ಬೆಂಗಳೂರು: ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ ಮತ್ತು ಅದರ ಸಹ ವರ್ತಿ ಸಂಘಟನೆಗಳನ್ನು ಐದು ವರ್ಷ ಅವಧಿಗೆ ಕೇಂದ್ರ ಸರ್ಕಾರ ನಿಷೇಧಿಸಲಾಗಿದೆ. PFI ಮೇಲೆ ನಿಷೇಧ ಹೇರಿರುವ ಒಕ್ಕೂಟ ಸರ್ಕಾರದ ನಿರ್ಧಾರ ದೇಶದ ಸಂವಿಧಾನ ಪ್ರಜೆಗಳಿಗೆ ಖಾತರಿ ಪಡಿಸಿರುವ ಹಕ್ಕುಗಳಿಗೆ ನೀಡಿರುವ ಬಲವಾದ ಪೆಟ್ಟು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ. ಫೈಝಿ ಕಿಡಿಕಾರಿದ್ದಾರೆ.

BIGG NEWS : PFI ಬ್ಯಾನ್‌ಗೆ ವಿರೋಧವಿಲ್ಲ, RSS ಮೇಲೂ ಸರ್ಕಾರ ಕ್ರಮ ಕೈಗೊಳ್ಳಿ : ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ

 

ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ಮತ್ತು ಆಡಳಿತದ ವಿರುದ್ಧ ಯಾರೇ ಧ್ವನಿಯೆತ್ತಿದರೂ ಸಹ ಅವರ ವಿರುದ್ಧ ತನಿಖಾ ಸಂಸ್ಥೆಗಳಿಂದ ದಾಳಿ ಮಾಡಿಸಿ ಅವರನ್ನು ಬಂಧಿಸಲಾಗುತ್ತಿದೆ.ವಾಕ್‌ ಸ್ವಾತಂತ್ರ್ಯ ಪ್ರತಿಭಟನೆ ಮತ್ತು ಸಂಘಟನೆಯನ್ನು ಕ್ರೂರವಾಗಿ ಹತ್ತಿಕ್ಕಲಾಗುತ್ತಿದೆ.

BIGG NEWS : PFI ಬ್ಯಾನ್‌ಗೆ ವಿರೋಧವಿಲ್ಲ, RSS ಮೇಲೂ ಸರ್ಕಾರ ಕ್ರಮ ಕೈಗೊಳ್ಳಿ : ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ

 

ಇದು ಸಂವಿಧಾನದ ಮೂಲಭೂತ ಹಕ್ಕುಗಳ ಉಲ್ಲಂಘನೆ. ಈ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ವಿರೋಧ ಪಕ್ಷಗಳನ್ನು ಬೆದರಿಸುವ ಮತ್ತು ಪ್ರತಿರೋಧದ ಧ್ವನಿಯನ್ನು ಅಡಗಿಸುವ ಕೆಲಸ ಮಾಡುತ್ತಿದೆ. ಇದು ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಲ್ಲಿದೆ ಎಂದು ಸ್ಪಷ್ಟವಾಗಿ ತೋರಿಸುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.

Share.
Exit mobile version