ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಟಾಕಿ ನಿಷೇಧ ಕಾನೂನು ಮುಂದುವರೆದಿದೆ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.
ದೀಪಾವಳಿ ಹಬ್ಬದ ವೇಳೆ ದೆಹಲಿಯಲ್ಲಿ ಪಟಾಕಿ ಸಿಡಿಸುವಂತಿಲ್ಲ, ಪಟಾಕಿ ನಿಷೇಧ ಹಿಂಪಡೆಯಲು ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ಹಿನ್ನೆಲೆ ದೆಹಲಿಯಲ್ಲಿ ಪಟಾಕಿ ನಿಷೇಧ ಮುಂದುವರೆಯಲಿದೆ. ದೆಹಲಿಯಲ್ಲಿ ಎಲ್ಲಾ ರೀತಿಯ ಪಟಾಕಿಗಳ ಉತ್ಪಾದನೆ, ಸಂಗ್ರಹಣೆ, ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಇದೀಗಒಂದು ವೇಳೆ ಪಟಾಕಿ ಸಿಡಿಸಿದರೆ ಆರು ತಿಂಗಳಿನವರೆಗೆ ಜೈಲು ಶಿಕ್ಷೆ ಹಾಗೂ 200 ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ಪರಿಸರ ಸಚಿವ ಗೋಪಾಲ್ ರಾಯ್ ತಿಳಿಸಿದ್ದಾರೆ. ದೆಹಲಿಯಲ್ಲಿ ಪಟಾಕಿ ಉತ್ಪಾದನೆ, ಶೇಖರಣೆ ಮತ್ತು ಮಾರಾಟಕ್ಕೆ 5000 ರೂ ವರೆಗೆ ದಂಡ ವಿಧಿಸಲಾಗುತ್ತದೆ ಎಂದು ಪರಿಸರ ಸಚಿವ ಗೋಪಾಲ್ ರಾಯ್ ಎಚ್ಚರಿಕೆ ನೀಡಿದ್ದಾರೆ.
ಕಳೆದ ವರ್ಷದಂತೆ ಈ ಬಾರಿಯೂ ದೆಹಲಿಯ ಜನರನ್ನು ಮಾಲಿನ್ಯದ ಅಪಾಯದಿಂದ ರಕ್ಷಿಸಲು, ಎಲ್ಲಾ ರೀತಿಯ ಪಟಾಕಿಗಳ ಉತ್ಪಾದನೆ, ಸಂಗ್ರಹಣೆ, ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ, ಇದರಿಂದ ಜನರ ಜೀವಗಳನ್ನು ಉಳಿಸಬಹುದು. ಈ ಬಾರಿ ದೆಹಲಿಯಲ್ಲಿ ಆನ್ಲೈನ್ ಮಾರಾಟ ಮತ್ತು ಪಟಾಕಿಗಳ ವಿತರಣೆಯನ್ನು ಸಹ ನಿಷೇಧಿಸಲಾಗಿದೆ. ಈ ನಿಷೇಧವು ಜನವರಿ 1, 2023 ರವರೆಗೆ ಜಾರಿಯಲ್ಲಿರುತ್ತದೆ.
ಜನವರಿ 1 ರವರೆಗೆ ರಾಷ್ಟ್ರ ರಾಜಧಾನಿಯಲ್ಲಿ ಎಲ್ಲಾ ರೀತಿಯ ಪಟಾಕಿಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗುವುದು ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ ಹೇಳಿದ್ದರು. . ಆನ್ಲೈನ್ನಲ್ಲಿ ಪಟಾಕಿ ಮಾರಾಟಕ್ಕೂ ನಿಷೇಧವಿದೆ ಎಂದು ಇತ್ತೀಚೆಗೆ ಸ್ಪಷ್ಟನೆ ನೀಡಿದ್ದರು.
BIGG NEWS : ಹಾಸನಾಂಬೆ ದೇವಿ ದರ್ಶನಕ್ಕೆ ಪತ್ನಿಯನ್ನು ಎತ್ತಿಕೊಂಡು ಬಂದ ಪತಿ | Hasanambe Temple