ಬಳ್ಳಾರಿ : ಎರಡು ದಿನದ ಹಿಂದೆ ನಾಪತ್ತೆಯಾಗಿದ್ದ ಬಾಲಕ ಬಾವಿಯಲ್ಲಿ ಶವವಾಗಿ ಪತ್ತೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರವಿಹಾಳ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.. ರವಿಹಾಳ ಗ್ರಾಮದ ವೀರೇಶ್ ಪುತ್ರ ಸಿರಿ (4) ಶವವಾಗಿ ಪತ್ತೆಯಾಗಿದ್ದಾನೆ.
ಸಿರಿಗಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು. ಕುಟುಂಬ ಮತ್ತು ಗ್ರಾಮಸ್ಥರು ಇಡೀ ಗ್ರಾಮವನ್ನೇ ಹುಡುಕಾಡಿದರು ಪತ್ತೆಯಾಗಿರಲಿಲ್ಲ. ನಿನ್ನೆ ಸಂಜೆ ಬಾವಿಯಲ್ಲಿ ಸ್ಥಳೀಯರು ಶವ ತೇಲುತ್ತಿರುವುದನ್ನು ನೋಡಿದ್ದಾರೆ. ಘಟನಾ ಸ್ಥಳಕ್ಕೆ ಸದ್ಯ ಸಿರುಗುಪ್ಪಾ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದೀಗ ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.