ಬೆಂಗಳೂರು: ಪಿಎಫ್ ಐ ನಿಷೇಧ ಅತ್ಯಂತ ಸಮರ್ಥ ನಿರ್ಧಾರ ಮತ್ತು ಇದು ಸ್ವಾಗತಾರ್ಹ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರಕ್ಕೆ ಧನ್ಯವಾದ ತಿಳಿಸುತ್ತೇನೆ.
ಪಿಎಫ್ ಐ ನಾಯಕರು ಜಾಗತಿಕ ಉಗ್ರ ಸಂಫಟನೆಗಳ ಜೊತೆ ಸಂಬಂಧ ಹೊಂದಿದ್ದರು. ಕೇಂದ್ರ ಸರ್ಕಾರ ಮಹತ್ವದ ಬೆಳೆವಣಿಗೆಯೊಂದರಲ್ಲಿ ಪಿಎಫ್ ಐ ಹಾಗೂ ಅದರ ಇತರ ಸಹವರ್ತಿ ಸಂಸ್ಥೆಗಳನ್ನು ಐದು ವರ್ಷಗಳ ವರೆಗೆ ನಿಷೇಧಿಸಿದೆ. ಇದನ್ನು ನಾನು ಸ್ವಾಗತಿಸುತ್ತೇನೆ ಎಂದು ತಿಳಿಸಿದ್ದಾರೆ.
ದೇಶದಲ್ಲಿ ಕೋಮು ಸೌಹಾರ್ದ ಕೆಡಿಸಿ, ಭಯೋತ್ಪಾದಕ ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದ
ಜಾಗತಿಕ ಉಗ್ರ ಸಂಘಟನೆಗಳ ಜೊತೆ ಸಂಬಂಧ ಹಿನ್ನೆಲೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಿಷೇಧ ಮಾಡಿ ಕೇಂದ್ರ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಅಲ್ಲದೆ ಇತರ ಸಹ ಸಂಸ್ಥೆಗಳ ವಿರುದ್ಧ ಕೇಂದ್ರ ಸರ್ಕಾರ ಸೂಕ್ತ ಕ್ರಮ ತೆಗೆದುಕೊಂಡಿದೆ.