ಶಿವಮೊಗ್ಗ: ಜಿಲ್ಲೆಯ ಆಗುಂಬೆ ಘಾಟಿ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ಮಳೆಗಾಲದ ಹಿನ್ನಲೆಯಲ್ಲಿ ನಿಷೇಧ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಇಂದು ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಅಧಿಸೂಚನೆ ಹೊರಡಿಸಿದ್ದು, ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರೀ ಮಳೆಯಿಂದಾಗಿ ಮತ್ತು ಭಾರೀ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವ ಇರುವುದರಿಂದ ದಿನಾಂಕ 27-06-2024ರ ಇಂದಿನಿಂದ ದಿನಾಂಕ 15-09-2024ರವರೆಗೆ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ ಅಂತ ತಿಳಿಸಿದ್ದಾರೆ.

ಅಗುಂಬೆ ಘಾಟಿ ರಸ್ತೆಯಲ್ಲಿ ಭಾರೀ ವಾಹನ ಸಂಚಾರ ನಿಷೇಧಿಸಿರುವುದರಿಂದ ತಿರ್ಥಹಳ್ಳಿ ಟು ಉಡುಪಿಗೆ ತೆರಳುವಂತ ಭಾರೀ ವಾಹನಗಳು ತೀರ್ಥಹಳ್ಳಿ, ಮಾಸ್ತಿಕಟ್ಟೆ, ಸಿದ್ಧಾಪುರ, ಕುಂದಾಪುರ, ಉಡುಪಿಗೆ ತೆರಳುವುದು. ಉಡುಪಿಯಿಂದ ತೀರ್ಥಹಳ್ಳಿಗೆ ಉಡುಪಿ, ಕುಂದಾಪುರ, ಸಿದ್ಧಾಪುರ, ಮಾಸ್ತಿಕಟ್ಟೆ, ತೀರ್ಥಹಳ್ಳಿಗೆ ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ತಿಳಿಸಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

ತುರ್ತು ಪರಿಸ್ಥಿತಿ ಪ್ರಸ್ತಾಪ ತಪ್ಪಿಸಬಹುದಿತ್ತು: ಲೋಕಸಭಾ ಸ್ಪೀಕರ್ ಭೇಟಿ ಮಾಡಿದ ರಾಹುಲ್ ಗಾಂಧಿ

ಕುವೆಂಪು ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವ : ಸ್ನಾತಕ/ಸ್ನಾತಕೋತ್ತರ ಪದವಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

Share.
Exit mobile version