ಬಳ್ಳಾರಿ : ಕಂಪ್ಲಿ ಜೆಸ್ಕಾಂ ವ್ಯಾಪ್ತಿಯ 110/11ಕೆವಿ ಕಂಪ್ಲಿ ಉಪಕೇಂದ್ರ ಹಾಗೂ ಇಟ್ಟಿಗಿ 110/11ಕೆವಿ ಉಪಕೇಂದ್ರದ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುದರಿಂದ ಡಿ.23 ರಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ಕಂಪ್ಲಿ ನಗರ, ನಂ-10 ಮುದ್ದಾಪುರ, ಕಣಿವೆ ತಿಮ್ಮಾಪುರ, ರಾಮಸಾಗರ, ದೇವಸಮುದ್ರ, ಹಂಪಾದೇವನಳ್ಳಿ, ಜಾಯಿಗನೂರು, ಕುಂಬಾರ್ ಕ್ಯಾಂಪ್, ಕೃಷನಗರ ಕ್ಯಾಂಪ್, ಬೆಳಗೋಡುಹಾಳು, ಸಣಾಪುರ, ಇಟ್ಟಿಗಿ, ನಂ-2 ಮುದ್ದಾಪುರ, ಸಣಾಪುರ, ಅರಳಹಳ್ಳಿ, ಬಸವೇಶ್ವರ ಕ್ಯಾಂಪ್, ಮಾರೆಮ್ಮ ಕ್ಯಾಂಪ್ ಮತ್ತು ಎಫ್-7 ಸಣಾಪುರ ಮಾರ್ಗದಲ್ಲಿಯೂ ಸಹ ವಿದ್ಯುತ್ ವ್ಯತ್ಯಯವಾಗಲಿದೆ ಹಾಗೂ ಐಪಿ ಸೆಟ್ ಮಾರ್ಗಗಳಲ್ಲಿ ಬೆಳಿಗ್ಗೆ 4 ಗಂಟೆಯಿಂದ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ; ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಇಚ್ಚಿಸುವ ಪರಿಶಿಷ್ಟ ಪಂಗಡದ ಯುವಕ ಮತ್ತು ಯುವತಿಯರಿಂದ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಡಿ.23 ರ ವರೆಗೆ ವಿಸ್ತರಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರಬೇಕು, 18 ರಿಂದ 45 ವರ್ಷ ವಯೋಮಾನದವರಾಗಿರಬೇಕು, ಕುಟುಂಬದ ಆದಾಯ ರೂ.2.50 ಲಕ್ಷ ಒಳಗಿರಬೇಕು, ಅಲೆಮಾರಿ, ಅರೆ-ಅಲೆಮಾರಿ, ಸೂಕ್ಷö್ಮ, ಅತೀ ಸೂಕ್ಷö್ಮ ಪರಿಶಿಷ್ಟ ವರ್ಗದ ಸಮುದಾಯದ ಯುವಕ ಮತ್ತು ಯುವತಿಯರಿಗೆ ಆದ್ಯತೆ ನೀಡಲಾಗುವುದು.
ಅರ್ಜಿಗಳನ್ನು ಬಳ್ಳಾರಿ, ಸಂಡೂರು, ಸಿರುಗುಪ್ಪ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ನಲ್ಲಚೇರುವು ಪ್ರದೇಶದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ವ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ
Watch Video: ನಟ ಅಲ್ಲು ಅರ್ಜುನ್ ಮನೆ ಮುಂದೆ ಹೈಡ್ರಾಮಾ: ಸ್ಥಳದಲ್ಲಿ ಬಿಗುವಿನ ವಾತಾವರಣ | Actor Allu Arjun