕೇಂದ್ರದ ಪ್ರದೇಶದಲ್ಲಿ ಶಿಥಿಲಗೊಂಡ ಜೋಡಿ ವಿದ್ಯುತ್ ಕಂಬಗಳ ಬದಲಾಯಿಸುವ ಕಾರ್ಯವನ್ನು ತುರ್ತಾಗಿ ಕೈಗೆತ್ತಿಕೊಳ್ಳುತ್ತಿರುವುದರಿಂದ 110/11 ಕೆ.ವಿ ಕುಡುತಿನಿ ಉಪ-ವಿದ್ಯುತ್ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ 11 ಕೆ.ವಿ ಮಾರ್ಗಗಳಲ್ಲಿ ಮೇ 20 ರಂದು ಬೆಳಗ್ಗೆ 08 ರಿಂದ ಸಂಜೆ 06 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ನಿಲುಗಡೆಯಾಗಲಿದೆ ಎಂದು ಜೆಸ್ಕಾಂನ ಕಾರ್ಯ ಮತ್ತು ಪಾಲನಾ ಗ್ರಾಮೀಣ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಮೋಹನಬಾಬು ಅವರು ತಿಳಿಸಿರುತ್ತಾರೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು
ಎಫ್-3 ಫೀಡರ್‍ನ 400 ಕೆ.ಪಿ.ಟಿ.ಸಿಎಲ್, ಬಿ.ಪಿ.ಎಸ್ ಫೀಡರ್ ಮಾರ್ಗದ 400 ಕೆ.ವಿ.ಎ ಬಿ.ಪಿ.ಎಸ್ ಕುಡುತಿನಿ, ಎಫ್-4 ಫೀಡರ್‍ನ ಕುಡುತಿನಿ ನಗರ ಫೀಡರ್ ಮಾರ್ಗದ ಕುಡುತಿನಿ ನಗರ, ವೇಣಿ ವೀರಾಪುರ ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BREAKING: ರಾಜ್ಯ ಸರ್ಕಾರದಿಂದ ‘ಅಭಿವೃದ್ಧಿ ಕಾಮಗಾರಿ’ಗಳಿಗೆ ‘ಮಾದರಿ ನೀತಿ ಸಂಹಿತೆ’ಯಿಂದ ವಿನಾಯ್ತಿ ನೀಡಿ ಆದೇಶ