ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110 ಕೆ.ವಿ ಅಲ್ಲಿಪುರ-ಬಳ್ಳಾರಿ ಉತ್ತರ ಮಾರ್ಗದ ಲಿಲೊ ಕಾಮಗಾರಿಯನ್ನು ತುರ್ತಾಗಿ ಕೈಗೆತ್ತಿಕೊಳ್ಳುತ್ತಿರುವುದರಿಂದ 110/110 ಕೆ.ವಿ ಸೋಮಸಮುದ್ರ ವಿದ್ಯುತ್ ಉಪಕೇಂದ್ರದ 11 ಕೆ.ವಿ ಮಾರ್ಗದಲ್ಲಿ ಮಾ.21 ರಂದು ಬೆಳಿಗ್ಗೆ 8 ರಿಂದ ಮಧ್ಯಾಹ 3 ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಗ್ರಾಮೀಣ ಜೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರಾದ ಮೋಹನ್ ಬಾಬು ಅವರು ತಿಳಿಸಿದ್ದಾರೆ.
ನಾಳೆ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
ಎಫ್-2 ಐ.ಪಿ ಸೆಟ್ ಫೀಡರ್ ಸೋಮಸಮುದ್ರ ಮಾರ್ಗದ ಸೋಮಸಮುದ್ರ ವಕ್ರಾಣಿ ಕ್ಯಾಂಪ್, ಲಕ್ಷ್ಮಿನಗರ ಕ್ಯಾಂಪ್, ವೀರಾಂಜಿನೇಯ್ಯ ಕ್ಯಾಂಪ್, ಕೋಳೂರು, ಮದಿರೆ, ಕೊಳಗಲ್ಲು, ಭಾಗ್ಯ ನಗರ ಕ್ಯಾಂಪ್, ಮಲ್ಲಾರೆಡ್ಡಿ ಕ್ಯಾಂಪ್, ಕೃಷಿ ಪ್ರದೇಶಗಳು. ಎಫ್-3/11 ಶ್ರೀಧರಗಡ್ಡೆ ಎನ್.ಜೆ.ವೈ ಫೀಡರ್ ಮಾರ್ಗದ ಸೋಮಸಮುದ್ರ ವಕ್ರಾಣಿ ಕ್ಯಾಂಪ್, ಲಕ್ಷ್ಮಿನಗರ ಕ್ಯಾಂಪ್, ವೀರಾಂಜಿನೇಯ್ಯ ಕ್ಯಾಂಪ್, ಕೋಳೂರು, ಮದಿರೆ, ಕೊಳಗಲ್ಲು, ಭಾಗ್ಯ ನಗರ ಕ್ಯಾಂಪ್, ಮಲ್ಲಾರೆಡ್ಡಿ ಕ್ಯಾಂಪ್ ಹಾಗೂ ಗ್ರಾಮಗಳು. ಕೋಳೂರು ಕ್ರಾಸ್, ದಮ್ಮೂರು, ಡಿ.ಕಗ್ಗಲ್, ವಿ.ಟಿ ಕ್ಯಾಂಪ್ ಸೇರಿ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಜನ ಅಧಿಕಾರ್ ಪಕ್ಷ’ವನ್ನು ‘ಕಾಂಗ್ರೆಸ್ ಪಕ್ಷ’ದೊಂದಿಗೆ ವಿಲೀನಗೊಳಿಸಿದ ‘ಪಪ್ಪು ಯಾದವ್’ | Lok Sabha elections
`EVM’ ಪ್ರಜಾಪ್ರಭುತ್ವ ಪ್ರಕ್ರಿಯೆಯ ಪಾರದರ್ಶಕತೆಗೆ ಸಾಕ್ಷಿಯಾಗಿದೆ : ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್